Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಬಲಮುರಿ ಕಾವೇರಿ ನದಿಯಲ್ಲಿ ಇಬ್ಬರು ಯುವಕರು ಜಲಸಮಾಧಿ

ಮಂಡ್ಯ: ಕಾವೇರಿ ನದಿಯಲ್ಲಿ (Cauvery River) ಈಜಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ಜರುಗಿದೆ.

ಮೈಸೂರು ನಗರದ (Mysuru City) ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಜಿಲ್ಲೆಯ ಸಂತೆಮರಳಿ ಬಳಿಯ ತಮರವಾಡಿ ಗ್ರಾಮದ ಮೊಹನ್ ಕುಮಾರ್(21) ಹಾಗೂ ಮೈಸೂರಿನ ಜಯಪುರ ಬಳಿಯ ಕೆಳಹಳ್ಳಿ ಗ್ರಾಮದ ರವಿಚಂದ್ರ (21) ಸಾವನಪ್ಪಿದ ಯುವಕರು.

ಈ ಇಬ್ಬರು ಐಟಿಐ ಮುಗಿಸಿ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದು, ತನ್ನ ಮತ್ತೊಬ್ಬ ಸ್ನೇಹಿತ ವಿಕಾಸ್ ಜೊತೆಗೂಡಿ ಮೂವರು ಬಲಮುರಿ ಪ್ರವಾಸಿ ತಾಣಕ್ಕೆ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ – 8 ಜಿಲ್ಲೆಗಳಿಗೆ ಆರೆಂಜ್‌, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌