Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ – ಬೆಂಗಳೂರಿನಲ್ಲಿ ಹತ್ತಾರು ಅವಾಂತರ; ಜನ ಹೈರಾಣು

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಮಳೆರಾಯ ಕಾಲಿಟ್ಟಿದ್ದಾನೆ. ಗುರುವಾರ ಸಂಜೆ ಸುರಿದ ಮಳೆಗೆ ಹತ್ತಾರು ಅವಾಂತರ ಸೃಷ್ಟಿಯಾಗಿದೆ. ಹಲವೆಡೆ ಮರಗಳು ಧರೆಗುರುಳಿದ್ದು, ವಾಹನಗಳನ್ನ ಜಖಂಗೊಂಡಿದೆ.

ರಾಜಾಜಿನಗರ
ರಾಜಾಜಿನಗರದಲ್ಲಿ ಬೃಹದಾಕಾರದ ಮರವೊಂದು ಉರುಳಿಬಿದ್ದು, ಕಾರು ಮತ್ತು ಬೈಕ್‌ಗಳು ಜಖಂಗೊಂಡಿವೆ. ರಾಜಾಜಿನಗರದ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯಲ್ಲಿ ಬೃಹತ್ ಮರ ಧರೆಗೆ ಉರುಳಿತ್ತು. ಇದ್ರಿಂದ ಎರಡು ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದ್ರೆ ಮರ ತೆರವುಗೊಳಿಸುವವರೆಗೆ ಈ ಮಾರ್ಗದಲ್ಲಿ ಸಂಚಾರ ಬಂದ್‌ ಮಾಡಲಾಗಿದೆ.