Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅರ್ಥಪೂರ್ಣವಾಗಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ: ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ

ಮೈಸೂರು: ಜಿಲ್ಲಾಡಳಿತದ ವತಿಯಿಂದ ಜೂನ್ 12 ರಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪಾರ ಜಿಲ್ಲಾಧಿಕಾರಿ ಐಶ್ವರ್ಯ ಆರ್ ಅವರು ಹೇಳಿದರು.ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಜೂನ್ 12 ರಂದು ಬೆಳಿಗ್ಗೆ ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಾಲಯದಿಂದ ಪೀಪಲ್ಸ್ ಪಾರ್ಕ್ ವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳ ಬೃಹತ್…

Read More

ಕಾಂಗ್ರೆಸ್ ದಲಿತರನ್ನು ಮುಖ್ಯಮಂತ್ರಿ ಮಾಡದೆ ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ

ಮೈಸೂರು: ಕಾಂಗ್ರೆಸ್ ದಲಿತರನ್ನು ವೋಟ್ ಬ್ಯಾಂಕ್ ಮಾಡಿಕೊಂಡಿದೆ. ಆದರೆ ದಲಿತರನ್ನು ಮುಖ್ಯಮಂತ್ರಿ ಮಾಡದೆ ವಂಚಿಸುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಕಿಡಿಕಾರಿದರು.ಬುಧವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದರೆ ನಮ್ಮ ತಕರಾರು ಇಲ್ಲ. ಆದರೆ, ದಲಿತರನ್ನು ಸಿಎಂ ಮಾಡುತ್ತೇವೆ ಎಂದು ಕಾಂಗ್ರೆಸ್ ಕಳೆದ ೭೦ ವರ್ಷದಿಂದ ವಂಚನೆ ಮಾಡುತ್ತಿದೆ. ಹಾಗಾಗಿ, ಕಾಂಗ್ರೆಸ್‌ನಲ್ಲಿರುವ ದಲಿತ ನಾಯಕರು ಸೀಡ್‌ಲೆಸ್ ಮತ್ತು ಶುಗರ್ ಲೆಸ್ ರೀತಿ ಆಗಿದ್ದಾರೆ. ಯಾರಿಗೂ ನಮಗೆ…

Read More

ಮೂರು ಪ್ರತ್ಯೇಕ ಪ್ರಕರಣದಲ್ಲಿ ಸಿಡಿಲು ಬಡಿದು ಮೂವರು ವ್ಯಕ್ತಿಗಳು, ಹಸು ಸಾವು

ಮೈಸೂರು; ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ಪ್ರಕರಣದಲ್ಲಿ ಸಿಡಿಲು ಬಡಿದು ಮೂವರು ವ್ಯಕ್ತಿಗಳು ಹಾಗೂ ಹಸುವೊಂದು ಸಾವಿಗೀಡಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಮಾಳದ ಹಾಡಿಯ ನಿವಾಸಿಯಾದ ಅಪ್ಪಯ್ಯ, ಹುಣಸೂರು ತಾಲೂಕಿನ ಹೊಸಪುರ ಗ್ರಾಮದ ನಿವಾಸಿಯಾದ ಯಶೋಧಮ್ಮ ಹಾಗೂ ಮಡಿಕೇರಿ ಜಿಲ್ಲೆಯ ಜಲಾಶಯ ಬಡಾವಣೆಯ ನಿವಾಸಿಯಾದ ರೋಷನ್ (೪೩) ಮೃತಪಟ್ಟವರು.ಮೊದಲ ಪ್ರಕರಣದಲ್ಲಿ ಬುಧವಾರ ಮಧ್ಯಾಹ್ನ ೧ ರವೇಳೆಯಲ್ಲಿ ಹೆಚ್.ಡಿ.ಕೋಟೆ ತಾಲೂಕಿನ ಮಾಳದ ಹಾಡಿಯ ನಿವಾಸಿಯಾದ ಅಪ್ಪಯ್ಯ ಎಂಬುವರು ತಮ್ಮ ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸುತ್ತಿದ್ದ ವೇಳೆ ಗುಡುಗು,…

Read More

ಶ್ರೀಗಣಪತಿ ಸಚ್ಚಿದಾನಂದಸ್ವಾಮಿಯವರ ೮೪ನೇ ಜನ್ಮದಿನೋತ್ಸವ: ದತ್ತ ಪೀಠ ಪ್ರಶಸ್ತಿ ಪ್ರದಾನ

ಮೈಸೂರು: ನಗರದಲ್ಲಿರುವ ಶ್ರೀ ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ೮೪ನೇ ಜನ್ಮದಿನೋತ್ಸವ ಮತ್ತು ನಾದಮಂಟಪದ ೨೮ನೇ ವಾರ್ಷಿಕೋತ್ಸವ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ.ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಗಳು ನಡೆಯುತ್ತಿವೆ.ಗಣ್ಯಾತಿಗಣ್ಯರು,ಪೀಠಾಧಿಪತಿಗಳು ಆಶ್ರಮಕ್ಕೆ ಭೇಟಿ ನೀಡಿ ಗಣಪತಿ ಶ್ರೀಗಳಿಗೆ ಶುಭ ಕೋರಿದ್ದಾರೆ. ಇಂದು ಬುಧವಾರ ಅಧಿಕ ಜೇಷ್ಠ ಶುದ್ಧ ಏಕಾದಶಿ ಪ್ರಯುಕ್ತ ಬೆಳಗ್ಗೆ ೭ ಗಂಟೆಗೆ ರುದ್ರ ಹೋಮ, ಆಯುಷ್ಯ ಹೋಮ, ರುದ್ರಾಭಿಷೇಕ ನೆರವೇರಿಸಲಾಯಿತು೧೦ ಗಂಟೆಗೆ ಪರಮಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರಿಗೆ…

Read More

ರಸಗೊಬ್ಬರ, ಡೀಸೆಲ್, ಪೆಟ್ರೋಲ್ ದರ ಏರಿಕೆ ಹಿಂತೆಗೆದುಕೊಳ್ಳಲು ಆಗ್ರಹಿಸಿ ರೈತರಿಂದ ಪ್ರತಿಭಟನೆ

ಮೈಸೂರು: ರಸಗೊಬ್ಬರ, ಡೀಸೆಲ್, ಪೆಟ್ರೋಲ್ ದರ ಏರಿಕೆಯನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು, ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ಮೈಸೂರು ತಾಲೂಕು ಘಟಕದ ವತಿಯಿಂದ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ನಜರ್‌ಬಾದ್‌ನಲ್ಲಿರುವ ತಹಶೀಲ್ದಾರ್ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ಧರಣಿ ನಡೆಸಿ ನಾನಾ ಘೋಷಣೆಗಳನ್ನು ಕೂಗಿದರು.ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ ಮರಂಕಯ್ಯ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರಕಾರ ರೈತರು ಮತ್ತು ಜನಸಾಮಾನ್ಯರ ಜೀವನದಲ್ಲಿ ಚೆಲ್ಲಾಟವಾಡುತ್ತಿದ್ದು, ಬೆಲೆ ಏರಿಕೆಯಿಂದ ರೈತರು…

Read More