3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕರ್ನಾಟಕ ರಾಜಕಾರಣಕ್ಕೆ ‘ವಿಕಾಸಶೀಲ ಇನ್ಸಾನ್ ಪಾರ್ಟಿ’ ಎಂಟ್ರಿ


ಮೈಸೂರು: ಕರ್ನಾಟಕದ ರಾಜಕೀಯ ರಣರಂಗಕ್ಕೆ ಮತ್ತೊಂದು ಹೊಸ ರಾಜಕೀಯ ಪಕ್ಷ ಅಧಿಕೃತವಾಗಿ ಪದಾರ್ಪಣೆ ಮಾಡಿದೆ ಎಂದು ವಿಐಪಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ಕುಮಾರ್ ಬಿ.ಕೆ ತಿಳಿಸಿದರು.
ಗುರುವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ, ಅಂಬಿಗರ ಚೌಡಯ್ಯ, ಬಸವಣ್ಣ, ಬುದ್ಧ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವಗಳಡಿ ಪಕ್ಷವನ್ನು ಮುನ್ನಡೆಸಲಾಗುವುದು ಎಂದು ಹೇಳಿದರು.
“ರಾಜ್ಯದಲ್ಲಿ ಕೋಲಿ, ಗಂಗಾಮತ ಹಾಗೂ ಬೆಸ್ತ ಸಮಾಜದವರೇ ನಮ್ಮ ಪಕ್ಷದ ಮೂಲ ಮತದಾರರು. ನಮ್ಮ ಸಮಾಜದ ಜನಸಂಖ್ಯೆ ರಾಜ್ಯದಲ್ಲಿ ಬರೋಬ್ಬರಿ 60 ರಿಂದ 70 ಲಕ್ಷದಷ್ಟಿದೆ. ಆದರೆ, ಇಷ್ಟು ದೊಡ್ಡ ಮಟ್ಟದ ಜನಸಂಖ್ಯೆ ಇದ್ದರೂ, ಶಾಸನಸಭೆಯಲ್ಲಿ ನಮ್ಮ ಸಮಾಜದ ಒಬ್ಬನೇ ಒಬ್ಬ ಶಾಸಕನಿಲ್ಲ ಎಂಬುದು ಅತ್ಯಂತ ನೋವಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದರು.
ಕಳೆದ ಹಲವಾರು ದಶಕಗಳಿಂದ ಮೂರು ಪ್ರಮುಖ ರಾಜಕೀಯ ಪಕ್ಷಗಳು ಹಿಂದುಳಿದ ಸಮಾಜಗಳನ್ನು ಕೇವಲ ‘ವೋಟ್ ಬ್ಯಾಂಕ್’ ಆಗಿ ಬಳಸಿಕೊಂಡು, ಅಧಿಕಾರ ಸಿಕ್ಕ ನಂತರ ನಿರ್ಲಕ್ಷ÷್ಯ ಮಾಡುತ್ತಿವೆ. ಪ್ರಬಲ ಸಮುದಾಯಗಳು ಮಾತ್ರ ಅಧಿಕಾರದ ಪಾಲು ಹಂಚಿಕೊಳ್ಳುತ್ತಿದ್ದು, ಅತಿ ಹಿಂದುಳಿದ ಹಾಗೂ ಅಲೆಮಾರಿ ಸಮಾಜಗಳನ್ನು ಮೂಲೆಗುಂಪು ಮಾಡಲಾಗಿದೆ ಎಂದು ಆರೋಪಿಸಿದರು. “ಅಹಿಂದ ಎಂದು ಹೆಸರಿಟ್ಟುಕೊಂಡು, ಹಿಂದುಳಿದವರ ಮತಗಳನ್ನು ಪಡೆದು ಎರಡು ಬಾರಿ ಮುಖ್ಯಮಂತ್ರಿಯಾದವರು, ಅಧಿಕಾರಕ್ಕೆ ಬಂದ ಮೇಲೆ ಕೇವಲ ತಮ್ಮ ಜಾತಿಗೆ ಮಾತ್ರ ಸೀಮಿತರಾದರು. ರಾಜ್ಯದಲ್ಲಿರುವ 154 ಹಿಂದುಳಿದ ಸಮಾಜಗಳು ಹಾಗೂ 46 ಅಲೆಮಾರಿ ಸಮಾಜಗಳಿಗೆ ಅವರು ಮಾಡಿದ್ದೇನು? ಈ ಸಣ್ಣಪುಟ್ಟ ಸಮಾಜಗಳಿಗೆ ಎಷ್ಟು ಪ್ರಾಧಿಕಾರಗಳನ್ನು ರಚಿಸಿದ್ದಾರೆ? ಎಷ್ಟು ಅನುದಾನ ನೀಡಿದ್ದಾರೆ?” ಎಂದು ಪ್ರಶ್ನಿಸಿದರು. ಅಹಿಂದ ನಾಯಕರು ಅಧಿಕಾರದಿಂದ ಕೆಳಗಿಳಿಯುತ್ತಿರುವ ಈ ಸಂದರ್ಭದಲ್ಲಿ ಅವರಿಗೆ ನೋವಾಗುತ್ತಿರಬಹುದು, ಆದರೆ ದಶಕಗಳಿಂದ ಅಧಿಕಾರ ವಂಚಿತರಾದ ನೂರಾರು ಸಮಾಜಗಳ ನೋವು ಅದಕ್ಕಿಂತ ದೊಡ್ಡದು ಎಂದು ಹೇಳಿದರು. ಬೀಸಿದರು.
ಮುಂಬರುವ ಜೂನ್ 7ರಂದು ಬೆಂಗಳೂರಿನ ಪ್ರತಿಷ್ಠಿತ ಅಶೋಕ ಹೋಟೆಲ್‌ನಲ್ಲಿ ವಿಕಾಸಶೀಲ ಇನ್ಸಾನ್ ಪಾರ್ಟಿಯ ಬೃಹತ್ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಸಮಾಜಗಳ ಸುಮಾರು 100 ರಿಂದ 150 ಮಠಾಧೀಶರು, ರಾಜಗುರುಗಳು ಹಾಗೂ ಪರಮ ಋಷಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಹಿಂದುಳಿದ ವರ್ಗಗಳ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪಕ್ಷದ ವತಿಯಿಂದ ಕರೆ ನೀಡಲಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರುಗಳು ಹಾಜರಿದ್ದರು.