
ಮೈಸೂರು; ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲೆಂದು ಆಶಿಸಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘ, ಮೈಸೂರು ಜಿಲ್ಲಾ ಘಟಕದ ವತಿಯಿಂದ ಗುರುವಾರ ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸಿ, 101 ತೆಂಗಿನ ಕಾಯಿ ಹಿಡುಗಾಯಿ ಒಡೆಯಲಾಯಿತು.
ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ಆಪತ್ಭಾಂದವನಾಗಿ ಕೆಲಸವನ್ನು ಮಾಡಿಕೊಂಡು ಬರುತ್ತಿರುವ ಡಿ.ಕೆ.ಶಿವಕುಮಾರ್ ಅವರು , ಪಕ್ಷದ ರಾಜ್ಯಾಧ್ಯಕ್ಷನಾಗಿ ಕಾಂಗ್ರೆಸ್ 135 ಕ್ಕಿಂತ ಹೆಚ್ಚು ಸೀಟುಗಳು ಬರುವಂತೆ ಕಾರ್ಯ ನಿರ್ವಹಿಸಿದ್ದಾರೆ. ಮೂಲ ಕಾಂಗ್ರೆಸ್ಸಿಗರಾದ ಡಿಕೆ ಶಿವಕುಮಾರ್ ರವರು ಯಾವುದೇ ವಿಜ್ಞಗಳಿಲ್ಲದೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲೆಂದು ಪ್ರಾರ್ಥಿಸಿ ಪೂಜೆ ಸಲ್ಲಿಸಲಾಯಿತು. ಬಳಿಕ ಡಿ.ಕೆ.ಶಿವಕುಮಾರ್ ಪರವಾಗಿ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ಗೌಡ , ಕೆ.ಎನ್.ನಾಗೇಗೌಡ, ಬೋಗಾದಿ ಸಿದ್ದೇಗೌಡ, ಸಿಂದುವಳ್ಳಿ ಶಿವಕುಮಾರ್, ಕೃಷ್ಣಪ್ಪ , ವರಕೂಡು ಕೃಷ್ಣೇಗೌಡ, ಗಿರೀಶ್ ಹೆಚ್, ಸೋಮೇಗೌಡ, ಹನುಮಂತಯ್ಯ, ನಾರಾಯಣ ಗೌಡ, ಕುಮಾರ್ ಗೌಡ, ಬಸವರಾಜು, ತ್ಯಾಗರಾಜ್, ಹೊಂಬೇಗೌಡ , ನೇಹಾ , ಸುಜಾತಾ, ಪದ್ಮಾ, ಶಿವರಾಂ ಗೌಡ, ಶಿವರಾಜ್, ರವೀಶ್, ಸುಬ್ಬೇಗೌಡ, ಚಂದ್ರಶೇಖರ್, ರಮೇಶ್, ಕೇದಾರ್ , ಪ್ರಭಾಕರ್, ಶಿವಲಿಂಗಯ್ಯ, ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.