3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೇಕೆದಾಟು ಯೋಜನೆಯ ವಿಚಾರವಾಗಿ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶ ಮಾಡಿ, ರಾಜ್ಯಕ್ಕೆ ನ್ಯಾಯ ಒದಗಿಸಬೇಕು; ಸಿ. ಎನ್. ಮಂಜೇಗೌಡ


ಮೈಸೂರು; ರಾಜ್ಯ ಸರ್ಕಾರ ಕುಡಿಯುವ ನೀರಿನ ಸಂಗ್ರಹಣೆಗಾಗಿ ಕೈಗೆತ್ತಿಕೊಂಡಿರುವ ಮೇಕೆದಾಟು ಯೋಜನೆಯ ಜಾರಿ ವಿಚಾರವಾಗಿ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶ ಮಾಡಿ, ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಕಾವೇರಿ ಕ್ರಿಯಾ ಸಮಿತಿ ಗೌರವಾಧ್ಯಕ್ಷರೂ ಆದ ವಿಧಾನ ಪರಿಷತ್ ಸದಸ್ಯ ಸಿ. ಎನ್. ಮಂಜೇಗೌಡ ಆಗ್ರಹಿಸಿದರು.
ಗುರುವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತಮಿಳುನಾಡು ಮುಖ್ಯಮಂತ್ರಿಯಾದ ಚಿತ್ರ ನಟ ಜೋಸೆಫ್ ವಿಜಯ್ ಅವರು, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ, ಕರ್ನಾಟಕ ರಾಜ್ಯ ಕೈಗೆತ್ತಿಕೊಂಡಿರುವ ಮೇಕೆದಾಟು ಯೋಜನೆ ಜಾರಿಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿದರು. ಆದರೆ ಮೇಕೆದಾಟು ಯೋಜನೆ ಜಾರಿಯಿಂದ ಕರ್ನಾಟಕ-ತಮಿಳುನಾಡು ಈ ಎರಡು ರಾಜ್ಯಗಳಿಗೆ ತುಂಬಾನೇ ಅನುಕೂಲವಾಗಲಿದೆ. ಈ ಕುರಿತು ರಾಷ್ಟçಪತಿ, ಪ್ರಧಾನಿ, ಕೇಂದ್ರ ನೀರಾವರಿ ಮಂತ್ರಿಗಳನ್ನು ಕಾವೇರಿ ಕ್ರಿಯಾ ಸಮಿತಿ ನಿಯೋಗದಿಂದ ಭೇಟಿ ಮಾಡಿ, ಮೇಕೆದಾಟು ಯೋಜನೆಯ ನಿರ್ಮಾಣಕ್ಕೆ ಅನುಮತಿ ಕೊಡಿಸುವಂತೆ ಮನವಿ ಸಲ್ಲಿಸಿ ಒತ್ತಾಯ ಮಾಡುತ್ತೇವೆ ಎಂದರು.
ಪ್ರಧಾನ ಮಂತ್ರಿಗಳು ಮೇಕೆದಾಟು ವಿಚಾರವಾಗಿ ಮಧ್ಯಸ್ಥಿಕೆ ವಹಿಸಿ, ನಮ್ಮ ರಾಜ್ಯದ ಕನಕಪುರದಲ್ಲಿರುವ ಮೇಕೆದಾಟುವಿನಲ್ಲಿ ಅಣೆಕಟ್ಟೆ ಕಟ್ಟಲು ಅವಕಾಶ ಕೊಡಿಸಬೇಕು. ಕಾವೇರಿ ಹುಟ್ಟುವುದು ನಮ್ಮ ರಾಜ್ಯದ ಕೊಡಗಿನಲ್ಲಿ, ಇಲ್ಲಿ ಹುಟ್ಟುವ ನೀರು ರಾಜ್ಯಕ್ಕೆ ನ್ಯಾಯಯುತವಾಗಿಯೇ ಸಲ್ಲಬೇಕು. ನೀರು ವ್ಯರ್ಥವಾಗಬಾರದು ಎಂಬ ಉದ್ದೇಶದಿಂದ ಅಣೆಕಟ್ಟು ಕಟ್ಟುವ ಉದ್ದೇಶ ಇದೆ. ಇದರಿಂದ ತಮಿಳುನಾಡಿಗೆ ನೀರಿನ ಸಮಸ್ಯೆ ಎದುರಾಗುವುದಿಲ್ಲ ಎಂದು ಹೇಳಿದರು.
1974ರ ಕಾವೇರಿ ನೀರಿನ ಒಪ್ಪಂದವನ್ನು ಮರು ಪರಿಶೀಲನೆ ಮಾಡಬೇಕು. ರಾಜಕೀಯ ಪಕ್ಷಗಳು ಕಿತ್ತಾಟದಿಂದ ಕರ್ನಾಟಕ-ತಮಿಳುನಾಡು ನಡುವೆ ಕಾವೇರಿ ವಿವಾದ ಇಂದಿಗೂ ಮುಂದುವರೆದಿದೆ. ಆದರೆ, ತಮಿಳುನಾಡಿನಲ್ಲಿ ಜಲ, ನೆಲ, ಭಾಷೆಯ ವಿಷಯ ಬಂದಾಗ ಪಕ್ಷಭೇದ ಮರೆತು, ಎಲ್ಲ ಪಕ್ಷದವರೂ ಒಂದಾಗುತ್ತಾರೆ. ಆದರೆ, ನಮ್ಮ ರಾಜ್ಯದಲ್ಲಿ ಆ ಪರಿಸ್ಥಿತಿಯಿಲ್ಲ. ನಮ್ಮಲ್ಲಿ ಒಗ್ಗಟ್ಟಿನ ಕೊರತೆ ಕಾಣುತ್ತಿದೆ. ಇದನ್ನು ಬಿಟ್ಟು, ಪಕ್ಷಾತೀತವಾಗಿ ಎಲ್ಲರೂ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ಕಾವೇರಿ ನೀರಿನ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.
ತಮಿಳುನಾಡಿನಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ, ಕಾವೇರಿ ನೀರಿನ ವಿಚಾರವಾಗಿ ಧ್ವನಿ ಎತ್ತುತ್ತಿವೆ. ಅದೇ ರೀತಿ ನೂತನ ಸಿಎಂ ಜೋಸೆಫ್ ವಿಜಯ್ ಅವರು ಮೇಕೆದಾಟು ವಿಚಾರವಾಗಿ ಧ್ವನಿ ಎತ್ತಿದ್ದಾರೆ ಎಂದರು.
ಸಮಿತಿ ಅಧ್ಯಕ್ಷ ಎಸ್. ಜಯಪ್ರಕಾಶ್ (ಜೆಪಿ) ಮಾತನಾಡಿ, ಕರ್ನಾಟಕದ ಪ್ರಸ್ತಾವಿತ ಮೇಕೆದಾಟು ಯೋಜನೆ ವಿರುದ್ಧದ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದ 2025ರ ನವೆಂಬರ್ ತೀರ್ಪಿನ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದನ್ನು ಸ್ವಾಗತಿಸುತ್ತೇವೆ’ ಎಂದು ತಿಳಿಸಿದರು.
‘ಕರ್ನಾಟಕ-ತಮಿಳುನಾಡು ಜನರು ಸಹೋದರರಂತೆ ಬದುಕುವುದು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಇಷ್ಟವಿಲ್ಲವೆಂದು ಕಾಣಿಸುತ್ತಿದೆ. ಹೀಗಾಗಿಯೇ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜಕೀಯ ಲಾಭ ಪಡೆಯುವ ಉದ್ದೇಶವನ್ನು ಅವರು ಹೊಂದಿದ್ದಾರೆ. ಇಂಥದ್ದಕ್ಕೆಲ್ಲಾ ನಮ್ಮ ಸರ್ಕಾರ ಅವರಿಗೆ ಮಣಿಯಬಾರದು’ ಎಂದು ಒತ್ತಾಯಿಸಿದರು.
‘ತಮಿಳುನಾಡಿಗೆ 177 ಟಿಎಂಸಿ ನೀರು ಹರಿಸುವಂತೆ ನೀಡುವ ತೀರ್ಪಿನಿಂದ ರಾಜ್ಯಕ್ಕೆ ಈಗಾಗಲೇ ಅನ್ಯಾಯವಾಗಿದೆ. ಆ ತೀರ್ಪನ್ನು ಕಾವೇರಿ ಕ್ರಿಯಾ ಸಮಿತಿಯು ಹಿಂದಿನಿAದಲೂ ವಿರೋಧಿಸುತ್ತಲೇ ಬಂದಿದೆ. ಅವೈಜ್ಞಾನಿಕವಾದ ತೀರ್ಪು ರದ್ದುಪಡಿಸಿ, ಕರ್ನಾಟಕಕ್ಕೆ ನ್ಯಾಯ ದೊರಕಿಸಿಕೊಡಬೇಕೆಂAದು ಒತ್ತಾಯಿಸುತ್ತಲೇ ಬಂದಿದ್ದೇವೆ. ರಾಜ್ಯ ಸರ್ಕಾರವು ಮೇಕೆದಾಟು ಯೋಜನೆಗೆ ಕೂಡಲೇ ಚಾಲನೆ ನೀಡಬೇಕು. ಕುಡಿಯುವ ಉದ್ದೇಶ ಹಾಗೂ ಎರಡು ಬೆಳೆಗಳಿಗೆ ಬೇಕಾಗುವಷ್ಟು ನೀರು ಬಳಸಿಕೊಳ್ಳಬೇಕು. ಉಳಿದ ನೀರನ್ನು ಮಾತ್ರವೇ ತಮಿಳುನಾಡಿಗೆ ಹರಿಸಬೇಕು’ ಎಂದು ಆಗ್ರಹಿಸಿದರು
ಸುದ್ದಿಗೋಷ್ಠಿಯಲ್ಲಿ ಕಾವೇರಿ ಕ್ರಿಯಾ ಸಮಿತಿ ಪ್ರಧಾನ ಸಂಚಾಲಕ ಮೂಗೂರು ನಂಜುAಡಸ್ವಾಮಿ, ಕಾರ್ಯದರ್ಶಿ ಮೆಲ್ಲಹಳ್ಳಿ ಮಹದೇವಸ್ವಾಮಿ, ಎಂ. ಜೆ. ಸುರೇಶ್‌ಗೌಡ, ರೈತ ಶಿವಕುಮಾರ್, ರವೀಶ್, ಹನುಮಂತೇಗೌಡ, ಸ್ವಾಮಿಗೌಡ, ಚಿತ್ರ ನಟಿ ಶುಭರಕ್ಷ ಉಪಸ್ಥಿತರಿದ್ದರು.