Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗಣಪತಿ ಸಚ್ಚಿದಾನಂದ ಆಶ್ರಮದ ಸಪ್ತರ್ಷಿ ಸರೋವರದಲ್ಲಿ ವೆಂಕಟೇಶ್ವರ ಸ್ವಾಮಿಗೆ ತೆಪ್ಪೋತ್ಸವ


ಮೈಸೂರು; ಶ್ರೀ ದತ್ತ ವೆಂಕಟೇಶ್ವರ ಕ್ಷೇತ್ರದ 27ನೇ ಬ್ರಹ್ಮೋತ್ಸವ ಅಂಗವಾಗಿ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದ ಸಪ್ತರ್ಷಿ ಸರೋವರದಲ್ಲಿ ವೆಂಕಟೇಶ್ವರ ಸ್ವಾಮಿಗೆ ತೆಪ್ಪೋತ್ಸವ ವಿಜೃಂಭಣೆಯಿAದ ನಡೆಯಿತು.
ವಿದ್ಯುತ್ ದೀಪಾಲಂಕಾರದಿAದ ಕಂಗೊಳಿಸುತ್ತಿದ್ದ ತೆಪ್ಪದಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಮಂಗಳವಾದ್ಯ, ವೇದಘೋಷಗಳೊಂದಿಗೆ ಸರೋವರದಲ್ಲಿ ಮೂರು ಸುತ್ತು ಪ್ರದಕ್ಷಿಣೆ ಮಾಡಿಸಲಾಯಿತು. ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ತೆಪ್ಪೋತ್ಸವವನ್ನು ಕಣ್ತುಂಬಿಕೊಳ್ಳಲು ನೂರಾರು ಭಕ್ತರು ಆಶ್ರಮಕ್ಕೆ ಆಗಮಿಸಿದ್ದರು.
ಶ್ರೀಗಣಪತಿ ಸಚ್ಚಿದಾನಂದಸ್ವಾಮಿಯವರು ತೆಪ್ಪೋತ್ಸವದಲ್ಲಿದ್ದು ಭಕ್ತರಿಗೆ ಆಶೀರ್ವಚನ ನೀಡಿದರು. ನೆರೆದಿದ್ದ ಭಕ್ತರು ತೆಪ್ಪೋತ್ಸವ ವೀಕ್ಷಿಸಿದರು.