3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರು ಸಂಸ್ಥಾನದ ಸಂಗೀತ ಪರಂಪರೆಯನ್ನು ಶ್ರೀಮಂತಗೊಳಿಸುವಲ್ಲಿ ವಾಸುದೇವಾಚಾರ್ಯರ ಕೊಡುಗೆ ಅಪಾರ; ಸಂಸದ ಯದುವೀರ್


ಮೈಸೂರು:
ಮೈಸೂರು ಸಂಸ್ಥಾನದ ಸಂಗೀತ ಪರಂಪರೆಯನ್ನು ಶ್ರೀಮಂತಗೊಳಿಸುವಲ್ಲಿ ವಾಸುದೇವಾ ಚಾರ್ಯರ ಕೊಡುಗೆ ಅಪಾರವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ನಗರದ ನಾರಾಯಣಶಾಸ್ತಿç ರಸ್ತೆಯ ಲ್ಲಿರುವ ಬಿಡಾರಂ ಕೃಷ್ಣಪ್ಪನವರ ಶ್ರೀ ಪ್ರಸನ್ನ ಸೀತಾರಾಮ ಮಂದಿರದಲ್ಲಿ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಸಹಯೋಗ ದಲ್ಲಿ ನಡೆದ ಅರಮನೆ ನಗರಿ ಮೈಸೂರಿನ ಸಂಗೀತ ಪರಂಪರೆಯನ್ನು ವಿಶ್ವಕ್ಕೆ ಪರಿಚಯಿಸಿದ ಮಹಾನ್ ವಾಗ್ಗೇಯಕಾರ, ಸಂಗೀತ ಕಲಾನಿಧಿ ಮೈಸೂರು ಕೆ.ವಾಸುದೇವಾಚಾರ್ಯ, ಅವರ 192ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರು ಅರಮನೆಯೊಂದಿಗೆ ಅವಿನಾಭಾವ ಸಂಬAಧ ಹೊಂದಿದ್ದ ವಾಸುದೇವಾಚಾರ್ಯರು, ಸಂಸ್ಥಾನದ ಸಂಗೀತ ಪರಂಪರೆಯನ್ನು ರಾಷ್ಟçಮಟ್ಟದಲ್ಲಿ ಗುರುತಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು ಎಂದರು.
ಮೈಸೂರು ವಾಸುದೇವಾZರ್ಯರು ಕರ್ನಾಟಕ ಸಂಗೀತ ಕ್ಷೇತ್ರದ ಶ್ರೇಷ್ಠ ವಾಗ್ಗೇಯಕಾರರಲ್ಲಿ ಒಬ್ಬರು. ಅವರ ಕೃತಿಗಳು ಇಂದಿಗೂ ದೇಶ-ವಿದೇಶಗಳ ಸಂಗೀತ ವೇದಿಕೆಗಳಲ್ಲಿ ಗಾಯನಗೊಳ್ಳುತ್ತಿವೆ. ತ್ಯಾಗರಾಜರ ಶಿಷ್ಯ ಪರಂಪರೆಗೆ ಸೇರಿದ ಅವರು, ಭಕ್ತಿ, ಸಾಹಿತ್ಯ ಮತ್ತು ಸಂಗೀತವನ್ನು ಸಮನ್ವಯ ಗೊಳಿಸಿ ಅಮೂಲ್ಯ ಕೃತಿಗಳನ್ನು ರಚಿಸಿದ್ದಾರೆ ಎಂದು ತಿಳಿಸಿದರು.
ಮೈಸೂರಿನ ಅನೇಕ ಸಂಗೀತ ವಿದ್ವಾಂಸರು ಅವರ ಮಾರ್ಗದರ್ಶನ ಮತ್ತು ಕೃತಿಗಳಿಂದ ಪ್ರೇರಣೆ ಪಡೆದಿದ್ದಾರೆ. ಅವರ ಸಂಗೀತ ಪರಂಪರೆ ಇಂದಿಗೂ ಮುಂದುವರಿಯುತ್ತಿರುವುದು ಹೆಮ್ಮೆಯ ವಿಷಯ ಎಂದರು.
ಶ್ರೀ ಪ್ರಸನ್ನ ಸೀತಾರಾಮ ಮಂದಿರವು ಕೇವಲ ಧಾರ್ಮಿಕ ಕೇಂದ್ರವಲ್ಲ, ಅದು ಪಾರಂಪರಿಕ ಸಂಗೀತ ಮತ್ತು ಸಾಂಸ್ಕöÈತಿಕ ಚಟುವಟಿಕೆಗಳ ಜೀವಂತ ತಾಣವಾಗಿದೆ. ದಸರಾ ಮಹೋ ತ್ಸವದ ವೇಳೆ ಮಾತ್ರವಲ್ಲದೆ, ವರ್ಷ ಪೂರ್ತಿ ಸಂಗೀತ ಹಾಗೂ ಸಾಂಸ್ಕöÈತಿಕ ಕಾರ್ಯಕ್ರಮ ಗಳನ್ನು ಆಯೋಜಿಸುವ ಮೂಲಕ ಈ ಮಂದಿರವು ಮೈಸೂರು ಸಂಗೀತ ಪರಂ ಪರೆಯನ್ನು ಉಳಿಸಿ ಬೆಳೆಸುವ ಕಾರ್ಯ ಮಾಡುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್, ಕರ್ನಾಟಕ ಶಾಸ್ತಿçÃಯ ಸಂಗೀತದ ಹಿರಿಯ ಕಲಾ ವಿದೆ ಟಿ.ಎಸ್.ಸತ್ಯವತಿ, ಬಿಡಾರಂ ಕೃಷ್ಣಪ್ಪನವರ ಶ್ರೀ ಪ್ರಸನ್ನ ಸೀತಾರಾಮ ಮಂದಿರದ ಕಾರ್ಯದರ್ಶಿ ಲಕ್ಷಿ÷್ಮà ನಾರಾಯಣ ಬಾಬು ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಗೀತಾಸಕ್ತರು, ಕಲಾವಿದರು ಭಾಗವಹಿಸಿ ವಾಸುದೇವಾಚಾರ್ಯರ ಸಾಧನೆಯನ್ನು ಸ್ಮರಿಸಿದರು.