
ಮೈಸೂರು; ಆಹಾರ, ನಾಗರಿಕ ಸರಬರಾಜು ಇಲಾಖಾ ವತಿಯಿಂದ ನ್ಯಾಯಬೆಲೆ ಅಂಗಡಿ ಗಳ ಮೂಲಕ ವಿತರಣೆ ಮಾಡಲಾಗುತ್ತಿರುವ ಪಡಿತರ ಅಕ್ಕಿಯು ಸರ್ವರ್ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕೆಂದು ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಒತ್ತಾಯಿಸಿದೆ.
ಈ ಕುರಿತು ಮೈಸೂರಿನ ಸಿದ್ದಾರ್ಥ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕರ್ನಾಟಕ ಸರಕಾರದ ಆಹಾರ, ನಾಗರಿಕ ಸರಬುರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಡಾ. ಮಂಟೇಸ್ವಾಮಿ ರವರಿಗೆ ಲಿಖಿತ ಮನವಿ ಸಲ್ಲಿಸಿರುವ ಘಟಕದ ಮುಖಂಡರುಗಳು, ಸರ್ವರ್ ಸಮಸ್ಯೆಯಿಂದಾಗಿ ಗ್ರಾಹಕರು ತಮ್ಮ ಪಡಿತರ ಅಕ್ಕಿ ಪಡೆಯಲು ಸಂಬAಧ ಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ದಿನ ಪೂರ್ತಿ ಕಾಯುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಗ್ರಾಮೀಣ ಭಾಗದ ಕೆಲ ನ್ಯಾಯಬೆಲೆ ಅಂಗಡಿಯಲ್ಲಿ ದಿನ ಪೂರ್ತಿ ಕಾದು ನಿಂತರೂ ಸರ್ವರ್ ಸಮಸ್ಯೆಯಿಂದ ಅಕ್ಕಿ ಲಭಿಸದೆ ಬರಿಗೈಯಲ್ಲಿ ವಾಪಸ್ ಹೋಗುವಂತಾಗಿದೆ ಎಂದು ದೂರಿದ್ದಾರೆ.
ಸರಕಾರದ ಮಟ್ಟದಲ್ಲಿನ ಈ ರೀತಿಯ ತಾಂತ್ರಿಕ ಅಡಚಣೆಯಿಂದಾಗಿ ಕೂಲಿ ಕೆಲಸ ಮಾಡುತ್ತಿರುವ ಬಿಪಿಎಲ್ ಪಡಿತರ ಚೀಟಿದಾರ ಗ್ರಾಹಕರು ಸಕಾಲದಲ್ಲಿ ಅಕ್ಕಿ ಸಿಗದೆ ನ್ಯಾಯಬೆಲೆ ಅಂಗಡಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದು ಕೊಳ್ಳುತ್ತಿದ್ದಾರೆ. ಸಂಬAಧ ಪಟ್ಟ ಆಹಾರ ಅಧಿಕಾರಿಗಳಲ್ಲಿ ವಿಚಾರಿಸಿದರೆ ಎರಡು ತಿಂಗಳ ಅಕ್ಕಿಯನ್ನು ಒಂದೇ ತಿಂಗಳಿನಲ್ಲಿ ನೀಡುತ್ತಿರುವುದರಿಂದ ಸರ್ವರ್ ಸಮಸ್ಯೆ ಉದ್ಭವಿಸಿದೆ ಎಂದು ಸಬೂಬು ನೀಡುತ್ತಿದ್ದಾರೆ. ಈ ವಿಚಾರದಲ್ಲಿ ಸಮರ್ಪಕ ಕಾರಣ ತಿಳಿಯದಿದ್ದ, ಸರ್ವರ್ ಸಮಸ್ಯೆ ತಿಂಗಳ ಅಂತ್ಯದವರೆಗೂ ಹೀಗೆಯೇ ಮುಂದುವರಿದರೆ, ಕೆಲವರು ಪಡಿತರ ಅಕ್ಕಿ ಪಡೆಯುವಲ್ಲಿ ವಂಚಿತರಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಈ ನಡುವೆ ಮೇ ತಿಂಗಳ ಅಕ್ಕಿಯನ್ನು ರಾಜ್ಯ ಸರಕಾರ ವಿತರಿಸಿಲ್ಲ. ಕೇಂದ್ರ ಸರಕಾರವು ಮುಂಗಡವಾಗಿ 2 ತಿಂಗಳಿಗೆ ಬಿಡುಗಡೆ ಮಾಡಿದ ಅಕ್ಕಿಯನ್ನು ಹೊಂದಾಣಿಕೆ ಮಾಡಿಕೊಂಡು ಎರಡೆರಡು ಬಾರಿ ಗ್ರಾಹಕರಿಂದ ಬೆರಳ ಅಚ್ಚು ( ತಂಬ್) ತೆಗೆದುಕೊಳ್ಳುವುದರಿಂದ ಸರ್ವರ್ ಸಮಸ್ಯೆಗೆ ಇನ್ನೊಂದು ಕಾರಣ ಎಂದು ಹೇಳಲಾಗುತ್ತಿದೆ.ಈ ಹಿನ್ನೆಲೆಯಲ್ಲಿ ಮೇ ತಿಂಗಳ ಅಕ್ಕಿಯನ್ನು ಜೂನ್ ಮೊದಲ ವಾರದವರೆಗೂ ನೀಡಲು ಸೂಕ್ತ ಆದೇಶ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ರಾಜ್ಯ ಸಂಚಾಲಕ ಡಾ.ಜಿ ವಿ ರವಿಶಂಕರ್,ಕಾರ್ಯದರ್ಶಿ ಶ್ರೀಕಂಠೇಶ್,ಆನAದ್ ,ಸಂದೇಶ್ ,ದುರ್ಗಾ ಪ್ರಸಾದ್ ,ಹರೀಶ್,ದಯಾನಂದ ನಾಯಕ್, ದೂರ ರಾಜಣ್ಣ ಹಾಗೂ ಇನ್ನಿತರರು ಹಾಜರಿದ್ದರು