ಜೂನ್ 3 ರಂದು ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ
ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಜೂನ್ 3 ರಂದು ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.ಶನಿವಾರ ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗಪಕ್ಷದ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರ ಹೆಸರನ್ನ ಹಂಗಾಮಿ ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದರು. ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಹಿರಿಯ ಶಾಸಕರು ಅನುಮೋದನೆ ನೀಡಿದರು.ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಲು ಎಲ್ಲಾ ಶಾಸಕರು ಒಪ್ಪಿಗೆ ಸೂಚಿಸಿದ್ದು, ಈ ಮೂಲಕ ಸಿಎಲ್ ಪಿ ನಾಯಕರಾಗಿ ಆಯ್ಕೆಯಾಗಿದ್ದಾರೆ. ಸಿಎಲ್‌ಪಿ ನಾಯಕನಾಗಿ ಆಯ್ಕೆಯಾದ ಬಳಿಕ…