3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ


ಮೈಸೂರು; ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ನಾಯಕ ಸಮಾಜದ ಪ್ರಭಾವಿ ನಾಯಕರಾದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಎಸ್.ಚಿಕ್ಕಮಾದು ಅಭಿಮಾನ ಬಳಗದ ಅಧ್ಯಕ್ಷ ಕ್ಯಾತನಹಳ್ಳಿ ನಾಗರಾಜು ಆಗ್ರಹಿಸಿದ್ದಾರೆ.
ಶನಿವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಮತ್ತು ಹಾಸನ ಜಿಲ್ಲೆಯಲ್ಲಿ ನಾಯಕ ಸಮಾಜದ ಸುಮಾರು 6 ಲಕ್ಷ ಮತದಾರರು ಇದ್ದು, ಈ ಭಾಗದಲ್ಲಿ ಇದುವರೆಗೂ ಸಚಿವ ಸಾ ಈ ಸಮಾಜಕ್ಕೆ ನೀಡಿಲ್ಲ. ಹಾಗಾಗಿ ಈ ಭಾಗದ ಪ್ರಭಾವಿ ಶಾಸಕ ಅನಿಲ್ ಚಿಕ್ಕಮಾದುರವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದರು.
ಹಿಂದೆ ಸರ್ಕಾರದಲ್ಲಿ ಸಮುದಾಯದ ನಾಯಕರಾಗಿದ್ದ ನಾಗೇಂದ್ರ ಹಾಗೂ ರಾಜಣ್ಣ ನವರು ಸಚಿವರಾಗಿದ್ದರು. ಕಾರಣಾಂತರಗಳಿAದ ಅವರನ್ನು ಸಚಿವ ಸ್ಥಾನದಿಂದ ಕೈಬಿಟ್ಟು, ಆ ಸ್ಥಾನವನ್ನು ಇದುವರೆಗೂ ಕೂಡ ಭರ್ತಿ ಮಾಡಿಲ್ಲ. ಅನಿಲ್ ಚಿಕ್ಕಮಾದು ಅವರು ಮೈಸೂರು ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಹಗಲು-ರಾತ್ರಿ ದುಡಿಯುತ್ತಿದ್ದಾರೆ. ಹಾಗಾಗಿ ಸಾಮಾಜಿಕ ನ್ಯಾಯದ ಅಡಿಯಲ್ಲಿ ಈ ಭಾಗದ ನಾಯಕ ಜನಾಂಗ ಹಾಗೂ ಇತರ ಜನಾಂಗದ ಸರ್ವತೋಮುಖ ಅಭಿವೃದ್ಧಿಗಾಗಿ ಹಾಗೂ ಪಕ್ಷದ ಸಂಘಟನೆಗಾಗಿ ಹೆಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದುರವರಿಗೆ ಸಚಿವ ಸ್ಥಾನವನ್ನು ಕೊಟ್ಟು , ಸರ್ಕಾರದಲ್ಲಿ ಸೇವೆ ಮಾಡುವುದಕ್ಕೆ ಅವಕಾಶ ಮಾಡಿಕೊಡಬೇಕು. ಇವರಿಗೆ ಸಚಿವ ಸ್ಥಾನ ನೀಡಿರುವುದರಿಂದ ಈ ಮೈಸೂರು ಭಾಗದಲ್ಲಿ ಪಕ್ಷಕ್ಕೆ ಹೆಚ್ಚಿನ ಯುವಕರನ್ನು ಸೆಳೆದು. ಪಕ್ಷವನ್ನು ಇನ್ನಷ್ಟು ಸದೃಢವಾಗಿ ಮಾಡಲು ಸಹಾಯಕವಾಗುತ್ತದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಳಗದ ಕಾರ್ಯದರ್ಶಿ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.