Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶ್ರೀಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶುಕವನ’ ತಾತ್ಕಾಲಿಕ ಬಂದ್

ಮೈಸೂರು: ನಗರದ ಪ್ರಸಿದ್ಧ ಪ್ರವಾಸಿ ಆಕರ್ಷಣೆಗಳಲ್ಲೊಂದಾದ ಅವಧೂತ ದತ್ತ ಪೀಠದ ಗಿಳಿಗಳ ಪುನರ್ವಸತಿ ಕೇಂದ್ರಶುಕವನ’ವು ಜೂನ್ 1 ರಿಂದ ಮುಂದಿನ ಸೂಚನೆಯವರೆಗೆ ತಾತ್ಕಾಲಿಕವಾಗಿ ಮುಚ್ಚಲ್ಪಡಲಿದೆ ಎಂದು ದತ್ತ ಪೀಠದ ಆಡಳಿತ ಮಂಡಳಿ ತಿಳಿಸಿದೆ.
ಅಭಿವೃದ್ಧಿ ಹಾಗೂ ನವೀಕರಣ ಕಾಮಗಾರಿಗಳ ಹಿನ್ನೆಲೆಯಲ್ಲಿ ಶುಕವನಕ್ಕೆ ಸಾರ್ವಜನಿಕರ ಪ್ರವೇಶವನ್ನು ಸದ್ಯಕ್ಕೆ ನಿರ್ಬಂಧಿಸಲಾಗುತ್ತಿದೆ .
ಶುಕವನ ಮುಚ್ಚಲ್ಪಟ್ಟಿದ್ದರೂ, ಅದಕ್ಕೆ ಹೊಂದಿಕೊAಡAತಿರುವ ವಿಶ್ವವಿಖ್ಯಾತ ಬೋನ್ಸಾಯ್ ಉದ್ಯಾನವನ ಮತ್ತು ವಿಶ್ವಂ ವಸ್ತು ಸಂಗ್ರಹಾಲಯಗಳು ಎಂದಿನAತೆ ಕಾರ್ಯನಿರ್ವಹಿಸಲಿವೆ. ಪ್ರವಾಸಿಗರು ಮತ್ತು ಸಾರ್ವಜನಿಕರು ಎಂದಿನAತೆ ಈ ಎರಡು ಸ್ಥಳಗಳಿಗೆ ಭೇಟಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
“ಅಭಿವೃದ್ಧಿ ಕೆಲಸಗಳಿಗಾಗಿ ಶುಕವನವನ್ನು ಮಾತ್ರ ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದ್ದು, ಇದರಿಂದ ವೀಕ್ಷಕರಿಗೆ ಉಂಟಾಗುವ ಅನಾನುಕೂಲತೆಗೆ ವಿಷಾದಿಸುತ್ತೇವೆ. ಸಾರ್ವಜನಿಕರು ಮತ್ತು ಭಕ್ತಾದಿಗಳು ಎಂದಿನAತೆ ತಮ್ಮ ಸಹಕಾರವನ್ನು ಮುಂದುವರಿಸಬೇಕಾಗಿ ಮನವಿ ಮಾಡಿದೆ.