Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗ್ರಾಹಕರಿಲ್ಲದೆ ಭಣಗುಡುತ್ತಿವೆ ಜ್ಯುವೆಲ್ಲರಿ ಶಾಪ್‌ಗಳು!


ಚಿನ್ನದ ವಹಿವಾಟು ಶೇಕಡಾ 70 ರಷ್ಟು ಡೌನ್

ಹೊಸದೆಹಲಿ; ದೇಶಾದ್ಯಂತ ಚಿನ್ನದ ಮಾರುಕಟ್ಟೆಗೆ ದೊಡ್ಡ ಹೊಡೆತ ಬಿದ್ದಿದೆ. ಹಳದಿ ಲೋಹದ ಖರೀದಿಯಲ್ಲಿ ಭಾರಿ ಇಳಿಕೆ ದಾಖಲಾಗಿದೆ. ಇದರ ನೇರ ಪರಿಣಾಮವಾಗಿ ಭಾರತಕ್ಕೆ ಆಗುತ್ತಿದ್ದ ಚಿನ್ನದ ಆಮದು ಪ್ರಮಾಣದಲ್ಲೂ ಭಾರಿ ಕುಸಿತ ಕಂಡುಬAದಿದೆ ಎಂದು ಮಾರುಕಟ್ಟೆ ವರದಿಗಳು ತಿಳಿಸಿವೆ.
ವಿದೇಶದಿಂದ ಆಮದು ಪ್ರಮಾಣ ಕೇವಲ 7.5 ಟನ್‌ಗೆ ಕುಸಿದಿದೆ.
ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಬಾರಿ ಚಿನ್ನದ ಆಮದು ಪ್ರಮಾಣದಲ್ಲಿ ಶೇಕಡಾ 70 ರಷ್ಟು ಬೃಹತ್ ಇಳಿಕೆಯಾಗಿದೆ. ಕಳೆದ ವರ್ಷ ಭಾರತವು ಬರೋಬ್ಬರಿ 27 ಟನ್ ಚಿನ್ನವನ್ನು ವಿದೇಶದಿಂದ ಆಮದು ಮಾಡಿಕೊಂಡಿತ್ತು. ಆದರೆ, ಈ ಬಾರಿ ಕೇವಲ 7.5 ಟನ್ ಚಿನ್ನ ಮಾತ್ರ ಆಮದಾಗಿದೆ ಎಂದು ಅಂಕಿ-ಅAಶಗಳು ಹೇಳುತ್ತಿವೆ. ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನಾಭರಣ ವ್ಯಾಪಾರವು ಶೇ. 50 ರಿಂದ ಶೇ. 70 ರಷ್ಟು ಕುಸಿದಿದೆ ಎಂದು ಜ್ಯುವೆಲ್ಲರಿ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ.
ಮಾರುಕಟ್ಟೆ ತಜ್ಞರ ಪ್ರಕಾರ, ಚಿನ್ನದ ವಹಿವಾಟು ಈ ಮಟ್ಟಿಗೆ ತಳ ಕಚ್ಚಲು ಪ್ರಮುಖವಾಗಿ ಎರಡು ಕಾರಣಗಳಿವೆ: ಪ್ರಧಾನಿ ನರೇಂದ್ರ ಮೋದಿಯವರು ಈ ವರ್ಷ ಚಿನ್ನ ಖರೀದಿ ಮಾಡಬೇಡಿ ಎಂದು ಜನರಿಗೆ ಕರೆ ನೀಡಿದ್ದಾರೆ. ಇದಕ್ಕೆ ಉತ್ತಮ ಸ್ಪಂದನೆ ಕೂಡ ಸಿಕ್ಕಿದೆ. ಅಲ್ಲದೆ ಇತ್ತೀಚೆಗೆ ಕೇಂದ್ರ ಸರ್ಕಾರ ಚಿನ್ನದ ಮೇಲಿನ ಆಮದು ಸುಂಕವನ್ನು ಹೆಚ್ಚಳ ಮಾಡಿರುವುದು ಗ್ರಾಹಕರ ಜೇಬಿಗೆ ಹೊರೆಯಾಗಿದೆ. ಇದು ನೇರವಾಗಿ ಮಾರುಕಟ್ಟೆಯ ಬೇಡಿಕೆಯ ಮೇಲೆ ನೆಗೆಟಿವ್ ಪರಿಣಾಮ ಬೀರಿದೆ. ಜನರು ಚಿನ್ನ ಖರೀದಿ ಮಾಡುವುದನ್ನು ಕಡಿಮೆ ಮಾಡಿದ್ದಾರೆ.