3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಾಧನೆಯ ಶಿಖರಗಳು’ ಕೃತಿ ಲೋಕಾರ್ಪಣೆ

ಮೈಸೂರು: ಹಿರಿಯ ಪತ್ರಕರ್ತ ಕೂಡ್ಲಿ ಗುರುರಾಜ ಅವರ ಲೇಖನ ಸಂಕಲನಸಾಧನೆಯ ಶಿಖರಗಳು (ಸ್ಫೂರ್ತಿದಾಯಕ ವ್ಯಕ್ತಿ ಚಿತ್ರಗಳು)’ ಕೃತಿಯು ಇಂದು ಮೈಸೂರಿನ ಕಲಾಮಂದಿರ ಆವರಣದ ಕಿರು ರಂಗಮAದಿರದಲ್ಲಿ ನಡೆದ ಸಮಾರಂಭದಲ್ಲಿ ಲೋಕಾರ್ಪಣೆಗೊಂಡಿತು.
ಭಾರತೀ ಪ್ರಕಾಶನ, ಮೈಸೂರು ವತಿಯಿಂದ ಪ್ರಕಟಿತ ಈ ಕೃತಿಯನ್ನು ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಎಸ್. ಹೊರಟ್ಟಿ ಅವರು ಬಿಡುಗಡೆ ಮಾಡಿದರು. ಬಳಿಕ ಮಾತನಾಡಿ, ವ್ಯಕ್ತಿಗಳ ಸಾಧನೆಗಳನ್ನು ದಾಖಲಿಸಿ ಸಮಾಜಕ್ಕೆ ಸ್ಫೂರ್ತಿ ನೀಡುವ ಇಂತಹ ಕೃತಿಗಳು ಯುವಜನತೆಗೆ ಮಾರ್ಗದರ್ಶಿಯಾಗುತ್ತವೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯ ಕೆ. ಶಿವಕುಮಾರ್ ಮಾತನಾಡಿ, ಪತ್ರಿಕೋದ್ಯಮವು ಕೇವಲ ಸುದ್ದಿಗಳನ್ನು ದಾಖಲಿಸುವ ಮಾಧ್ಯಮವಲ್ಲ, ಸಮಾಜಕ್ಕೆ ಆದರ್ಶ ವ್ಯಕ್ತಿಗಳನ್ನು ಪರಿಚಯಿಸುವ ಜವಾಬ್ದಾರಿಯನ್ನೂ ಹೊಂದಿದೆ ಎಂದು ಹೇಳಿದರು.
ಕೃತಿಯ ಕುರಿತು ಹಿರಿಯ ಲೇಖಕ ಎಸ್. ಪ್ರಕಾಶ್‌ಬಾಬು ಮಾತನಾಡಿ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳ ಬದುಕು, ಹೋರಾಟ ಮತ್ತು ಯಶೋಗಾಥೆಗಳನ್ನು ಸರಳ ಹಾಗೂ ಪರಿಣಾಮಕಾರಿ ಭಾಷೆಯಲ್ಲಿ ಲೇಖಕರು ದಾಖಲಿಸಿರುವುದು ಕೃತಿಯ ವಿಶೇಷತೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪತ್ರಕರ್ತರು ಸಮಾಜದ ಸ್ಪಂದನೆಗಳನ್ನು ದಾಖಲಿಸುವುದರ ಜೊತೆಗೆ ಸಾಧಕರ ಬದುಕಿನ ಮೌಲ್ಯಗಳನ್ನು ಜನರಿಗೆ ತಲುಪಿಸುವ ಕಾರ್ಯದಲ್ಲಿ ನಿರಂತರ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೃತಿಕಾರ ಕೂಡ್ಲಿ ಗುರುರಾಜ, ಹಿರಿಯ ಪತ್ರಕರ್ತರಾದ ದಯಶಂಕರ ಮೈಲಿ, ಮದನ ಗೌಡ ಮತ್ತಿತರರು ಉಪಸ್ಥಿತರಿದ್ದರು.