3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅಪಘಾತ ತಡೆಗಟ್ಟಲು ರಸ್ತೆಗಳ ಅಭಿವೃದ್ಧಿಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ಲಕ್ಷಿ÷್ಮಕಾಂತ ರೆಡ್ಡಿ ಜಿ


ಮೈಸೂರು; ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ಅಪಘಾತಗಳು ಹೆಚ್ಚಾಗಿ ಸಂಭವಿಸುವ 120 ಬ್ಲಾ÷್ಯಕ್ ಸ್ಪಾಟ್ ಗಳನ್ನು ಪಟ್ಟಿ ಮಾಡಲಾಗಿದೆ. ಸದರಿ ರಸ್ತೆಗಳಲ್ಲಿ ಅಪಘಾತ ತಡೆಗಟ್ಟುವ ರೀತಿಯಲ್ಲಿ ಯೋಜನೆ ರೂಪಿಸಲಾಗಿರುತ್ತದೆ. ಸದರಿ ರಸ್ತೆಗಳ ಅಭಿವೃದ್ಧಿಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಲಕ್ಷಿ÷್ಮಕಾಂತ ರೆಡ್ಡಿ.ಜಿ ತಿಳಿಸಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದರು. ರಸ್ತೆ ಅಪಘಾತಗಳಲ್ಲಿ ಸಾವು ಸಂಭವಿಸುವ ರಸ್ತೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ನಿಖರ ಕಾರಣಗಳನ್ನು ಪಟ್ಟಿ ಮಾಡಿಕೊಂಡು ಸರಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದರು.
120 ಬ್ಲಾ÷್ಯಕ್ ಸ್ಪಾಟ್ ರಸ್ತೆಗಳ ಪ್ರಗತಿಯ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಹೆಚ್ಚಿನ ರಸ್ತೆಗಳು ಲೋಕೋಪಯೋಗಿ ಹಾಗೂ ರಾಷ್ಟಿçÃಯ ಹೆದ್ದಾರಿ ಇಲಾಖೆಗೆ ಸೇರಿದ್ದು, ರಸ್ತೆ ಅಭಿವೃದ್ಧಿಗಾಗಿ ಸರ್ಕಾರಕ್ಕೆ ಅನುದಾನ ಕೋರಿ ಮನವಿ ಸಲ್ಲಿಸಿ ಹಾಗೂ ತಮ್ಮ ಇಲಾಖೆಯಲ್ಲಿ ಲಭ್ಯ ಅನುದಾನದ ನಿಯಮಾನುಸಾರ ಸಾಧ್ಯವಾದಲ್ಲಿ ಸದರಿ ಕಾಮಗಾರಿಗಳನ್ನು ಸೇರಿಸಿಕೊಳ್ಳಿ ಎಂದು ತಿಳಿಸಿದರು.
ಮೈಸೂರು ನಗರ ಪ್ರಾದೇಶದಲ್ಲೂ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯವರು ಜಂಟಿಯಾಗಿ ಪರಿಶೀಲನೆ ನಡೆಸಿ ಬ್ಲಾ÷್ಯಕ್ ಸ್ಪಾಟ್ ಗಳನ್ನು ಗುರುತಿಸಿ, ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಕೆಲವು ರಸ್ತೆಗಳಲ್ಲಿ ಸೂಚನಾ ಪಲಕ ಅಳವಡಿಕೆ ಸೇರಿದಂತೆ ಸಣ್ಣ ಕಾಮಗಾರಿಗಳನ್ನು ಕೈಗೊಳ್ಳುವ್ಯದರಿಂದ, ರಸ್ತೆ ಅಪಘಾತಗಳನ್ನು ತಡೆಯಬಹುದಾಗಿದ್ದು, ಇದರ ಬಗ್ಗೆ ಹೆಚ್ಚಿನ ನಿಗಾ ವಹಿಸಿ. ರಸ್ತೆ ಅಪಘಾತದಲ್ಲಿ ಮರಣ ಹೊಂದಿದ ಪ್ರಕರಣ ಇದ್ದಲ್ಲಿ, ತಪ್ಪದೇ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ. ರಿಂಗ್ ರೋಡ್ ಗಳಲ್ಲಿ ವಾಹನಗಳ ಸಂಚಾರಕ್ಕಾಗಿ ಅನಧಿಕೃತವಾಗಿ ಸಣ್ಣ ತೆರವು ಮಾಡಿಕೊಂಡಿದ್ದಲ್ಲಿ ಅವುಗಳನ್ನು ಸರಿಪಡಿಸಿ ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ,ಸಹಾಯಕ ಪೊಲೀಸ್ ಆಯುಕ್ತ (ಸಂಚಾರ) ಶಿವಶಂಕರ್ ಎಂ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಪದ್ಮನಾಭ, ಮೈಸೂರು ಮಹಾನಗರ ಪಾಲಿಕೆ ಅಧೀಕ್ಷಕ ಎಂಜಿನಿಯರ್ ಮಂಜು ಸಿ. ಎಸ್, ಸೈಟ್ ಇಂಜಿನಿಯರ್(ಓಊAI) ಅರುಣ್ ಬಿ, ಸಿದ್ಧಾರ್ಥನಗರ ಸಂಚಾರಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶಿವಪ್ರಸಾದ್ ರಾವ್, ವಿ.ವಿ. ಪುರಂ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮಮತಾ ವಿ.ಡಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.