3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ; ಸಂಸದ ಯದುವೀರ್ ಒಡೆಯರ್


ಮೈಸೂರು: ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬAಧಿಸಿದ ವಿವಿಧ ರೈಲ್ವೆ ಮೂಲಸೌಕರ್ಯ ಮತ್ತು ಸಂಪರ್ಕ ವ್ಯವಸ್ಥೆಗಳ ಕುರಿತು ಚರ್ಚೆ ನಡೆಸಿದರು.
ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗಕ್ಕೆ ಸಂಬAಧಿಸಿದAತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹರಿದಾಡುತ್ತಿರುವ ಕೆಲವು ವರದಿಗಳು ಮತ್ತು ಚರ್ಚೆಗಳು ಕೊಡಗಿನ ಮೂಲಕ ರೈಲು ಮಾರ್ಗ ಹಾದುಹೋಗುವ ಸಾಧ್ಯತೆಯ ಬಗ್ಗೆ ಸಾರ್ವಜನಿಕರ ಒಂದು ವಲಯದಲ್ಲಿ ಆತಂಕವನ್ನು ಉಂಟುಮಾಡಿವೆ. ಆದರೆ, ರೈಲ್ವೆ ಸಚಿವರೊಂದಿಗೆ ನಡೆದ ಮಾತುಕತೆಯಲ್ಲಿ ಇಂತಹ ಯಾವುದೇ ಪ್ರಸ್ತಾವನೆ ಪ್ರಸ್ತುತ ಸಚಿವಾಲಯದ ಪರಿಗಣನೆಯಲ್ಲಿಲ್ಲ ಎಂಬುದು ದೃಢಪಟ್ಟಿದೆ.
ಕೊಡಗು ಪ್ರದೇಶಕ್ಕೆ ಸಂಬAಧಿಸಿದ ಯಾವುದೇ ಭವಿಷ್ಯದ ಮೂಲಸೌಕರ್ಯ ಯೋಜನೆಯನ್ನು ಕೈಗೊಳ್ಳುವ ಮೊದಲು, ಎಲ್ಲಾ ಹಿತಾಸಕ್ತಿಪಕ್ಷಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಹಾಗೂ ಜಿಲ್ಲೆಯ ಪರಿಸರ, ಪರಿಸ್ಥಿತಿ ಮತ್ತು ಅಭಿವೃದ್ಧಿ ಸಂಬAಧಿತ ಹಿತಾಸಕ್ತಿಗಳನ್ನು ಪರಿಗಣಿಸಲಾಗುವುದು ಎಂದು ಒತ್ತಿ ಹೇಳಿದ್ದಾರೆ.
ಕೊಡಗಿನ ಸಮತೋಲಿತ ಅಭಿವೃದ್ಧಿಯನ್ನು ಖಚಿತಪಡಿಸುವುದರ ಜೊತೆಗೆ ಅದರ ವಿಶಿಷ್ಟ ಪರಿಸರ ಮತ್ತು ಸಾಂಸ್ಕöÈತಿಕ ಪರಂಪರೆಯನ್ನು ಸಂರಕ್ಷಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ಅಲ್ಲದೆ, ಪ್ರದೇಶದ ಹಿತಕ್ಕಾಗಿ ಉತ್ತಮ ಸಂಪರ್ಕ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬAಧಿಸಿದ ವಿಷಯಗಳಲ್ಲಿ ರೈಲ್ವೆ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುವುದಾಗಿ ನಾಗರಿಕರಿಗೆ ಭರವಸೆ ನೀಡಿದರು.
ಊಹಾಪೋಹಗಳ ಆಧಾರದ ಮೇಲಿನ ವರದಿಗಳಿಂದ ಸಾರ್ವಜನಿಕರು ದಾರಿ ತಪ್ಪಬಾರದು ಎಂದು ಸಂಸದರು ಮನವಿ ಮಾಡಿದರು. ಈ ವಿಷಯಕ್ಕೆ ಸಂಬAಧಿಸಿದ ಯಾವುದೇ ಅಧಿಕೃತ ಬೆಳವಣಿಗೆಯನ್ನು ಸೂಕ್ತ ಮಾರ್ಗಗಳ ಮೂಲಕ ಪಾರದರ್ಶಕವಾಗಿ ತಿಳಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.