Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ಸಿಗಲೆಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು


ಮೈಸೂರು; ಜಿಲ್ಲೆಯ ಎಚ್.ಡಿ ಕೋಟೆ ಕ್ಷೇತ್ರದ ಶಾಸಕ ಅನೀಲ್ ಚಿಕ್ಕಮಾದುಗೆ ಸಚಿವ ಸ್ಥಾನ ಸಿಗಬೇಕೆಂದು ಅಭಿಮಾನಿಗಳು ಮಂಗಳವಾರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮೈಸೂರಿನ ಅಗ್ರಹಾರದಲ್ಲಿರುವ ಮಹಾಗಣಪತಿ ದೇವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿನಗರ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು ಮಹಾಗಣಪತಿಗೆ ಹಿಡುಗಾಯಿ ಸೇವೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ನಗರಪಾಲಿಕೆಯ ಮಾಜಿ ಸದಸ್ಯ ಲೋಕೇಶ್ ಪಿಯಾ,
ಹಳೆ ಮೈಸೂರು ಭಾಗದಲ್ಲಿ ಏಕೈಕ ನಾಯಕ ಸಮುದಾಯದ ಯುವನಾಯಕರಾದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಕಾಂಗ್ರೆಸ್ ಹೈಕಮಾಂಡ್, ನೂತನ ಮುಖ್ಯಮಂತ್ರಿಗಳು ಸಚಿವ ಸ್ಥಾನ ನೀಡಬೇಕು.
ಮೈಸೂರು ಭಾಗದಲ್ಲಿ ನಾಯಕ ಸಮುದಾಯದ ಜಿ.ಟಿ.ಜಯಕುಮಾರ್ ಬಿಟ್ಟರೆ, ಬೇರೆ ಯಾರಿಗೂ ಅವಕಾಶ ಸಿಕ್ಕಿಲ್ಲ. ಹಾಗಾಗಿ ನಾಯಕ ಜನಾಂಗಕ್ಕೆ ಸಚಿವ ಸ್ಥಾನ ನೀಡಿ, ಮುಂದಿನ ದಿನಗಳಲ್ಲಿ ನಾವು ಜನರ ಬಳಿ ಮತಯಾಚನೆ ಮಾಡಬಹುದು. ಇಲ್ಲವಾದರೆ ನಾಯಕ ಸಮುದಾಯ ಬಳಿ ಮತ ಕೇಳಲು ಸಾಧ್ಯವಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ನಾರಾಯಣ್, ವಸಂತ್ ,ರವಿ ,ನಜಾರಬಾದ್ ನಾಗೇಶ್ ನಾಯಕ್ ,ಕೃಷ್ಣ, ಶೇಖರ್, ಶಿವು ,ರಂಗ ಸ್ವಾಮೀ ,ಹಾಗೂ ನೂರಾರು ಅಭಿಮಾನಿಗಳು ಹಾಜರಿದ್ದರು.