3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಉದಯನಿಧಿ ಸ್ಟಾಲಿನ್ ಆಧ್ಯಾತ್ಮಿಕ ನಂಬಿಕೆಗಳು ಮತ್ತು ಸನಾತನ ಸಂಸ್ಕöÈತಿಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು; ಬಿ.ಎಂ.ಸAತೋಷ್ ಕುಮಾರ್


ಮೈಸೂರು; ತಮಿಳುನಾಡಿನ ಡಿಎಂಕೆ ಪಕ್ಷದ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಮೊದಲು ತಮ್ಮ ಮನೆಯವರೇ ಅನುಸರಿಸುತ್ತಿರುವ ಆಧ್ಯಾತ್ಮಿಕ ನಂಬಿಕೆಗಳು ಮತ್ತು ಸನಾತನ ಸಂಸ್ಕöÈತಿಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಎಂದು ಬಿಜೆಪಿ ಮೈಸೂರು ನಗರ ಮಾಧ್ಯಮ ಸಹ ವಕ್ತಾರ ಬಿ.ಎಂ.ಸAತೋಷ್‌ಕುಮಾರ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು , ತಮಿಳುನಾಡಿನ ಡಿಎಂಕೆ ಪಕ್ಷದ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆಗಳು ದೇಶಾದ್ಯಂತ ಚರ್ಚೆಗೆ ಕಾರಣವಾಗಿವೆ. ಆದರೆ ಇದೇ ಸಂದರ್ಭದಲ್ಲಿ ಅವರ ಕುಟುಂಬದ ಸದಸ್ಯರು ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿರುವುದು ಸನಾತನ ಸಂಸ್ಕöÈತಿ ಮತ್ತು ಆಧ್ಯಾತ್ಮಿಕ ಪರಂಪರೆಯ ಮೇಲಿನ ಗೌರವವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಉದಯನಿಧಿ ಸ್ಟಾಲಿನ್ ಅವರ ತಾಯಿ ದುರ್ಗಾ ಸ್ಟಾಲಿನ್ ಅವರು ಮೈಸೂರು ನಗರಕ್ಕೆ ಆಗಮಿಸಿ ಜಗನ್ಮಾತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದು, ನಂತರ
ಶ್ರೀರಂಗಪಟ್ಟಣದ ನಿಮಿಷಾಂಭ ದೇವಿಯ ದೇವಸ್ಥಾನಕ್ಕೂ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಈ ಬೆಳವಣಿಗೆ ಸನಾತನ ಸಂಸ್ಕöÈತಿ ಕೇವಲ ಒಂದು ಧಾರ್ಮಿಕ ಪರಿಕಲ್ಪನೆಯಲ್ಲ, ಅದು ಜನರ ಬದುಕಿನ ಭಾಗವಾಗಿ ಬೆಸೆದುಕೊಂಡಿರುವ ಜೀವನ ಮೌಲ್ಯವಾಗಿದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಹೇಳಿದ್ದಾರೆ.
ಮತಗಳ ರಾಜಕಾರಣಕ್ಕಾಗಿ ಧರ್ಮ ಮತ್ತು ಸಂಸ್ಕöÈತಿಯ ವಿಚಾರಗಳನ್ನು ಬಳಸುವ ಪ್ರಯತ್ನಗಳನ್ನು ಜನರು ಸೂಕ್ಷ÷್ಮವಾಗಿ ಗಮನಿಸುತ್ತಿದ್ದಾರೆ.
ಸನಾತನ ಧರ್ಮವು ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕöÈತಿ, ಆಧ್ಯಾತ್ಮಿಕತೆ ಮತ್ತು ಜೀವನ ಮೌಲ್ಯಗಳನ್ನು ಒಳಗೊಂಡಿರುವ ಪರಂಪರೆಯಾಗಿದೆ. ಇತಿಹಾಸದುದ್ದಕ್ಕೂ ಅನೇಕ ಸವಾಲುಗಳು, ದಾಳಿಗಳು ಮತ್ತು ವಿರೋಧಗಳನ್ನು ಎದುರಿಸಿದರೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಬಂದಿರುವ ಈ ಸಂಸ್ಕöÈತಿಯ ಶಕ್ತಿ ಅದರ ಅನುಯಾಯಿಗಳ ನಂಬಿಕೆ ಮತ್ತು ಆಚರಣೆಗಳಲ್ಲಿ ಅಡಕವಾಗಿದೆ.
ಹಿಂದೂ ದೇವಾಲಯಗಳು ಹಾಗೂ ಧಾರ್ಮಿಕ ಸಂಕೇತಗಳ ಮೇಲೆ ನಡೆದ ದಾಳಿಗಳ ಸಂದರ್ಭಗಳಲ್ಲಿಯೂ ಸನಾತನ ಸಂಸ್ಕöÈತಿಯನ್ನು ಕಾಪಾಡಿಕೊಂಡು ಬಂದಿರುವ ಭಕ್ತರ ಶ್ರದ್ಧೆ ಮತ್ತು ಬದ್ಧತೆ ಇಂದು ಕೂಡ ಅಚಲವಾಗಿದೆ. ಅಂತಹ ಪರಂಪರೆಯನ್ನು ಕೇವಲ ರಾಜಕೀಯ ಹೇಳಿಕೆಗಳಿಂದ ಅಳಿಸಲು ಸಾಧ್ಯವಿಲ್ಲ ಎಂಬುದನ್ನು ಇತಿಹಾಸವೇ ಸಾಬೀತುಪಡಿಸಿದೆ ಎಂದು ಅವರು ಹೇಳಿದ್ದಾರೆ. ಸನಾತನ ಸಂಸ್ಕöÈತಿಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು ಕೋಟ್ಯಾಂತರ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟುಮಾಡುತ್ತದೆ.
ಇಂತಹ ಹೇಳಿಕೆಗಳನ್ನು ಸಮಾಜ ಒಪುö್ಪವುದಿಲ್ಲ ಮತ್ತು ಪ್ರಜಾಪ್ರಭುತ್ವದ ಮಾರ್ಗದಲ್ಲಿಯೇ ಜನರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾರೆ ಎಂದು ತಿಳಿಸಿದ್ದಾರೆ