Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಡಿ.ಕೆ. ಶಿವಕುಮಾರ್ ಸಿಎಂ ಪಟ್ಟಾಭಿಷೇಕದ ಸಂಭ್ರಮ; ಬಸ್ ಪ್ರಯಾಣಿಕರು, ವಾಹನ ಸವಾರರಿಗೆ ಸಿಹಿ ಹಂಚಿದ ಬೆಂಬಲಿಗರು!


ಮೈಸೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಸಾಂಸ್ಕöÈತಿಕ ನಗರಿ ಮೈಸೂರಿನಲ್ಲಿ ಅವರ ಅಭಿಮಾನಿಗಳು ಮತ್ತು ಕಾಂಗ್ರೆಸ್ ಬೆಂಬಲಿಗರ ಸಂಭ್ರಮ ಮುಗಿಲು ಮುಟ್ಟಿದೆ.
ನಗರದ ಪ್ರಮುಖ ರಸ್ತೆಯಾದ ಚಾಮರಾಜ ಜೋಡಿ ರಸ್ತೆಯಲ್ಲಿ ಜಮಾಯಿಸಿದ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿ ಬಳಗದ ನೂರಾರು ಬೆಂಬಲಿಗರು, ತಮ್ಮ ನೆಚ್ಚಿನ ನಾಯಕನ ಪರವಾಗಿ ಜೈಕಾರದ ಘೋಷಣೆಗಳನ್ನು ಕೂಗಿ ಸಡಗರ ಪಟ್ಟಿದ್ದಾರೆ. ಅಲ್ಲದೆ, ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದ್ದಾರೆ.
ಬಸ್ ಪ್ರಯಾಣಿಕರು, ಸವಾರರಿಗೆ ಸಿಹಿ ವಿತರಣೆ:
ಚಾಮರಾಜ ಜೋಡಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಬಸ್‌ಗಳನ್ನು ತಡೆದು, ಒಳಗಿದ್ದ ಪ್ರಯಾಣಿಕರು ಹಾಗೂ ಚಾಲಕನಿರ್ವಾಹಕರಿಗೆ ಅಭಿಮಾನಿಗಳು ಸಿಹಿ ತಿನಿಸಿದರು. ಇದರೊಂದಿಗೆ ರಸ್ತೆಯಲ್ಲಿ ಹೋಗುತ್ತಿದ್ದ ದ್ವಿಚಕ್ರ ವಾಹನ ಸವಾರರು, ಆಟೋ ಚಾಲಕರು ಹಾಗೂ ಸಾರ್ವಜನಿಕರಿಗೂ ಸಿಹಿ ಹಂಚಿ ಸಂತಸ ಹಂಚಿಕೊAಡರು.
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಡಿಕೆ ಶಿವಕುಮಾರ್ ಅಭಿಮಾನಿ ಬಳಗದ ಮೈಸೂರು ಘಟಕದ ಅಧ್ಯಕ್ಷ ಜಿ.ರಾಘವೇಂದ್ರ, ಶೇಖರ್, ಕಿರಣ್,ಎಸ್.ಎನ್.ರಾಜೇಶ್, ರವಿಚಂದ್ರ, ಚಂದ್ರು, ಲಕ್ಷ÷್ಮಣ, ನಾಗರಾಜು , ಮುಸಿರಾ, ಚಂದ್ರು, ಮಂಜು ,ವಿನೋದ್, ಮಾಯಣ್ಣ, ಪೂಜಾರಿನಟರಾಜ್ ,ಅನಿಲ್, ಯೋಗೇಶ್ ನಾಯ್ಡು, ಹರೀಶ್ ,ರಾಕೇಶ್, ಹಾಗೂ ಇನ್ನಿತರರು ಹಾಜರಿದ್ದರು