3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮತ್ತೊಂದು ಮದುವೆಯಾಗುತ್ತಿದ್ದಾರೆ ಚಿತ್ರ ನಟ ಅಮೀರ್ ಖಾನ್ !


ಬಾಲಿವುಡ್‌ನಲ್ಲಿ ಚಿತ್ರ ನಟರ ಲವ್, ಬ್ರೇಕಪ್, ಮದುವೆ ಹಾಗೂ ಡಿವೋರ್ಸ್ ತುಂಬಾನೇ ಮಾಮೂಲು. ಕೆಲವು ವರ್ಷಗಳ ಹಿಂದಷ್ಟೇ ಗೌರಿ ಖಾನ್ ಅವರಿಗೆ ಡಿವೋರ್ಸ್ ಕೊಟ್ಟಿದ್ದ ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂದೇ ಖ್ಯಾತಿ ಪಡೆದಿರುವ ಬಾಲಿವುಡ್ ನಟ ಆಮಿರ್ ಖಾನ್ ಅವರು ಈಗ ಮತ್ತೊಂದು ಮದುವೆಯಾಗುತ್ತಿದ್ದಾರೆ .
61 ವರ್ಷ ವಯಸ್ಸಿನ ಬಾಲಿವುಡ್ ನಟ ಅಮಿರ್ ಖಾನ್ ಅವರು ಜುಲೈ 5 ರಂದು ಖಾಸಗಿ ಸಮಾರಂಭದಲ್ಲಿ ಬೆಂಗಳೂರಿನ ತಮ್ಮ ಗೆಳತಿ ಗೌರಿ ಸ್ಪಾçಟ್ ಅವರನ್ನು ಮದುವೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಮದುವೆ ಯಾವುದೇ ಅದ್ಧೂರಿ ಕಾರ್ಯಕ್ರಮವಲ್ಲದೆ, ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ನಡೆಯುವ ನೋಂದಣಿ ವಿವಾಹವಾಗಿರಲಿದೆ ಎಂದು ತಿಳಿದುಬಂದಿದೆ.ಸೂಪರ್ ಸ್ಟಾರ್ ಅಮಿರ್ ಖಾನ್ ಅವರು ಈ ಹಿಂದೆ ರೀನಾ ದತ್ತಾ ಮತ್ತು ಕಿರಣ್ ರಾವ್ ಅವರನ್ನು ವಿವಾಹವಾಗಿದ್ದರು. ಇದೀಗ ಮೂರನೇ ಬಾರಿ ಗೌರಿ ಸ್ಪಾçಟ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. 47 ವರ್ಷದ ಗೌರಿ ಸ್ಪಾçಟ್ ಅವರು ಏಳು ವರ್ಷದ ಮಗುವಿನ ತಾಯಿ ಆಗಿದ್ದಾರೆ.
ಕಳೆದ ವರ್ಷ ತಮ್ಮ 60ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅಮೀರ್ ಖಾನ್ ತಮ್ಮ ಬೆಂಗಳೂರಿನ ಗೆಳತಿಯನ್ನು ಮಾಧ್ಯಮಗಳಿಗೆ ಪರಿಚಯಿಸಿದ್ದರು.
ಪತ್ರಿಕಾಗೋಷ್ಠಿಯಲ್ಲಿ, ಗೌರಿ ತಮ್ಮ ನಿರ್ಮಾಣ ಸಂಸ್ಥೆಯೊAದಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಆಮಿರ್ ಖಾನ್ ಹೇಳಿದ್ದರು.
ಬಳಿಕ ಆಮಿರ್ ಖಾನ್ ಮತ್ತು ಗೌರಿ ಸ್ಪಾçಟ್ ಅವರ ಸಂಬAಧದ ಬಗ್ಗೆ ಹಲವು ಊಹಾಪೋಹಗಳು ಕೇಳಿಬರುತ್ತಿದ್ದವು. ಇದೀಗ ಆ ಸಂಬAಧಕ್ಕೆ ಕಾನೂನುಬದ್ಧ ಮಾನ್ಯತೆ ನೀಡಲು ಇಬ್ಬರೂ ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಈ ಬೆಳವಣಿಗೆ ಬಾಲಿವುಡ್ ಅಭಿಮಾನಿಗಳಲ್ಲಿ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
ಗೌರಿ ಸ್ಪಾçಟ್ ಯಾರು ಗೊತ್ತಾ ;
ಗೌರಿ ಸ್ಪಾçಟ್ ಅವರು ಮೂಲತಃ ಬೆಂಗಳೂರಿನವರು ಮತ್ತು ತಮ್ಮ ಜೀವನದ ಬಹುಪಾಲು ಕಾಲವನ್ನು ಈ ನಗರದಲ್ಲಿ ಕಳೆದಿದ್ದಾರೆ. ಅವರು ಬೆಂಗಳೂರಿನಲ್ಲಿ ಸಲೂನ್ ಹೊಂದಿದ್ದ ರೀಟಾ ಸ್ಪಾçಟ್ ಅವರ ಮಗಳು.
ಗೌರಿ ಅವರ ಲಿಂಕ್ಡ್ಇನ್ ಪ್ರೊಫೈಲ್ ಪ್ರಕಾರ, ಗೌರಿ ಬ್ಲೂ ಮೌಂಟೇನ್ ಶಾಲೆಯಲ್ಲಿ ಓದಿದ್ದು, 2004 ರಲ್ಲಿ ಲಂಡನ್ ವಿಶ್ವವಿದ್ಯಾಲಯದಲ್ಲಿ ಆರ್ಟ್್ಸನಲ್ಲಿ ಫ್ಯಾಷನ್ ಕೋರ್ಸ್, ಎಫ್‌ಡಿಎ ಸ್ಟೆöÊಲಿಂಗ್ ಮತ್ತು ಫೋಟೋಗ್ರಫಿಯನ್ನು ಪೂರ್ಣಗೊಳಿಸಿದ್ದಾರೆ.
ಪ್ರೊಫೈಲ್ ಪ್ರಕಾರ, ಅವರು ಪ್ರಸ್ತುತ ಮುಂಬೈನಲ್ಲಿ ಬಿಬ್ಲಂಟ್ ಸಲೂನ್ ಅನ್ನು ನಡೆಸುತ್ತಿದ್ದಾರೆ