3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿಜಯ ವಿಠಲ ವಿದ್ಯಾಶಾಲೆಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ


ಮೈಸೂರು; ನಗರದ ವಿಜಯ ವಿಠಲ ವಿದ್ಯಾಶಾಲೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ಪ್ರೀ-ಕೆಜಿ ಮತ್ತು ಎಲ್ಕೆಜಿ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಶುಭಾರಂಭವನ್ನು ಸೂಚಿಸುವ ‘ಅಕ್ಷರಾಭ್ಯಾಸ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಪವಿತ್ರ ಮಂತ್ರೋಚ್ಚಾರಣೆ ಹಾಗೂ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಕಾರ್ಯಕ್ರಮವು ಪ್ರಾರಂಭಗೊAಡು, ಆಧ್ಯಾತ್ಮಿಕ ವಾತಾವರಣವನ್ನು ಸೃಷ್ಟಿಸಿತು. ಸಾಂಪ್ರದಾಯಿಕ ಉಡುಪಿನಲ್ಲಿ ಸಜ್ಜಾಗಿದ್ದ ಪುಟಾಣಿ ವಿದ್ಯಾರ್ಥಿಗಳು, ತಮ್ಮ ಪೋಷಕರ ಸಮ್ಮುಖದಲ್ಲಿ ಅಕ್ಷರಾಭ್ಯಾಸ ವಿಧಿಯಲ್ಲಿ ಅತ್ಯಂತ ಉತ್ಸಾಹದಿಂದ ಪಾಲ್ಗೊಳ್ಳುವ ಮೂಲಕ ಜ್ಞಾನದ ಲೋಕಕ್ಕೆ ತಮ್ಮ ಪ್ರಥಮ ಹೆಜ್ಜೆಯನ್ನಿಟ್ಟರು.
ಈ ವೆಳೆ ಮಾತನಾಡಿದ ಗೌರವ ಕಾರ್ಯದರ್ಶಿ ಸಿ.ಎ. ವಿಶ್ವನಾಥ ಎ, ವ್ಯಕ್ತಿಯ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಣದ ಮಹತ್ವವನ್ನು ಬಲವಾಗಿ ಪ್ರತಿಪಾದಿಸಿದರು. ಮಕ್ಕಳ ಬೆಳವಣಿಗೆ ಮತ್ತು ವಿಕಸನದಲ್ಲಿ ಪೋಷಕರ ಪಾತ್ರ ಅತ್ಯಂತ ಪ್ರಮುಖವಾದುದು ಎಂದು ಒತ್ತಿ ಹೇಳಿದರು. ಮಕ್ಕಳ ಶೈಕ್ಷಣಿಕ ಪಥದುದ್ದಕ್ಕೂ ಪೋಷಕರು ಸಕ್ರಿಯವಾಗಿ ಬೆಂಬಲ ನೀಡಬೇಕೆಂದು ತಿಳಿಸಿದರು.
ಪ್ರಾಂಶುಪಾಲರಾದ ವೀಣಾ ಎಸ್.ಎ., ಪೋಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.