3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಹುಣಸೂರಿಗೆ ಮತ್ತೊಂದು ಬಿಎಲ್‌ಎಸ್ ಅಂಬುಲೆನ್ಸ್


*ಅಪಘಾತ, ತುರ್ತು ಚಿಕಿತ್ಸೆಗೆ ಅನುಕೂಲ ತಾಲೂಕಿನ ಎರಡು ಲಕ್ಷ ಜನರಿಗೆ ಹೆಚ್ಚುವರಿ ಆರೋಗ್ಯ ಭದ್ರತೆ
ಮೈಸೂರು; ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯ ಸಿಎಸ್‌ಆರ್ ನಿಧಿಯಡಿ ಆರೋಗ್ಯ ಇಲಾಖೆಗೆ ಕೊಡುಗೆಯಾಗಿ ನೀಡಲಾದ ಬೇಸಿಕ್ ಲೈಫ್ ಸಪೋರ್ಟ್ ಅಂಬುಲೆನ್ಸ್ ಅನ್ನು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಿ.ಸಿ. ಕುಮಾರಸ್ವಾಮಿ ಗುರುವಾರ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದರು.
ಮೈಸೂರಿನ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಅಂಬುಲೆನ್ಸ್ಗೆ ಚಾಲನೆ ನೀಡಲಾಯಿತು. ಬಳಿಕ ಮಾತನಾಡಿದ ಅವರು, ರಾಷ್ಟಿçಯ ಹೆದ್ದಾರಿಯ ಮೂಲಕ ಸಂಪರ್ಕ ಹೊಂದಿರುವ ಹುಣಸೂರು ಭಾಗದಲ್ಲಿ ರಸ್ತೆ ಅಪಘಾತಗಳ ಸಂಭವ ಹೆಚ್ಚಿರುವ ಹಿನ್ನೆಲೆಯಲ್ಲಿ , ತುರ್ತು ವೈದ್ಯಕೀಯ ಸೇವೆಯನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿತ್ತು. ಈ ಹಿನ್ನೆಲೆ ಹೆಚ್ಚುವರಿ ಅಂಬುಲೆನ್ಸ್ ಸೇವೆ ಸಾರ್ವಜನಿಕರಿಗೆ ನೆರವಾಗಲಿದೆ ಎಂದು ತಿಳಿಸಿದರು.
ಹೊಸ ಬಿಎಲ್‌ಎಸ್ ಅಂಬುಲೆನ್ಸ್ನಲ್ಲಿ ಆಕ್ಸಿಜನ್ ವ್ಯವಸ್ಥೆ, ಸಕ್ಷನ್ ಯಂತ್ರ, ತುರ್ತು ಜೀವ ರಕ್ಷಕ ಉಪಕರಣಗಳು ಸೇರಿದಂತೆ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಅಳವಡಿಸಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ ರೋಗಿಗಳನ್ನು ತ್ವರಿತವಾಗಿ ಜಿಲ್ಲಾ ಆಸ್ಪತ್ರೆ ಅಥವಾ ಉನ್ನತ ಚಿಕಿತ್ಸಾ ಕೇಂದ್ರಗಳಿಗೆ ಸಾಗಿಸಲು ಇದು ನೆರವಾಗಲಿದೆ ಎಂದು ಮಾಹಿತಿ ನೀಡಿದರು.
ಎರಡು ಲಕ್ಷ ಜನರಿಗೆ ಪ್ರಯೋಜನ :
ಹುಣಸೂರು ತಾಲೂಕಿನಲ್ಲಿ ಸುಮಾರು ಎರಡು ಲಕ್ಷ ಜನಸಂಖ್ಯೆ ಇದ್ದು, ಪಟ್ಟಣ ವ್ಯಾಪ್ತಿಯಲ್ಲೇ ಸುಮಾರು 50 ಸಾವಿರ ಜನರು ವಾಸಿಸುತ್ತಿದ್ದಾರೆ. ಈಗಾಗಲೇ ಎರಡು ಅಂಬುಲೆನ್ಸ್ಗಳು ಕಾರ್ಯನಿರ್ವಹಿಸುತ್ತಿದ್ದರೂ, ಹೆಚ್ಚುತ್ತಿರುವ ತುರ್ತು ವೈದ್ಯಕೀಯ ಅವಶ್ಯಕತೆ ಹಿನ್ನೆಲೆಯಲ್ಲಿ ಮತ್ತೊಂದು ಅಂಬುಲೆನ್ಸ್ ಸೇರ್ಪಡೆ ಮಹತ್ವದ್ದಾಗಿದೆ ಎಂದು ತಿಳಿಸಿದರು
ಗರ್ಭಿಣಿಯರು, ನವಜಾತ ಶಿಶುಗಳಿಗೆ ನೆರವು :
ಹುಣಸೂರು ಸಾರ್ವಜನಿಕ ತಾಲೂಕು ಆಸ್ಪತ್ರೆಯಿಂದ ಪ್ರತಿದಿನ ಸರಾಸರಿ 5 ರಿಂದ 6 ತುರ್ತು ಪ್ರಕರಣಗಳನ್ನು ಮೈಸೂರಿಗೆ ರವಾನಿಸಲಾಗುತ್ತದೆ. ಗರ್ಭಿಣಿಯರು, ನವಜಾತ ಶಿಶುಗಳು ಹಾಗೂ ಎನ್‌ಐಸಿಯು ಚಿಕಿತ್ಸೆಯ ಅಗತ್ಯವಿರುವ ಮಕ್ಕಳನ್ನು ತ್ವರಿತವಾಗಿ ಜಿಲ್ಲಾ ಕೇಂದ್ರಕ್ಕೆ ಸಾಗಿಸಲು ಈ ಸೇವೆ ಸಹಕಾರಿಯಾಗಲಿದೆ. 24 ಗಂಟೆಯೂ ಸುಸಜ್ಜಿತ ತುರ್ತು ವೈದ್ಯಕೀಯ ಸೇವೆ ಒದಗಿಸುವಲ್ಲಿ ಹೊಸ ವಾಹನ ಮಹತ್ವದ ಪಾತ್ರ ವಹಿಸಲಿದೆ ಎಂದರು.
ತುರ್ತು ಚಿಕಿತ್ಸೆ ಗೆ ಪೂರಕ :
ಪಿಎಚ್ ಸಿ ಹಂತದಲ್ಲಿ ಕೇವಲ ಪ್ರಾಥಮಿಕ ಚಿಕಿತ್ಸೆ ದೊರೆಯುತ್ತದೆ. ತಾಲೂಕು ಆಸ್ಪತ್ರೆಗಳಲ್ಲಿ ಮೊದಲ ಹಂತದ ಚಿಕಿತ್ಸೆ ದೊರೆಯುತ್ತದೆ. ಇನ್ನೂ ಹೆಚ್ಚುವರಿ ಚಿಕಿತ್ಸೆ ಬೇಕಾದಲ್ಲಿ ಜಿಲ್ಲಾ ಆಸ್ಪತ್ರೆಗೆ ಬರಬೇಕಾಗುತ್ತದೆ. ಆ ರೀತಿಯ ಅಗತ್ಯವಿರುವ ರೋಗಿಗಳನ್ನು ತಾಲೂಕು ಕೇಂದ್ರದಿAದ ಜಿಲ್ಲಾ ಆಸ್ಪತ್ರೆಗಳಿಗೆ ಕರೆತರಲು ಸುಸಜ್ಜಿತ ಅಂಬುಲೆನ್ಸ್ ಸೇವೆ ಅಗತ್ಯವಿದ್ದು ಜಿಲ್ಲೆಯಲ್ಲಿ ಸದ್ಯ ಅಗತ್ಯಕ್ಕೆ ತಕ್ಕಷ್ಟು ಅಂಬುಲೆನ್ಸ್ ಇವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಅಧಿಕಾರಿಗಳಾದ ಸಿರಾಜ್ ಅಹಮದ್, ಗೋಪಿನಾಥ್, ಹುಣಸೂರು ಸಾರ್ವಜನಿಕ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶಿವಶಂಕರ್ ಹಾಗೂ ಎಚ್‌ಪಿಸಿಎಲ್ ನ ಪೈಪ್ ಲೈನ್ ವಿಭಾಗದ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆರ್. ರಮೇಶ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಬಿ.ವಿಜಯ್ ಕುಮಾರ್, ಆಪರೇಷನ್ ವಿಭಾಗದ ಜನರಲ್ ಮ್ಯಾನೇಜರ್ ಪಿ. ಅಜಿತ್ ಹಾಗೂ ಇತರರು ಉಪಸ್ಥಿತರಿದ್ದರು.