Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜೀವಾಧಾರ ರಕ್ತನಿಧಿ ಕೇಂದ್ರಕ್ಕೆ ರಾಷ್ಟಿçಯ ಮನ್ನಣೆಯ ಗೌರವ


ಮೈಸೂರು: ಸಾವಿರಾರು ದಾನಿಗಳ ನೆರವನಿಂದ ಲಕ್ಷಕ್ಕೂ ಅಧಿಕ ಮಂದಿಯ ಜೀವವನ್ನು ಉಳಿಸುವ ನಿಟ್ಟಿನಲ್ಲಿ 18 ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಸಾಂಸ್ಕöÈತಿನ ನಗರಿಯ ರಕ್ತನಿಧಿ ಜೀವಾಧಾರ ಕೇಂದ್ರದ ಸೇವೆ ರಾಷ್ಟಿçÃಯ ಪ್ರಶಸ್ತಿಯ ಮನ್ನಣೆ ದೊರೆತಿದೆ.
ಬರೋಬ್ಬರಿ ನಾಲ್ಕು ಸಾವಿರಕ್ಕೂ ಹೆಚ್ಚು ರಕ್ತದಾನಿಗಳನ್ನು ಒಗ್ಗೂಡಿಸಿ 18 ವರ್ಷದಲ್ಲಿ ಲಕ್ಷಾಂತರ ಮಂದಿಯ ಜೀವ ಉಳಿಸುವ ನಿಟ್ಟಿನಲ್ಲಿ ನಿರಂತರ ಸಹಕಾರ ನೀಡುತ್ತಿರುವ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿಯೂ ರಕ್ತದಾನ ಬಗ್ಗೆ ಅರಿವು ಮೂಡಿಸುತ್ತಾ ಜಿಲ್ಲೆಯಲ್ಲಿ ರಕ್ತದ ಕೊರತೆ ಬಾರದಂತೆ ನೋಡಿಕೊಳ್ಳುತ್ತಿರುವ ಕೇಂದ್ರ ಸೇವೆಗೆ ಈ ಪ್ರಶಸ್ತಿ ಲಭಿಸಿದೆ
ಕರ್ನಾಟಕ ರಾಜ್ಯ ರಕ್ತ ವರ್ಗಾವಣೆ ಮಂಡಳಿಯು ಈ ಕುರಿತು ಮಾಹಿತಿ ನೀಡಿದ್ದು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆರೋಗ್ಯ ಸೇವೆಗಳ ಮಹಾ ನಿರ್ದೇಶನಾಲಯವು ಜೂ.16ರಂದು ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ಆಯೋಜಿಸಿರುವ ವಿಶ್ವ ರಕ್ತದಾನಿಗಳ ದಿನ ಅಂಗವಾಗಿ ಆಯೋಜಿಸಿರುವ ರಕ್ತದಾನಿ ಎನ್‌ಜಿಓಗಳ ಸಮ್ಮೇಳನದಲ್ಲಿ ಸರ್ಕಾರೇತರ ಸಂಘ ಸಂಸ್ಥೆಗಳಿಗೆ ನೀಡುವ ರಾಷ್ಟಿçÃಯ ಪ್ರಶಸ್ತಿಗೆ ಮೈಸೂರಿನ ಜೀವಧಾರ ರಕ್ತನಿಧಿ ಕೇಂದ್ರವನ್ನು ಆಯ್ಕೆ ಮಾಡಿರುವುದಾಗಿ ಘೋಷಿಸಿದೆ.
ಕಳೆದ 5ವರ್ಷದಲ್ಲಿ ಸರಿಸುಮಾರು 5000 ಯೂನಿಟ್ ರಕ್ತವನ್ನು ಬಡ ರೋಗಿಗಳಿಗೆ ಉಚಿತವಾಗಿ ನೀಡುವ ಜತೆಗೆ ಹದಿನೈದು ಲಕ್ಷದವರೆಗೆ ರಕ್ತದ ಅಭಾವವನ್ನು ನೀಗಿಸಿದ ಸಾಧನೆ ರಕ್ತನಿಧಿ ಕಾರ್ಯದ್ದಾಗಿದೆ. ಹೀಗಾಗಿ ಜೀವದಾರ ರಕ್ತ ನಿಧಿ ಕೇಂದ್ರಕ್ಕೆ ಅತ್ಯುತ್ತಮ ರಾಷ್ಟಿçÃಯ ಸ್ವಯಂ ಸೇವಾ ಸಂಸ್ಥೆ ಎಂದು ಬಿರುದಿಗೆ ಆಯ್ಕೆಯಾಗಿರುವುದಾಗಿ ತಿಳಿಸಿದೆ. ಜತೆಗೆ ಅಂದಿನ ಕಾರ್ಯಕ್ರಮಕ್ಕೆ ಆಗಮಿಸಿ ಪ್ರಶಸ್ತಿ ಸ್ವೀಕರಿಸುವಂತೆಯೂ ಆಹ್ವಾನ ನೀಡಿದೆ.
ಇನ್ನೂ ಈ ಕುರಿತು ಸಂತಸ ಹಂಚಿಕೊAಡಿರುವ ಜೀವಾಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ , ಪ್ರಶಸ್ತಿ, ಬಿರುದಿಗಾಗಿ ಈ ಕಾರ್ಯ ಮಾಡುತ್ತಿಲ್ಲ. ಒಬ್ಬರಿಂದ ಮತ್ತೊಂದು ಜೀವ ಉಳಿಸುವ ನಿಟ್ಟಿನಲ್ಲಿ ಅಳಿಲು ಸೇವೆಯಾಗಿ ಪ್ರಾರಂಭಗೊAಡ ಕೇಂದ್ರ ಇದಾಗಿದೆ. ಇದರ ಬೆಳವಣಿಗೆಗೆ ನಾನೊಬ್ಬನೇ ಕಾರಣನಲ್ಲೇ ಅನೇಕ ರಕ್ತದಾನಿಗಳು ಸ್ವಯಂ ಪ್ರೇರಣೆಯಿಂದ ನೀಡುತ್ತಿರುವ ಸಹಕಾರವೇ ಕೇಂದ್ರ ಇಂತಹ ಪ್ರಶಸ್ತಿಗೆ ಭಾಜನವಾಗಿರುವುದಕ್ಕೆ ಕಾರಣವಾಗಿದೆ. ಇಂತಹ ಪ್ರಶಸ್ತಿಗಳು ಮತ್ತಷ್ಟು ಜವಾಬ್ದಾರಿಯನ್ನು ಹೆಚ್ಚಿಸಿ ಇನ್ನಷ್ಟು ಕೆಲಸ ಮಾಡಲು ಶಕ್ತಿ ನೀಡುತ್ತವೆ. ಸಂಸ್ಥೆಯನ್ನು ಆಯ್ಕೆ ಮಾಡಿದವರಿಗೆ ಅಭಿನಂದನೆ ತಿಳಿಸುವುದಾಗಿ ತಿಳಿಸಿದ್ದಾರೆ.