3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪರಿಸರವನ್ನು ಕೇವಲ ಹಸಿರಿಗಾಗಿ ಅಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಬೇಕು; ಮ ವಿ ರಾಮಪ್ರಸಾದ್


ಮೈಸೂರು: ಪರಿಸರವನ್ನು ನಾವು ಕೇವಲ ಹಸಿರಿಗಾಗಿ ಅಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಬೇಕು ಎಂದು ಮಾಜಿನಗರ ಪಾಲಿಕೆಯ ಮಾಜಿ ಸದಸ್ಯ ಮಾ ವಿ ರಾಮ್ ಪ್ರಸಾದ್ ತಿಳಿಸಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಿಜೆಪಿ ವಾರ್ಡ್ ನಂಬರ್ 55ರ ಕಾರ್ಯಕರ್ತರಿಂದ ವಿದ್ಯಾರಣ್ಯಪುರಂನಲ್ಲಿರುವ ಹಾವಿನ ಪಾರ್ಕ್ ನಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರವನ್ನು ನಾವು ಕೇವಲ ಹಸಿರಿಗಾಗಿ ಅಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಬೇಕು ಎಂದರು.
ಮಾನವನ ದುರಾಸೆಯಿಂದ ಪರಿಸರ ಹಾಳಾಗುತ್ತಿದ್ದು, ಇದು ಮಾನವನಿಂದಲೇ ಸರಿಯಾಗಬೇಕಿದೆ. ಮುಂದಿನ ಪೀಳಿಗೆಗೆ ಪರಿಸರದ ಬಗ್ಗೆ ಕಾಳಜಿ ಮೂಡಿಸದಿದ್ದರೆ ಮುಂದೆ ಹೆಚ್ಚಿನ ಅಪಾಯ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಪರಿಸರ, ಪಕೃತಿ ನಮಗೆ ಎಲ್ಲವನ್ನೂ ನೀಡುತ್ತದೆ. ಅಗಣಿತವಾದ ಅಮೂಲ್ಯ ಕೊಡುಗೆಗಳನ್ನು ನೀಡುತ್ತದೆ. ಪ್ರತಿಯೊಂದು ಜೀವ ಸಂಕುಲಕ್ಕೆ ಅಗತ್ಯ, ಅನಿವಾರ್ಯ. ಆದರೆ ನಾವಿಂದು ಪರಿಸರಕ್ಕಾಗಿ ಏನನ್ನು ಕೊಟ್ಟಿದ್ದೇವೆ, ಕೊಡುತ್ತಿದೇವೆ ಎಂಬುದನ್ನು ಪ್ರತಿಯೊಬ್ಬ ಮಾನವನು ತನಗೆ ತಾನೇ ಹಾಕಿಕೊಳ್ಳಬೇಕಾದ ಪ್ರಶ್ನೆಯಾಗಿದೆ ಎಂದು ಹೇಳಿದರು. ಪರಿಸರ ದಿನಾಚರಣೆ ಭಾವನಾತ್ಮಕ ಹಬ್ಬವಾಗಿ ಆಚರಣೆಗೆ ಸರ್ವರು ನಿತ್ಯ ಸಿದ್ಧರಾಗಬೇಕಾಗಿರುವುದು ಅವಶ್ಯವಾಗಿದೆ ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ಬಿಜೆಪಿ ಕೆ.ಆರ್.ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಗೋಪಾಲ್ ರಾಜ್ ಅರಸ್, ವಾರ್ಡ್ ಅಧ್ಯಕ್ಷ ಉಮಾಶಂಕರ್, ಮಾಜಿ ನಗರಪಾಲಿಕೆ ಸದಸ್ಯ ವಿದ್ಯಾ ಅರಸ್, ಬಿಜೆಪಿ ಮುಖಂಡರುಗಳಾದ ಮಂಜುನಾಥ್ ವಿ, ಸೋಮೇಶ್, ಧರ್ಮೇಂದ್ರ, ರವಿ, ಮಧು, ನಿರಂಜನ್, ಶಿವು, ಡಿ ಸಿ ಮಂಜುಳಾ, ವಿಜಯ, ಕಾವ್ಯ, ಅರ್ಪಿತ, ರಮೇಶ್ ಅರಸ್ ಹಾಗೂ ಇನ್ನಿತರರು ವಾರ್ಡ್ ನ ಮುಖಂಡರುಗಳು ಹಾಜರಿದ್ದರು