3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಿಧನರಾದ ಬಿಜೆಪಿ ಮುಖಂಡ ಜಗದೀಶ್‌ರಿಗೆ ನುಡಿ ನಮನ


ಮೈಸೂರು: ಇತ್ತೀಚೆಗೆ ನಿಧನರಾದ ರಾಷ್ಟಿçÃಯ ಸಫಾಯಿ ಕರ್ಮಚಾರಿಗಳ ಆಯೋಗದ ಮಾಜಿ ಸದಸ್ಯರಾದ ಬಿಜೆಪಿ ಮುಖಂಡ ಜಗದೀಶ್ ಹಿರೇಮನಿ ಅವರಿಗೆ ನಗರದ ನಜರ್‌ಬಾದ್‌ನಲ್ಲಿರುವ ವಿ. ಕೆ.ಫಂಕ್ಷನ್ ಹಾಲ್‌ನಲ್ಲಿ ನುಡಿ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ನಾಯಕರು ಮತ್ತು ಮುಖಂಡರು, ಜಗದೀಶ್ ಹಿರೇಮನಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಕಷ್ಟದ ಸಮುದಾಯದಿಂದ ಬೆಳೆದು ಬಂದ ಜಗದೀಶ್ ಹಿರೇಮನಿ ಅವರು, ತಮ್ಮ ಜೀವನವನ್ನು ಸಮಾಜ ಸೇವೆ ಮತ್ತು ಸಂಘಟನಾ ಕಾರ್ಯಗಳಿಗೆ ಸಮರ್ಪಿಸಿಕೊಂಡಿದ್ದರು. ಕಳೆದ 3 ದಶಕಗಳಿಂದ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ ಅವರು, ಯಾವುದೇ ಹುದ್ದೆಯ ಆಸೆ ಇಲ್ಲದೆ, ಪಕ್ಷದ ಬೆಳವಣಿಗೆಗಾಗಿ ಶ್ರಮಿಸಿದ್ದರು. ವೈಯಕ್ತಿಕ ಜೀವನದ ಸಂಕಷ್ಟಗಳನ್ನು `ಯಾರ ಮುಂದೆಯೂ ವ್ಯಕ್ತಪಡಿಸದೆ, ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿ ಕೊಂಡಿದ್ದರು ಎಂದು ಸ್ಮರಿಸಿದರು.
ಪಕ್ಷದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದ ಜಗದೀಶ್ ಹಿರೇಮನಿ , ಅನೇಕ ಯುವ ನಾಯಕರನ್ನು ಬೆಳೆಸುವಲ್ಲಿ ಪಾತ್ರವಹಿಸಿದ್ದರು. ಅವರ ಸಂಘಟನಾ ಸಾಮರ್ಥ್ಯ, ಸರಳತೆ ಮತ್ತು ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಗುಣಗಳು ಎಲ್ಲರಿಗೂ ಮಾದರಿಯಾಗಿದ್ದವು ಎಂದು ಸ್ಮರಿಸಿದರು.
ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ ಮಾತನಾಡಿ, ಜಗದೀಶ್ ಹಿರೇಮನಿ ಅವರು ಪಕ್ಷದ ವಿವಿಧ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದರು. ರಾಷ್ಟಿçÃಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾಗಿ ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಸಮಾಜದಲ್ಲಿ ವಿಶೇಷ ಮೂಡಿಸಿದ್ದರು ಎಂದು ನೆನೆದರು.
ಈ ವೇಳೆ ಮಾಜಿ ಸಚಿವ ಎನ್.ಮಹೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು, ಮಾಜಿ ಮೇಯರ್‌ಗಳಾದ ಶಿವಕುಮಾರ್, ಸಂದೇಶ್ ಸ್ವಾಮಿ, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಎನ್.ಸುಬ್ಬಣ್ಣ, ನಗರಾಧ್ಯಕ್ಷ ಎಲ್.ನಾಗೇಂದ್ರ, ವಸ್ತುಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಾಮಾಜಿಕ ಬಿ.ಪಿ.ಮಂಜುನಾಥ್, ಕಾರ್ಯಕರ್ತ ವಾದಿರಾಜ್, ಎಸ್.ಮಹದೇವಯ್ಯ, ವೆಂಕಟರಾಮು ಮತ್ತಿತರರು ಹಾಜರಿದ್ದರು.