Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಗರದ ವಿಜಯ ವಿಠ್ಠಲ ವಿದ್ಯಾಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ


ಮೈಸೂರು; ನಗರದ ವಿಜಯ ವಿಠ್ಠಲ ವಿದ್ಯಾಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಉತ್ಸಾಹದೊಂದಿಗೆ ಆಚರಿಸಲಾಯಿತು. ಪ್ರಕೃತಿಯನ್ನು ಪೋಷಿಸುವ ಮತ್ತು ರಕ್ಷಿಸುವ ಮಹತ್ವವನ್ನು ಬಿಂಬಿಸುವAತೆ ಪ್ರಾಂಶುಪಾಲ ವೀಣಾ ಎಸ್. ಎ. ಹಾಗೂ ಮುಖ್ಯ ಶಿಕ್ಷಕಿಯರು ಸಸ್ಯಗಳಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಪರಿಸರಸ್ನೇಹಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಹಾಗೂ ಹಸಿರು ಮತ್ತು ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಕೊಡುಗೆ ನೀಡಲು ಪ್ರೇರೇಪಿಸಲಾಯಿತು.
ಆಚರಣೆಯ ಅಂಗವಾಗಿ ಶಾಲೆಯ ಅಧ್ಯಕ್ಷ ಆರ್. ವಾಸುದೇವ ಭಟ್ ರವರು ಹತ್ತನೇ ತರಗತಿ ವಿದ್ಯಾರ್ಥಿಗಳು ಮತ್ತು ಎನ್‌ಸಿಸಿ ಕೆಡೆಟ್‌ಗಳನ್ನು ಒಳಗೊಂಡ ಪರಿಸರ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸಿದರು. ಪರಿಸರ ರಕ್ಷಣೆ, ವೃಕ್ಷಾರೋಪಣ, ಜಲ ಸಂರಕ್ಷಣೆ ಮತ್ತು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಅಗತ್ಯತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಈ ರ‍್ಯಾಲಿಯನ್ನು ಆಯೋಜಿಸಲಾಗಿತ್ತು. ಘೋಷಣೆಗಳು ಮತ್ತು ನಾಮಫಲಕಗಳ ಮೂಲಕ, ಭಾಗವಹಿಸಿದವರು ಪರಿಸರವನ್ನು ರಕ್ಷಿಸುವ ಸಂದೇಶವನ್ನು ಸಾರಿದರು ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ಸಾಮೂಹಿಕ ಜವಾಬ್ದಾರಿಯನ್ನು ಹೊರಲು ಸಮುದಾಯಕ್ಕೆ ಪ್ರೇರಣೆ ನೀಡಿದರು.