Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರು ಯೋಗ ಒಕ್ಕೂಟದ ರಜತ ಮಹೋತ್ಸವ ಸಂಪನ್ನ


ಮೈಸೂರು; ಮೈಸೂರು ಯೋಗ ಒಕ್ಕೂಟದ ರಜತ ಮಹೋತ್ಸವದ ಅಂಗವಾಗಿ ಭಾನುವಾರ ಮೈಸೂರಿನ ರಾಮಕೃಷ್ಣನಗರದ ರಾಮಕೃಷ್ಣ ವಿದ್ಯಾಕೇಂದ್ರದ ಶಾರದಾ ಸಭಾಂಗಣದಲ್ಲಿ ಆಯೋಜಿಸಿದ್ದ ಯೋಗಾಭ್ಯಾಸ ಹಾಗೂ ಆರೋಗ್ಯ ಅರಿವು ಉಪನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಜೂನ್ 21ರಂದು ನಡೆಯುವ ವಿಶ್ವ ಯೋಗ ದಿನದ ಪೂರ್ವಭಾವಿಯಾಗಿ ಸಾಮೂಹಿಕ ಯೋಗಾಭ್ಯಾಸ ಮಾಡಲಾಯಿತು.
ಸುಮಾರು 45 ನಿಮಿಷಗಳ ಕಾಲ ಪ್ರಾರ್ಥನೆ, ಚಾಲನಾ ಕ್ರಿಯೆ, ತಾಡಾಸನ, ವೃಕ್ಷಾಸನ, ಪಾದ-ಹಸ್ತಾಸನ, ಅರ್ಧ ಚಕ್ರಾಂತಾಸನ ಮತ್ತು ತ್ರಿಕೋಣಾಸನ, ಭದ್ರಾಸನ, ವಜ್ರಾಸನ, ಅರ್ಧ ಉಷ್ಟಾçಸನ, ಉಷ್ಟಾçಸನ, ಶಶಕಾಸನ, ಉತ್ತಾನ ಮಂಡೂಕಾಸನ ಮತ್ತು ವಕ್ರಾಸನ, ಮಕರಾಸನ, ಭುಜಂಗಾಸನ, ಶಲಭಾಸನ, ಸೇತುಬಂಧಾಸನ, ಉತ್ತಾನಪಾದಾಸನ, ಅರ್ಧಹಲಾಸನ, ಪವನಮುಕ್ತಾಸನ ಅಭ್ಯಾಸ ಮಾಡಲಾಯಿತು. ಕಪಾಲಭಾತಿ, ಪ್ರಾಣಾಯಾಮ, ನಾಡಿಶೋಧನೆ, ಧ್ಯಾನದೊಂದಿಗೆ ತಾಲೀಮು ಪೂರ್ಣಗೊಳಿಸಲಾಯಿತು.
ಈ ವೇಳೆ ಮಾತನಾಡಿದ ಆಯುಷ್ ಇಲಾಖೆಯ ಅಧಿಕಾರಿ ರೇಣುಕಾದೇವಿ, ಆರೋಗ್ಯ ಸಂರಕ್ಷಣೆಗೆ ನಮ್ಮ ಪೂರ್ವಜರು ಯೋಗದ ಮಹತ್ವ ತಿಳಿಸಿದ್ದರು. ವಿಶ್ವ ಯೋಗ ದಿನ ಘೋಷಣೆಯಾದ ನಂತರ ಎಲ್ಲೆಡೆ ಯೋಗದ ಮಹತ್ವ ಮತ್ತಷ್ಟು ಹೆಚ್ಚಾಗಿದೆ. ಅದರಲ್ಲೂ ಮೈಸೂರಿನಲ್ಲಿ ಯೋಗಾಭ್ಯಾಸ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.
ಜಿಎಸ್‌ಎಸ್ ಯೋಗ ಸಂಸ್ಥೆಯ ಸಂಸ್ಥಾಪಕ ಶ್ರೀಹರಿ ದ್ವಾರಕನಾಥ್ ಮಾತನಾಡಿ, ಮೈಸೂರು ಈಗಾಗಲೇ ಯೋಗ ಹೆಸರಲ್ಲಿ ಗಿನ್ನಿಸ್ ದಾಖಲೆಗಳನ್ನು ನಿರ್ಮಿಸಿದೆ. ಈ ವರ್ಷ 120 ಸ್ಥಳಗಳಲ್ಲಿ 1.20ಕ್ಕೂ ಹೆಚ್ಚು ಜನರಿಂದ ಯೋಗಾಭ್ಯಾಸ ಮಾಡಿಸಲು ಸಂಕಲ್ಪ ಮಾಡಲಾಗಿದೆ. ಇದಕ್ಕೆ ಎಲ್ಲ ಸಂಘ- ಸಂಸ್ಥೆಗಳೂ ಸಹಕಾರ ನೀಡುತ್ತಿವೆ ಎಂದು ತಿಳಿಸಿದರು.
ಭಾರತ್ ಸ್ವಾಭಿಮಾನ್ ಟ್ರಸ್ಟ್ ಸಂಸ್ಥಾಪಕ ಶಶಿಕುಮಾರ್, ಎಸ್‌ಪಿವೈಎಸ್‌ಎಸ್ ಸಂಸ್ಥೆಯ ನಂಜುAಡಸ್ವಾಮಿ, ಮೈಸೂರು ಯೋಗ ಒಕ್ಕೂಟ ಅಧ್ಯಕ್ಷ ಕೆ.ಜಿ.ದೇವರಾಜು ಮುಂತಾದವರಿದ್ದರು.