Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ವದಂತಿ ಸೃಷ್ಟಿಸಿರುವ ಕಿಡಿಗೇಡಿಗಳನ್ನು ಬಂಧಿಸಿ :ದೇವರಾಜ್ ಟಿ. ಕಾಟೂರು ಒತ್ತಾಯ


ಮೈಸೂರು; ಸಾಮಾಜಿಕ ಜಾಲ ತಾಣದಲ್ಲಿ ಸಚಿವ ಸತೀಶ್ ಜಾರಕಿ ಹೊಳಿ ಅವರ ವಿರುದ್ಧ ಅಪಪ್ರಚಾರ ಮತ್ತು ಜನರಲ್ಲಿ ಗೊಂದಲ ಸೃಷ್ಟಿ ಮಾಡಿ, ಅವರ ಹೆಸರಿಗೆ ಧಕ್ಕೆ ತಂದಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆAದು ಕರ್ನಾಟಕ ರಾಜ್ಯ ನಾಯಕರ ಯುವ ಸೇನೆಯ ರಾಜ್ಯಾಧ್ಯಕ್ಷ ದೇವರಾಜ್ ಟಿ. ಕಾಟೂರು ಆಗ್ರಹಿಸಿದ್ದಾರೆ.
ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸುವುದಕ್ಕೆ ಅವರ ವಿರುದ್ಧ ಸಹಿ ಸಂಗ್ರಹ ನಡೆಸಲಾಗಿದೆ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿಲ್ಲ ಎಂಬ ಆರೋಪಗಳನ್ನು ಒಳಗೊಂಡ ಪೋಸ್ಟರ್‌ಗಳು ಮತ್ತು ಸಂದೇಶಗಳನ್ನು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿಬಿಟ್ಟಿದ್ದಾರೆ.
ಸಿದ್ದರಾಮಯ್ಯನವರ ನಂತರ ಸತೀಶ್ ಜಾರಕಿ ಹೊಳಿಯವರು ಅಹಿಂದ ಉತ್ತರಾಧಿಕಾರಿಯಾಗಿ ಸಂಘಟನೆಯನ್ನು ಬಲಗೊಳಿಸುವ ತಯಾರಿ ನಡೆಸಿದನ್ನು, ಹಾಗೂ ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿ 2028 ರಲ್ಲಿ ಇವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು ನಾಯಕ ಸಮಾಜದ ಸತೀಶ್ ಜಾರಕಿ ಹೊಳಿ ಅವರು ಮುಂದೆ ಮುಖ್ಯಮಂತ್ರಿಯಾಗುತ್ತಾರೆ ಎಂದು ಸಹಿಸಿಕೊಳ್ಳಲಾಗದ, ಸ್ವಪಕ್ಷದ ಅತೃಪ್ತ ಆತ್ಮಗಳು ಈ ರೀತಿ ಆಧಾರ ರಹಿತ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜಾತಿ-ಜಾತಿಗಳ ನಡುವೆ ಕೋಮುಗಲಬೆ ಸೃಷ್ಟಿ ಮಾಡುವಂತಹ ಹುನ್ನಾರವನ್ನು ಮಾಡಿದ್ದಾರೆ ಎಂದು ಆರೋಪಿಸಿದರು.
2005-2006 ರಲ್ಲಿ ಅಹಿಂದ ಸಮಾವೇಶ ಮಾಡಿದರು ಅಂತ ಜೆಡಿಎಸ್ ಪಕ್ಷದಿಂದ ಮತ್ತು ಉಪಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯರನ್ನು ಉಚ್ಚಾಟನೆ ಮಾಡಿದ ನಂತರ ಅವರ ಬೆನ್ನಿಗೆ ನಿಂತು, ಅವರು ಎರಡು ಬಾರಿ ಮುಖ್ಯಮಂತ್ರಿಯಾಗುವುದಕ್ಕೆ ಎಲ್ಲಾ ರೀತಿಯ ತ್ಯಾಗವನ್ನು ಮಾಡಿರುವ ಸತೀಶ್ ಜಾರಕಿ ಹೊಳಿ ಅವರ ವಿರುದ್ಧ ಈ ರೀತಿ ಅಪಪ್ರಚಾರ ಮಾಡಿ, ಸಿದ್ದರಾಮಯ್ಯ ಮತ್ತು ಶ್ರೀ ಸತೀಶ್‌ಜಾರಕಿ ಹೊಳಿ ಅವರ ಸ್ನೇಹದಲ್ಲಿ ಬಿರುಕು ಮೂಡಿಸಿ, ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನವನ್ನು ಉದ್ದೇಶಪೂರ್ವಕವಾಗಿ ತಪ್ಪಸಿದ್ದಾರೆ. ಇದು ಸತೀಶ್ ಜಾರಕಿ ಹೊಳಿ ಅವರಿಗೆ ಮಾಡಿದ ಅನ್ಯಾಯ ಮಾತ್ರವಲ್ಲ ಸಮಸ್ತ ವಾಲ್ಮೀಕಿ ಸಮಾಜಕ್ಕೆ ಮಾಡಿದ ಅನ್ಯಾಯ ಮಾಡಿದ್ದಾರೆ ಕಿಡಿಕಾರಿದರು.
ಕಾಂಗ್ರೆಸ್ ಪಕ್ಷದಲ್ಲಿರುವ ಕೆಲವು ಪಟ್ಟಬದ್ಧ ಹಿತಾಸಕ್ತಿಗಳು ನಮ್ಮ ಸಮಾಜದ ರಾಜಕೀಯ ನಾಯಕರುಗಳನ್ನು ಹತ್ತಿಕ್ಕುವ ಹುನ್ನಾರ ನಡೆಸುತ್ತಿದ್ದಾರೆ. ವಾಲ್ಮೀಕಿ ಹಗರಣದಲ್ಲಿ ಸಚಿವ ನಾಗೇಂದ್ರ ಅವರನ್ನು ಹೊಣೆಗಾರರನ್ನಾಗಿ ಮಾಡಿ, ಜೈಲಿಗೆ ಕಳುಹಿಸಿದ್ದರು. ಸಚಿವ ಕೆ.ಎನ್. ರಾಜಣ್ಣ ಅವರನ್ನು ಬಲಿಪಶು ಮಾಡಿರುವುದು ದುರದೃಷ್ಟಕರ. ರಾಜ್ಯಸಭೆ ಮತ್ತು ವಿಧಾನಸಭೆಯಲ್ಲಿ ನಾಯಕ ಸಮಾಜದವರಿಗೆ ಟಿಕೆಟ್ ನೀಡದೆ, ಐತಿಹಾಸಿಕ ಅನ್ಯಾಯ ಮಾಡಿದ್ದಾರೆ. ಐಎಎಸ್, ಐಪಿಎಸ್ ಹಾಗೂ ಉನ್ನತ ಅಧಿಕಾರಿಗಳನ್ನು ಗೊತ್ತುಗುರಿಯಿಲ್ಲದ ಜಾಗಕ್ಕೆ ಕೊಟ್ಟಿದ್ದಾರೆ. ಇದೆಲ್ಲವನ್ನು ಸಮಾಜ ಸಹಿಸಿಕೊಂಡು ಮುಂದೊAದು ದಿನ ನಮ್ಮ ನಾಯಕರಾದ ಸತೀಶ್ ಜಾರಕಿಹೊಳಿ ಅವರು ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿ, ಪಕ್ಷವನ್ನು ಅಧಿಕಾರಕ್ಕೆ ತಂದು ಮುಖ್ಯಮಂತ್ರಿ ಆಗುತ್ತಾರೆ ಅಂತ ಮನೋಭಾವನೆ ಇಟ್ಟುಕೊಂಡಿದ್ದು ಕೆ.ಪಿ.ಸಿ.ಸಿ. ಅಧ್ಯಕ್ಷರ ಸ್ಥಾನವನ್ನು ತಪ್ಪಿಸಿ, ಸತೀಶ್ ಜಾರಕಿ ಹೊಳಿ ಅವರನ್ನು ರಾಜಕೀಯವಾಗಿ ತುಳಿಯುವ ಷಡ್ಯಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸತೀಶ್ ಜಾರಕಿ ಹೊಳಿ ಅವರ ಮೇಲೆ ಈ ರೀತಿ ಹುಸಿ ಆರೋಪಗಳ ಅಸ್ತçವನ್ನು ಪ್ರಯೋಗಿಸಿ, ಅಹಿಂದ ಸಮುದಾಯದ ಉತ್ತರಾಧಿಕಾರಿಯಾಗಬಲ್ಲ ಸತೀಶ್ ಜಾರಕಿಹೊಳಿ ಅವರನ್ನು ತೇಜೋವಧೆಗೆ ಕಾಣದ ಕೈಗಳು ಪ್ರಯತ್ನ ಮಾಡುತ್ತಿವೆ. ಆದ್ದರಿಂದ ಸಿದ್ದರಾಮಯ್ಯ ಅವರು ಇದಕ್ಕೆ ಸ್ಪಷ್ಟಿಕರಣವನ್ನು ನೀಡಬೇಕೆಂದು ಒತ್ತಾಯಿಸಿದರು.
ಸತೀಶ್ ಜಾರಕಿ ಹೊಳಿ ಅವರ ವಿರುದ್ಧ ಅಪಪ್ರಚಾರ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸುವAತೆ ಆಗ್ರಹಿಸಿ ಜೂನ್ 13 ರಂದು ಟೌನ್ ಹಾಲ್‌ನಲ್ಲಿರುವ ಡಾ ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸೇನೆಯ ರಾಜ್ಯ ಉಪಾಧ್ಯಕ್ಷ ಶಿವಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿ ಪಿ.ಸಿದ್ದರಾಜು, ಜಿಲ್ಲಾಧ್ಯಕ್ಷ ಎಂ.ಸೋಮಣ್ಣ, ಗೌರವ ಸಲಹೆಗಾರ ಪರಶಿವಮೂರ್ತಿ, ಸಿದ್ದರಾಜು, ಮಾಜಿ ನಿರ್ದೇಶಕ ಎಸ್.ಆರ್.ರವಿಕುಮಾರ್ ಉಪಸ್ಥಿತರಿದ್ದರು.