Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅಂತರ ರಾಷ್ಟ್ರೀಯ ರೈಲು ಲೆವೆಲ್ ಕ್ರಾಸಿಂಗ್ ಜಾಗೃತಿ ದಿನ ಆಚರಣೆ


ಮೈಸೂರು; ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಮಂಗಳವಾರ ನಗರದಲ್ಲಿ ಅಂತರರಾಷ್ಟಿಯ ಲೆವೆಲ್ ಕ್ರಾಸಿಂಗ್ ಜಾಗೃತಿ ದಿನ ಅನ್ನು ಆಚರಿಸಿತು. ಈ ಕಾರ್ಯಕ್ರಮದ ಉದ್ದೇಶ, ರಸ್ತೆ ಬಳಕೆದಾರರಲ್ಲಿ ಲೆವೆಲ್ ಕ್ರಾಸಿಂಗ್‌ಗಳಲ್ಲಿ ಸುರಕ್ಷಿತವಾಗಿ ಸಂಚರಿಸುವ ಬಗ್ಗೆ ಅರಿವು ಮೂಡಿಸುವುದು ಹಾಗೂ ನಿರ್ಲಕ್ಷ÷್ಯ ಮತ್ತು ಸುರಕ್ಷತಾ ನಿಯಮಗಳ ಉಲ್ಲಂಘನೆಯಿAದ ಸಂಭವಿಸುವ ಅಪಘಾತಗಳನ್ನು ತಡೆಗಟ್ಟುವುದಾಗಿತ್ತು.
ಈ ಅಂಗವಾಗಿ, ಬೆಳಿಗ್ಗೆ ಮೈಸೂರು ಮತ್ತು ಅಶೋಕಪುರಂ ರೈಲು ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 4ರಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶಮ್ಮಾಸ್ ಹಮೀದ್ ಹಾಗೂ ವಿಭಾಗದ ಹಿರಿಯ ಅಧಿಕಾರಿಗಳು ಲೆವೆಲ್ ಕ್ರಾಸಿಂಗ್‌ನ್ನು ಪರಿಶೀಲಿಸಿ, ರಸ್ತೆ ಬಳಕೆದಾರರೊಂದಿಗೆ ಸಂವಾದ ನಡೆಸಿ, ರೈಲು ಹಳಿಗಳನ್ನು ದಾಟುವಾಗ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯತೆಯ ಕುರಿತು ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್, ಲೆವೆಲ್ ಕ್ರಾಸಿಂಗ್‌ಗಳಲ್ಲಿ ಸುರಕ್ಷತೆ ಕೇವಲ ರೈಲ್ವೆಯ ಜವಾಬ್ದಾರಿಯಲ್ಲ, ಅದು ಸಾರ್ವಜನಿಕರ ಸಹಭಾಗಿತ್ವದ ಜವಾಬ್ದಾರಿಯೂ ಆಗಿದೆ ಎಂದು ತಿಳಿಸಿದರು. ರೈಲು ಲೆವೆಲ್ ಕ್ರಾಸಿಂಗ್‌ಗಳನ್ನು ದಾಟುವಾಗ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸಿ, ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು. ರೈಲು ಹಳಿ ದಾಟುವ ಮುನ್ನ ನಿಲ್ಲಿಸಿ, ಎರಡೂ ಕಡೆ ಗಮನಹರಿಸಿ, ರೈಲು ಬರುತ್ತಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಗೇಟ್ ಮುಚ್ಚಿರುವಾಗ ಅಥವಾ ಎಚ್ಚರಿಕೆ ಸೂಚನೆಗಳು ಕಾರ್ಯನಿರ್ವಹಿಸುತ್ತಿರುವಾಗ, ಎಂದಿಗೂ ಹಳಿಯನ್ನು ದಾಟಲು ಪ್ರಯತ್ನಿಸಬಾರದು. ರೈಲು ದೂರದಲ್ಲಿದೆ ಎಂದು ಭಾವಿಸಿ ಆತುರದಿಂದ ದಾಟುವುದು ಅಪಾಯಕಾರಿ ಹಳಿಯನ್ನು ದಾಟುವ ಸಂದರ್ಭದಲ್ಲಿ ಮೊಬೈಲ್ ಫೋನ್ ಅಥವಾ ಇತರ ಗಮನ ಭಂಗ ಉಂಟುಮಾಡುವ ಸಾಧನಗಳನ್ನು ಬಳಸಬಾರದು. ಗೇಟ್ ಕೀಪರ್‌ಗಳು ಹಾಗೂ ರೈಲ್ವೆ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಬೇಕು ಮತ್ತು ಅನಧಿಕೃತವಾಗಿ ಹಳಿಗಳನ್ನು ದಾಟುವ ಬದಲು ಅಧಿಕೃತ ಲೆವೆಲ್ ಕ್ರಾಸಿಂಗ್‌ಗಳನ್ನು ಮಾತ್ರ ಬಳಸಬೇಕು ಎಂದು ತಿಳಿಸಿದರು.
ಜಾಗೃತಿ ಕಾರ್ಯಕ್ರಮದ ಅಂಗವಾಗಿ ಸುರಕ್ಷತಾ ಕರಪತ್ರಗಳನ್ನು ವಿತರಿಸಲಾಯಿತು. ರಸ್ತೆ ಬಳಕೆದಾರರೊಂದಿಗೆ ಸಂವಾದ ನಡೆಸಿ, ಸುರಕ್ಷಿತವಾಗಿ ಲೆವೆಲ್ ಕ್ರಾಸಿಂಗ್‌ಗಳನ್ನು ದಾಟುವ ವಿಧಾನಗಳ ಬಗ್ಗೆ ಪ್ರಾಯೋಗಿಕ ಪ್ರದರ್ಶನಗಳನ್ನು ನೀಡಲಾಯಿತು. ನೈರುತ್ಯ ರೈಲ್ವೆಯ ಸ್ಕೌಟ್ಸ್ ಮತ್ತು ಗೈಡ್ಸ್ ತಂಡವು ಪ್ರದರ್ಶಿಸಿದ ನುಕ್ಕಡ್ ನಾಟಕವು ಸಾರ್ವಜನಿಕರಿಗೆ ಸುರಕ್ಷತಾ ಸಂದೇಶವನ್ನು ನೀಡಿತು, ಜವಾಬ್ದಾರಿಯುತ ವರ್ತನೆಗೆ ಪ್ರೇರಣೆ ನೀಡಿತು.
ಕಾರ್ಯಕ್ರಮದಲ್ಲಿ ರೈಲ್ವೆ ಅಧಿಕಾರಿಗಳು, ಸಿಬ್ಬಂದಿ, ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಯಂಸೇವಕರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದರು. ಇಂತಹ ಜಾಗೃತಿ ಕಾರ್ಯಕ್ರಮಗಳ ಮೂಲಕ ಮೈಸೂರು ವಿಭಾಗವು ಸಾರ್ವಜನಿಕರಲ್ಲಿ ಸುರಕ್ಷತಾ ಅರಿವು ಹೆಚ್ಚಿಸಲು ಹಾಗೂ ರೈಲ್ವೆ ಲೆವೆಲ್ ಕ್ರಾಸಿಂಗ್‌ಗಳಲ್ಲಿ ಸುರಕ್ಷಿತ ಸಂಚಾರದ ಮಹತ್ವವನ್ನು ತಿಳಿಸುತ್ತಾ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದೆ.