Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಒಟ್ಟು 3,991 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಿ


ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಒಟ್ಟು 3,991 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂನ್ 10 ರಿಂದ ಆರಂಭವಾಗಲಿದೆ
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ e Áತಿಯ ಅಭ್ಯರ್ಥಿಗಳು ಒಳಮೀಸಲಾತಿ ಪ್ರಕಾರ ತಮಗೆ ಅನ್ವಯವಾಗುವ ಎಸ್‌ಸಿ-ಎ, ಎಸ್‌ಸಿ-ಬಿ ಮತ್ತು ಎಸ್‌ಸಿ-ಸಿ ಜಾತಿ ಪ್ರಮಾಣ ಪತ್ರಗಳ ಆರ್‌ಡಿ ಸಂಖ್ಯೆ ನಮೂದಿಸುವುದು ಕಡ್ಡಾಯವಾಗಿದೆ.
ಒಟ್ಟು ಹುದ್ದೆಗಳ ಪೈಕಿ 596 ಹುದ್ದೆಗಳು ಕಲ್ಯಾಣ ಕರ್ನಾಟಕ ಹಾಗೂ 3,395 ಹುದ್ದೆಗಳು ಉಳಿದ ವೃಂದಕ್ಕೆ ಸೇರಿವೆ. ಅರ್ಜಿ ಸಲ್ಲಿಸಲು ಜುಲೈ 3 ಕೊನೆ ದಿನಾಂಕವಾಗಿರಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗ್ರಾಮೀಣ, ಕನ್ನಡ ಮಾಧ್ಯಮ ವ್ಯಾಸಂಗ ಇತ್ಯಾದಿ ಕ್ಲೇಮ್ ಮಾಡುವವರು ಅಗತ್ಯ ನಮೂನೆಗಳಲ್ಲಿ ಪ್ರಮಾಣ ಪತ್ರಗಳನ್ನ ಸಲ್ಲಿಸಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳು ಗ್ರಾಮೀಣ ಕೋಟಾ ಕ್ಲೇಮ್ ಮಾಡ ಬಯಸಿದರೆ ಕಡ್ಡಾಯವಾಗಿ ನಾನ್ ಕ್ರೀಮಿಲೇಯರ್ ಸರ್ಟಿಫಿಕೇಟ್ ಹೊಂದಿರಬೇಕು. ಅರ್ಜಿಯೊಂದಿಗೆ ಅಪ್ಲೋಡ್ ಮಾಡುವ ಅಭ್ಯರ್ಥಿಗಳ ಭಾವಚಿತ್ರ 50ಏಃ ಒಳಗಿರಬೇಕು ಎಂದು ಅವರು ತಿಳಿಸಿದ್ದಾರೆ.

ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಲಿಂಕ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಬೇಕಿದ್ದು, ಹೆಚ್ಚಿನ ಮಾಹಿತಿ ಹಾಗೂ ತಾಂತ್ರಿಕ ನೆರವಿಗಾಗಿ ಪ್ರಾಧಿಕಾರದ ಮಾಹಿತಿ ಕೇಂದ್ರದ ದೂರವಾಣಿ ಸಂಖ್ಯೆ: 080-23460460 ಅನ್ನು ಸಂಪರ್ಕಿಸಬಹುದು

ವಿದ್ಯಾರ್ಹತೆ ಹಾಗೂ ವಯೋಮಿತಿ:
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಪಿಯುಸಿ ಅಥವಾ ಸಿಬಿಎಸ್‌ಇ, ಐಎಸ್‌ಸಿ, ಎನ್‌ಐಓಎಸ್ ಹಾಗೂ ಮೂರು ವರ್ಷಗಳ ಡಿಪ್ಲೊಮಾ ಸೇರಿದಂತೆ ಸರ್ಕಾರದ ನಿಯಮಾವಳಿಗಳನ್ವಯ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜನ್ಮ ದಿನಾಂಕದ ಆಧಾರದ ಮೇಲೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕಾಗಿದ್ದು, ಸರ್ಕಾರವು ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ನೀಡಿದೆ. ಇದರನ್ವಯ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 33 ವರ್ಷಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 35 ವರ್ಷ. ಬುಡಕಟ್ಟು ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಸಂಬಳವೆಷ್ಟು ಗೊತ್ತಾ : ಆಯ್ಕೆಯಾಗುವ ಅಭ್ಯರ್ಥಿಗಳಿಗೆ 37,500 ರಿಂದ 76,100 ರವರೆಗಿನ ವೇತನ ಶ್ರೇಣಿ ಅನ್ವಯವಾಗಲಿದ್ದು, ರಾಷ್ಟಿçÃಯ ಪಿಂಚಣಿ ಯೋಜನೆ (ಓPS) ಸೌಲಭ್ಯ ದೊರೆಯಲಿದೆ.