Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೋದಿಯವರ ಆಡಳಿತದಲ್ಲಿ ಭಾರತ ಆರ್ಥಿಕತೆಯಲ್ಲಿ ಮುಂಚೂಣಿಯಲ್ಲಿದೆ; ಸಂಸದ ಯದುವೀರ್


ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಡಳಿತ 12 ವರ್ಷ ಸುದೀರ್ಘ ಸೇವೆಯಲ್ಲಿ ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಆ ಮೂಲಕ ವಿಕಸಿತ ಭಾರತ ನಿರ್ಮಾಣ ಮಾಡುತ್ತಿದ್ದಾರೆ. ಮೋದಿಯವರ ಆಡಳಿತದಲ್ಲಿ ದೇಶ ಉದ್ದಾರ ಆಗುತ್ತಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಬುಧವಾರ ಮೈಸೂರಿನ ಚಾಮರಾಜಪ್ಮರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೋದಿಯವರು ಪ್ರಧಾನಿಯಾಗುವ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಸರಿಯಿರಲಿಲ್ಲ. ಆದರೆ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ಕಳೆದ 12 ವರ್ಷಗಳಲ್ಲಿ ನಮ್ಮ ದೇಶ ಆರ್ಥಿಕತೆಯಲ್ಲಿ ಮುಂಚೂಣಿಯಲ್ಲಿದೆ. ವಿದೇಶಿ ಕಂಪನಿಗಳು ಕೂಡ ಭಾರತಕ್ಕೆ ಬರುತ್ತಿವೆ. ವಿಶ್ವಮಟ್ಟದಲ್ಲಿ ಭಾರತಕ್ಕೆ ದೊಡ್ಡ ಗೌರವ ಸಿಗುತ್ತಿದೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ 25 ಕೋಟಿ ಜನರು ಬಡತನ ರೇಖೆಯಿಂದ ಹೊರಬಂದಿದ್ದಾರೆ. ದೇಶದಾದ್ಯಂತ ಬಡವರ ಸಂಖ್ಯೆ ಶೇ.29ರಿಂದ ಶೇ.11ಕ್ಕೆ ಇಳಿಕೆಯಾಗಿದೆ. ಕಿಸಾನ್ ಸಮ್ಮಾನ್ ಯೋಜನೆ ಮೂಲಕ ಪ್ರತಿ ರೈತರ ಖಾತೆಗೆ ನೇರವಾಗಿ 6 ಸಾವಿರ ರೂ. ಜಮೆಯಾಗುತ್ತಿದೆ, ಇದಕ್ಕೆ 4.5 ಲಕ್ಷ ಕೋಟಿ ರೂ. ವಿನಿಯೋಗಿಸಲಾಗಿದೆ ಎಂದು ತಿಳಿಸಿದರು.
ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಾಲ ಸೌಲಭ್ಯ, ಯುವಕರಿಗೆ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ದೇಶೀಯ ಗುಣಮಟ್ಟದ ಉತ್ಪನ್ನಗಳಿಗೆ ವಿದೇಶಗಳಲ್ಲಿ ಬೇಡಿಕೆ ಹೆಚ್ಚಿದೆ ಎಂದರು..
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಮೂಲಕ 500 ವರ್ಷಗಳ ವಿವಾದವನ್ನು ಬಗೆಹರಿಸಿ, ದೇಶದ ಜನರ ಕನಸನ್ನು ಮೋದಿ ನನಸು ಮಾಡಿದ್ದಾರೆ. ಯೋಗವನ್ನು ವಿಶ್ವಕ್ಕೆ ಪರಿಚಯ ಮಾಡಿ, ಅಂತಾರಾಷ್ಟಿçÃಯ ಯೋಗ ದಿನ ಆಚರಣೆಗೆ ನಾಂದಿ ಹಾಡಿದ್ದಾರೆ, ಡಿಜಿಟಲ್ ಇಂಡಿಯಾ, ಕ್ಯಾಶ್‌ಲೆಸ್ ಡಿಜಿಟಲ್ ವ್ಯವಸ್ಥೆಯನ್ನು ಯಶಸ್ವಿಯಾಗಿ ಜಾರಿ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ದೇಶದ ಆಂತರಿಕ ಭದ್ರತೆಗೆ ಸವಾಲಾಗಿದ್ದ ನಕ್ಸಲಿಸಂ ಕಿತ್ತು ಹಾಕಲಾಗಿದೆ. 370ನೇ ವಿಧಿ ರದ್ದುಗೊಳಿಸುವ ಮೂಲಕ ಜಮ್ಮು-ಕಾಶ್ಮೀರದ ದಶಕಗಳ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಇದೀಗ ದೇಶದಲ್ಲಿ ಜನಗಣತಿ ಹಾಗೂ ಜಾತಿ ಗಣತಿ ನಡೆಯುತ್ತಿದೆ. ಇದಕ್ಕಾಗಿ ನಾವು ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಸಲ್ಲಿಸುತ್ತೇವೆ, ಅವರ ಆಶಯದಂತೆ ನಾವು ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮೈಸೂರು ನಗರ ಅಧ್ಯಕ್ಷರಾದ ಎಲ್ ನಾಗೇಂದ್ರ, ಗ್ರಾಮಾಂತರ ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಎನ್.ಸುಬ್ಬಣ್ಣ, ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀ ವತ್ಸ, ಮಾಜಿ ಶಾಸಕ ಹರ್ಷವರ್ಧನ್, ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷ ಅನಿಲ್ ಥಾಮಸ್, ಎಸ್ ಟಿ ಮೋರ್ಚಾ ರಾಜ್ಯ ಪ್ರಧಾನಕಾರ್ಯದರ್ಶಿ ಶಿವಕುಮಾರ್, ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ ಎಂ ರಘು, ರುದ್ರಮೂರ್ತಿ, ಪರೀಕ್ಷಿತ್ ರಾಜೇ ಅರಸ್, ವಿನಯ್ ಕುಮಾರ್ ರಾಮಚಂದ್ರು, ನಗರ ವಕ್ತಾರ ಮೋಹನ್ ಗ್ರಾಮಾಂತರ ವಕ್ತಾರ ವಸಂತ್ ಕುಮಾರ್, ಸಹ ವಕ್ತಾರರಾದ ಕಿರಣ್ ಗೌಡ, ಜಯಶೇಖರ್, ನಗರ ಮಾಧ್ಯಮ ಸಂಚಾಲಕರಾದ ಮಹೇಶ್ ರಾಜೇ ಅರಸ್, ಸಹ ಸಂಚಾಲಕ ಸಂತೋಷ್ ಕುಮಾರ್.ಬಿ.ಎಂ ಮತ್ತಿತರರು ಉಪಸ್ಥಿತರಿದ್ದರು.