Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ತಾಲೂಕು ನಾಯಕರ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ


ಮೈಸೂರು : ಮೈಸೂರು ತಾಲೂಕು ನಾಯಕರ ಸಂಘದ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿ ಯು ಸಿ ಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಉದ್ಬೂರು ಮಹದೇವ ಸ್ವಾಮಿ ಹೇಳಿದರು
ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವು ಕೂಡ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಯಲ್ಲಿ ಶೇಕಡ 80% ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜನೆ ಮಾಡಿ ನಗದು ಬಹುಮಾನ ಮತ್ತು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಗುವುದು ಎಂದರು
ಪ್ರತಿಭಾ ಪುರಸ್ಕಾರಕ್ಕಾಗಿ ಮೈಸೂರು ತಾಲ್ಲೂಕು ಮತ್ತು ನಗರದ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು
ಅರ್ಹ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ, ಜಾತಿ ದೃಢೀಕರಣ ಪತ್ರ, ಆಧಾರ್ ಕಾರ್ಡ್ ಮತ್ತು ಭಾವಚಿತ್ರವನ್ನು 18ರ ಒಳಗೆ ಸರಸ್ವತಿಪುರಂ ಈಜುಕೊಳದ ರಸ್ತೆಯಲ್ಲಿ ಇರುವ ನಾಯಕರ ವಿದ್ಯಾರ್ಥಿ ನಿಲಯದ ನಿಲಯಪಾಲಕ ಗುರುಪ್ರಸಾದ್ (ಮೊ: 8660431842) ರವರಿಗೆ ಖುದ್ದಾಗಿ ತಲುಪಿಸಬಹುದಾಗಿದೆ ಎಂದು ತಿಳಿಸಿದರು
ಸುದ್ದಿಗೋಷ್ಟಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಕಡಕೊಳಕುಮಾರಸ್ವಾಮಿ,ಉಪಾಧ್ಯಕ್ಷ ರಮ್ಮನಹಳ್ಳಿ ವೆಂಕಟಯ್ಯ, ಮರಿಸ್ವಾಮಿ ನಾಯಕ,ಕ್ಯಾತಮಾರನಹಳ್ಳಿ ವೆಂಕಟೇಶ್, ನಿರ್ದೇಶಕ ರಮ್ಮನಹಳ್ಳಿ ರಾಜಶೇಖರ್ ಹಾಜರಿದ್ದರು