Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜೂನ್ 27 ರಂದು ಕೆಂಪೇಗೌಡ ಜಯಂತಿ ಅರ್ಥಪೂರ್ಣವಾಗಿ ಆಚರಣೆ : ಆರ್. ಐಶ್ವರ್ಯ


ಮೈಸೂರು ; ನಾಡ ಪ್ರಭು ಕೆಂಪೇಗೌಡ ಜಯಂತಿಯನ್ನು ಜೂನ್ 27 ರಂದು ಮೈಸೂರು ನಗರದಲ್ಲಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ತಿಳಿಸಿದರು.
ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ವಿವಿಧ ಜಯಂತಿಯ ಆಚರಣೆ ಸಂಬAಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,
ನಾಡ ಪ್ರಭು ಕೆಂಪೇಗೌಡ ಜಯಂತಿಯನ್ನು ಜೂನ್ 27.ರಂದು ಬೆಳಗ್ಗೆ 11:30 ಕ್ಕೆ ನಗರದ ಕಲಾಮಂದಿರದಲ್ಲಿ ಆಚರಣೆ ಮಾಡಲಾಗುವುದು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ವೇದಿಕೆ ಮೇಲೆ ಗೀತಾ ಗಾಯನ ಏರ್ಪಡಿಸಲಾಗುವುದು. ಸಮುದಾಯದ ಮುಖಂಡರ ಸಲಹೆಯಂತೆ ದಿವ್ಯ ಸಾನಿಧ್ಯ ಹಾಗೂ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಯನ್ನು ಆಹ್ವಾನಿಸಲಾಗುವುದು ಎಂದರು.
ಜಯAತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳ ಆಚರಣೆ ಮಾಡಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ. ಮಹನೀಯರ ತತ್ವ ಆದರ್ಶಗಳನ್ನು ಗುಣಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ವೇದಿಕೆಯ ಮೇಲೆ ಗಣ್ಯರಿಗೆ ಬೊಕ್ಕೆಗಳನ್ನು ನೀಡಿ ಸ್ವಾಗತ ಮಾಡುವ ಬದಲು ಆಯಾ ಜಯಂತಿಗಳಲ್ಲಿ ಆ ಮಹನೀಯರ ಜೀವನ ಚರಿತ್ರೆ ಕುರಿತ ಪುಸ್ತಕಗಳನ್ನು ನೀಡಿ ಸ್ವಾಗತ ಮಾಡಬೇಕು ಎಂದು ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಯಂತಿಗಳು ನಡೆಯುವ ಸ್ಥಳದ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ, ಹಾಗೂ ಶಾಮಿಯಾನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು. ವಿವಿಧ ಜಯಂತಿಗಳ ಆಚರಣೆ ಮಾಡುವಾಗ ಮೈಸೂರು ನಗರದಲ್ಲಿ ಇರುವ ಎಲ್ಲಾ ಮಹನೀಯರ ಪ್ರತಿಮೆಗಳನ್ನು ಮಹಾನಗರ ಪಾಲಿಕೆಯ ವತಿಯಿಂದ ಸ್ವಚ್ಛ ಮಾಡಬೇಕು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಡಿ ಎಂ ಸುದರ್ಶನ್ ಮಾತನಾಡಿ, ಜಯಂತಿಗಳ ಆಚರಣೆಗೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ಕಲಾಮಂದಿರದಲ್ಲಿ ಗೀತಾ ಗಾಯನ ಏರ್ಪಡಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.