
ಮೈಸೂರು: ಬಾಲಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗಾಗಿದೆ, ಅದು ನಿರ್ಮೂಲನೆಯಾದಾಗ ಮಾತ್ರ ದೇಶ ಅಭಿವೃದ್ಧಿ ಸಾಧ್ಯ ಎಂದು ಲಕ್ಷಿ÷್ಮಪುರಂ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ರವಿಶಂಕರ್ ಹೇಳಿದರು
ಶುಕ್ರವಾರ ನಗರದ ಚಾಮುಂಡಿಪುರAನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾಲ ಭೋಧಿನಿ ಶಾಲೆಯಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಹಾಗೂ ಅಪೂರ್ವ ಸ್ನೇಹ ಬಳಗದ ವತಿಯಿಂದ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಲ್ಲಿ ಜಾಗೃತಿ ಮೂಡಿಸಿ ಮಾತನಾಡಿದ ಅವರು, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲ ನಾಗರಿಕರ ಸಹಕಾರ ಬಹಳ ಮುಖ್ಯ. ಶಿಕ್ಷಣ ಪಡೆಯುವ ವಯಸ್ಸಿನಲ್ಲಿ ಕಟ್ಟಡಗಳ ಕೆಲಸಗಳಲ್ಲಿ, ಅಂಗಡಿಗಳಲ್ಲಿ, ಗ್ಯಾರೇಜ್, ಹೋಟೆಲ್, ಕಾರ್ಖಾನೆಗಳಲ್ಲಿ, ಬೇಕರಿ ಮತ್ತಿತರ ಸ್ಥಳಗಳಲ್ಲಿ ಕೆಲಸಗಳನ್ನು ಮಾಡುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಕಂಡರೆ ತಕ್ಷಣವೇ ಸಕ್ಷಮ ಇಲಾಖೆಯ ಅಧಿಕಾರಿಗಳಿಗೆ ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಸಾರ್ವಜನಿಕರು ಸಾಮಾಜಿಕ ಹೊಣೆಗಾರಿಕೆಯನ್ನು ನಿರ್ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಕ್ಕಳಿಗೆ ಪುಸ್ತಕ ಲೇಖನಿಗಳನ್ನು ವಿತರಿಸಲಾಯಿತು. ಈ ವೇಳೆ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಕೆ.ಬಿ ಲಿಂಗರಾಜು,ಕರ್ನಾಟಕ ಬ್ಯಾಂಕ್ ನ ನಿವೃತ್ತ ಸಹಾಯಕ ಪ್ರಧಾನ ವ್ಯವಸ್ಥಾಪಕ ವಿಶ್ವನಾಥ್, ಅಪೂರ್ವ ಸುರೇಶ್, ಅರಿವು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ಕಶ್ಯಪ್, ಕೆ.ಆರ್.ಬ್ಯಾಂಕ್ ಅಧ್ಯಕ್ಷ ಬಸಪ್ಪ, ವಿಕ್ರಂ ಅಯ್ಯಂಗಾರ್ ಶಾಲೆಯ ಮುಖ್ಯ ಶಿಕ್ಷಕಿ ಲತಾ, ಶಿಕ್ಷಕರಾದ ಲತಾ ಕುಮಾರಿ, ಮೊಸಿನ್ ತಾಜ್, ಲೀಲಾವತಿ. ಮಮತಾ, ಮುಖಂಡರುಗಳಾದ ದೂರ ರಾಜಣ್ಣ,ಎಸ್.ಎನ್.ರಾಜೇಶ್, ಹಾಗೂ ಇನ್ನಿತರರು ಹಾಜರಿದ್ದರು.