
ಮೈಸೂರು; ಬೆಂಗಳೂರಿನ ಅರಮನೆ ಮೈದಾನದಲ್ಲಿ ಶುಕ್ರವಾರ ನಡೆದ ಫೋಟೋ ಟುಡೇ ವಸ್ತು ಪ್ರದರ್ಶನ ಹಾಗೂ ಸಾಂಸ್ಕöÈತಿಕ ಸಮಾರಂಭದಲ್ಲಿ ಮೈಸೂರಿನ ಹಿರಿಯ ಪತ್ರಿಕಾ ಛಾಯಾಗ್ರಾಹಕ ಪ್ರಗತಿ ಗೋಪಾಲಕೃಷ್ಣ ಅವರಿಗೆ ಪ್ರತಿಷ್ಠಿತ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಪ್ರಗತಿ ಗೋಪಾಲಕೃಷ್ಣರಿಗೆ ಅವರ ದೀರ್ಘಕಾಲದ ಸೇವೆ, ವೃತ್ತಿಪರ ನಿಷ್ಠೆ ಮತ್ತು ಛಾಯಾಗ್ರಹಣ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ, ಕರ್ನಾಟಕ ಛಾಯಾರತ್ನ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗಣ್ಯರು, ಛಾಯಾಗ್ರಾಹಕರು, ಪತ್ರಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದು ಪ್ರಶಸ್ತಿ ಪುರಸ್ಕöÈತರನ್ನು ಅಭಿನಂದಿಸಿದರು.