
ಮೈಸೂರು: ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವ0ತೆ ಆಗ್ರಹಿಸಿ ಶನಿವಾರ ನಗರದಲ್ಲಿ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ಸಂಘಟನೆಯಿ0ದ ಪ್ರತಿಭಟನೆ ನಡೆಸಲಾಯಿತು.
ನಗರದ ಪುರಭವನದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸಚಿವ ಸತೀಶ್ ಜಾರಕಿ ಹೊಳಿ ಅವರ ಭಾವಚಿತ್ರವನ್ನು ಹಿಡಿದು ಕೆಲಕಾಲ ಪ್ರತಿಭಟನಾ ಧರಣಿ ನಡೆಸಿದರು.
ಸಾಮಾಜಿಕ ಜಾಲತಾಣದಲ್ಲಿ ಸತೀಶ್ ಜಾರಕಿಹೊಳಿ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರೋಧವಾಗಿ ಸಹಿ ಸಂಗ್ರಹ ಮಾಡಿ ಸಿದ್ದರಾಮಯ್ಯ ಅವರಿಗೆ ಬೆನ್ನಿಗೆ ಚೂರಿ ಹಾಕಿದ್ದೀರಾ ಎಂದು ಅಪಪ್ರಚಾರದ ಪೊಸ್ಟ್ ಹಾಕಿದ್ದಾರೆ. ಪೋಸ್ಟ್ ಹಾಕಿದ್ದವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಆ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿಲ್ಲ. ಕೂಡಲೇ ಅವರನ್ನು ಬಂಧಿಸುವAತೆ ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆಯ ವತಿಯಿಂದ ರಾಜ್ಯಾಧ್ಯಕ್ಷ ದೇವರಾಜ್ ಟಿ. ಕಾಟೂರು ಸಚಿವರೂ ಆಗಿರುವ ಅಹಿಂದ ನಾಯಕ ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ವಿರುದ್ಧ ಸಹಿ ಸಂಗ್ರಹ ಮಾಡಿದ್ದಾರೆಂದು ಸುಳ್ಳು ಪೋಸ್ಟರ್ ಹಾಕಿದ್ದಾರೆ. ಇದರಿಂದಾಗಿ ಸಿದ್ದರಾಮಯ್ಯ ಹಾಗೂ ಸತೀಶ್ ಜಾರಕಿಹೊಳಿ ಸ್ನೇಹದಲ್ಲಿ ಬಿರುಕು ಉಂಟಾಗುತ್ತಿದೆ. ಅಹಿಂದ ಒಡೆಯಬೇಕು ಎಂದು ಸುಳ್ಳು ಸುದ್ದಿ ಹಾಕಿ ಸತೀಶ್ ಜಾರಕಿಹೊಳಿ ತೇಜೋವಧೆ ಮಾಡುತ್ತಿದ್ದಾರೆ. ಪೊಲೀಸರು ಕಿಡಿಗೇಡಿಗಳನ್ನು ಬಂಧಿಸಿಲ್ಲ. ಇದರಿಂದಾಗಿ ಅನಗತ್ಯ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ ಎಂದು ಕಿಡಿಕಾರಿದರು.
ಈ ಬಗ್ಗೆ ಬೆಳಗಾವಿಯಲ್ಲಿ ದೂರು ದಾಖಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸೇನೆಯ ಜಿಲ್ಲಾಧ್ಯಕ್ಷ ಉದ್ಬೂರು ಸೋಮಣ್ಣ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಮತ್ತು ಸಮುದಾಯದ ಮುಖಂಡರು ಭಾಗವಹಿಸಿದ್ದರು.