Skip to main content

3Kaala News

ಸುಭಾಷಿತ 

ಅತಿಯಾಗಿ ಯಾರನ್ನೂ ಒತ್ತಾಯಪೂರ್ವಕವಾಗಿ ನಿಮ್ಮ ಜೀವನದಲ್ಲಿ ಉಳಿಸಿಕೊಳ್ಳಬೇಡಿ…”
ಅತಿಯಾಗಿ ಯಾರನ್ನೂ ಹಿಡಿದುಕೊಳ್ಳಲು ಪ್ರಯತ್ನಿಸಬೇಡಿ.
ಉಳಿಯುವ ಮನಸ್ಸಿದ್ದವರು ಕಾರಣವಿಲ್ಲದೆ ಉಳಿಯುತ್ತಾರೆ.
ಹೋಗುವ ಮನಸ್ಸಿದ್ದವರನ್ನು ಹಿಡಿದಿಟ್ಟರೂ ಪ್ರಯೋಜನವಿಲ್ಲ.
ಒತ್ತಾಯದಿಂದ ಉಳಿದ ಸಂಬಂಧಕ್ಕೆ ಆತ್ಮೀಯತೆ ಇರುವುದಿಲ್ಲ.
ಪ್ರೀತಿಯನ್ನು ಕೇಳಿ ಪಡೆಯಲು ಸಾಧ್ಯವಿಲ್ಲ.
ಗೌರವವನ್ನು ಬಲವಂತದಿಂದ ಗಳಿಸಲಾಗುವುದಿಲ್ಲ.
ನಿಮ್ಮ ವ್ಯಕ್ತಿತ್ವವೇ ನಿಮ್ಮ ದೊಡ್ಡ ಆಸ್ತಿ.
ಅದನ್ನು ಯಾರಿಗಾಗಿ ಕಳೆದುಕೊಳ್ಳಬೇಡಿ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

100 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ

ಮೈಸೂರು:ಶ್ರೀ ಕೃಷ್ಣ ಮಿತ್ರ ಮಂಡಳಿ ಮತ್ತು ಶ್ರೀ ಕೃಷ್ಣ ಟ್ರಸ್ಟ್ ವತಿಯಿಂದ ನಗರದ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣಧಾಮ ಆವರಣದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿರುವ 100 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು.ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದ ಶ್ರೀ ರಾಮಕೃಷ್ಣ ವಿದ್ಯಾ ಶಾಲೆಯ ನಿವೃತ್ತ ಪ್ರಾಂಶುಪಾಲ ಎಸ್ ಬಾಲಾಜಿ, ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಇತರೆ, ವಿದ್ಯಾರ್ಥಿಗಳಿಗೆ ಇದು ಪ್ರೇರಣೆಯಾಗುತ್ತದೆ ಎಂದು ಹೇಳಿದರು.ಪ್ರತಿಯೊಂದು ಮಕ್ಕಳಲ್ಲೂ ಒಂದೊAದು ಪ್ರತಿಭೆ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಆಗ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಿನ ಘಟ್ಟ. ಇಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷ ಶ್ರೀವತ್ಸರಾವ್, ಉಪಾಧ್ಯಕ್ಷ ವಾಸುದೇವ್ ರಾವ್, ಗೌರವ ಕಾರ್ಯದರ್ಶಿ ರಾಘವೇಂದ್ರ ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷ ರವಿ ಶಾಸ್ತಿç ಮತ್ತು ಪಿ.ಎಸ್.ಶೇಖರ್, ಗೌರವ ಕಾರ್ಯದರ್ಶಿ ಕೆ.ವಿ.ಶ್ರೀಧರ್,ಖಜಾಂಚಿ ಸುರೇಶ್ ರಾವ್ ಹಾಗೂ ಇನ್ನಿತರರು ಹಾಜರಿದ್ದರು.