Skip to main content

3Kaala News

ಸುಭಾಷಿತ 

ಅತಿಯಾಗಿ ಯಾರನ್ನೂ ಒತ್ತಾಯಪೂರ್ವಕವಾಗಿ ನಿಮ್ಮ ಜೀವನದಲ್ಲಿ ಉಳಿಸಿಕೊಳ್ಳಬೇಡಿ…”
ಅತಿಯಾಗಿ ಯಾರನ್ನೂ ಹಿಡಿದುಕೊಳ್ಳಲು ಪ್ರಯತ್ನಿಸಬೇಡಿ.
ಉಳಿಯುವ ಮನಸ್ಸಿದ್ದವರು ಕಾರಣವಿಲ್ಲದೆ ಉಳಿಯುತ್ತಾರೆ.
ಹೋಗುವ ಮನಸ್ಸಿದ್ದವರನ್ನು ಹಿಡಿದಿಟ್ಟರೂ ಪ್ರಯೋಜನವಿಲ್ಲ.
ಒತ್ತಾಯದಿಂದ ಉಳಿದ ಸಂಬಂಧಕ್ಕೆ ಆತ್ಮೀಯತೆ ಇರುವುದಿಲ್ಲ.
ಪ್ರೀತಿಯನ್ನು ಕೇಳಿ ಪಡೆಯಲು ಸಾಧ್ಯವಿಲ್ಲ.
ಗೌರವವನ್ನು ಬಲವಂತದಿಂದ ಗಳಿಸಲಾಗುವುದಿಲ್ಲ.
ನಿಮ್ಮ ವ್ಯಕ್ತಿತ್ವವೇ ನಿಮ್ಮ ದೊಡ್ಡ ಆಸ್ತಿ.
ಅದನ್ನು ಯಾರಿಗಾಗಿ ಕಳೆದುಕೊಳ್ಳಬೇಡಿ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್’ನಲ್ಲಿ ನಡೆದ ಬೆಂಕಿ ಅವಘಡದಲ್ಲಿ ಇಬ್ಬರು ಸಾವು, 7 ಮಂದಿಗೆ ತೀವ್ರ ಗಾಯ

ಮೈಸೂರು: ಮೈಸೂರಿನ ದಟ್ಟಗಳ್ಳಿ ಸಮೀಪದಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್’ನಲ್ಲಿ ನಡೆದ ಬೆಂಕಿ ಅವಘಡ ಸಂಭವಿಸಿ, ಇಬ್ಬರು ಮೃತಪಟ್ಟಿದ್ದು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗ್ಯಾರೇಜ್‌ನ ನೌಕರರು ಎಂದು ಹೇಳಲಾಗುತ್ತಿರುವ ಪ್ರಕಾಶ್ ಹಾಗೂ ಸುಹೆಲ್ ಎಂಬವರು ಮೃತಪಟ್ಟಿದ್ದು, ಪಬ್‌ನಲ್ಲಿದ್ದ ಸುಮಾರು 7 ಮಂದಿಗೆ ಸುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫಾಕ್ಸ್ ಡೆನ್ ಮೇಲಂತಸ್ತು ಮರ ಮತ್ತು ಹುಲ್ಲಿನಿಂದ ಅಲಂಕರಿಸಲಾಗಿತ್ತು.ಹಾಗಾಗಿ ಬೆಂಕಿ ಬೇಗ ಆವರಿಸಿದೆ,ಮೇಲಿಂದ ಕೆಳಗೆ ಬರಲು ಚಿಕ್ಕ ಸ್ಟೆಪ್ ಮಾತ್ರ ಇದೆ.ಜತೆಗೆ ಹೊರಗೆ ಬರಲು ಕೂಡಾ ಒಂದೇ ಬಾಗಿಲು ಇದ್ದುದರಿಂದ ಬಹಳ ಮಂದಿ ಬೆಂಕಿಯಿAದ
ಸ್ಫೋಟದ ಬಳಿಕ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಪಬ್ ನಲ್ಲಿದ್ದವರು ಆತಂಕಗೊAಡು ಮೇಲಂತಸ್ತಿನಿAದ ಜಿಗಿದು ಪಾರಾಗಲು ಯತ್ನಿಸಿದ್ದಾರೆ,ಇದರಿಂದಾಗಿ ಗಾಯಗೊಂಡಿದ್ದಾರೆ. ಸ್ಪೋಟದ ತೀವ್ರತೆಗೆ ಇಡೀ ಆವರಣ ಸುಟ್ಟು ಕರಕಲಾಗಿದೆ. ಈ ಘಟನೆಯಿಂದಾಗಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಹರ ಸಾಹಸ ನಡೆಸಿ ಬೆಂಕಿಯನ್ನು ನಂದಿಸಿದರು. ಘಟನೆಗೆ ಸಿಲಿಂಡರ್ ಸ್ಪೋಟವಾಗಿದ್ದೆ ಕಾರಣ ಎಂದು ಹೇಳಲಾಗುತ್ತಿದೆ. ಆದರೆ ಘಟನೆ ನೋಡಿದವರು ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಇದು ಆಗಿದೆ ಎಂದು ಹೇಳುತ್ತಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವಘಡಕ್ಕೆ ಕಾರಣ ಏನು ಎಂಬ ಬಗ್ಗೆ ತನಿಖೆ ಕೈಗೊಂಡಿದ್ದಾರೆ.