
ಮೈಸೂರು:ಅರಿವು ಸಂಸ್ಥೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ 6 ಮಂದಿಗೆ ಪರಿಸರ ಪ್ರೇಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜೂನ್ 17ರಂದು ಬೆಳಗ್ಗೆ 11.30 ಗಂಟೆಗೆ ಚಾಮುಂಡಿಪುರAನಲ್ಲಿರುವ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪರಿಸರದ ಬಗ್ಗೆ ಕಾಳಜಿ ಹೊಂದಿರುವ ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್, ಕಡಕೋಳ ಪಟ್ಟಣ ಪಂಚಾಯತ್ ಆರೋಗ್ಯ ನಿರೀಕ್ಷಿಕ ಮಂಜುನಾಥ್ ,ಪರಿಸರ ಪ್ರೇಮಿ ಕೃಷ್ಣಪ್ಪ (ಘಂಟಯ್ಯ),ಗಗನ್ ಗೌಡ,ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್, ಶಿಕ್ಷಕಿ ರೇಣುಕಾ ಅವರಿಗೆ ಪರಿಸರ ಪ್ರೇಮಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಅರಿವು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ಕಶ್ಯಪ್ ತಿಳಿಸಿದ್ದಾರೆ.
ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ,ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಕೆ.ಬಿ.ಲಿಂಗರಾಜು,ಕಾAಗ್ರೆಸ್ ಮುಖಂಡ ಎನ್.ಎಂ.ನವೀನ್ ಕುಮಾರ್, ಹಿರಿಯ ಸಮಾಜ ಸೇವಕ ರಘುರಾಮ್ ವಾಜಪೇಯಿ, ನಗರಪಾಲಿಕೆಯ ಮಾಜಿ ಸದಸ್ಯ ಮಾ ವಿ ರಾಮಪ್ರಸಾದ್ ,ಕೆಪಿಸಿಸಿ ಸದಸ್ಯ ನಟರಾಜ್,ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.