Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಹಂಪಾಪುರ ಗ್ರಾಮದಲ್ಲಿ ಮಣ್ಣನ್ನು ರಕ್ಷಿಸಿ ಅಭಿಯಾನ


ಮೈಸೂರು; ಐಸಿಎಆರ್ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರ, ಸುತ್ತೂರು ಹಾಗೂ ಎಟಿಎಂಎ ಮೈಸೂರು ಸಹಯೋಗದೊಂದಿಗೆ ಎಚ್.ಡಿ. ಕೋಟೆ ತಾಲೂಕಿನ ಹಂಪಾಪುರ ಗ್ರಾಮದಲ್ಲಿ ಖೇತ್ ಬಚ್ಚಾವೋ ಅಭಿಯಾನವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕೆವಿಕೆ ವಿಜ್ಞಾನಿಗಳು ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಮಣ್ಣು ಪರೀಕ್ಷೆ, ಮಣ್ಣಿನ ಆರೋಗ್ಯ ನಿರ್ವಹಣೆ, ಹಸಿರು ಗೊಬ್ಬರ ಮತ್ತು ನೈಸರ್ಗಿಕ ಕೃಷಿ ಪದ್ಧತಿಗಳ ಮಹತ್ವದ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಿದರು. ಮಣ್ಣಿನ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ವೈಜ್ಞಾನಿಕ ಪೋಷಕಾಂಶ ನಿರ್ವಹಣೆಯ ಅಗತ್ಯವನ್ನು ತಿಳಿಸಲಾಯಿತು. ಮಣ್ಣಿನ ಫಲವತ್ತತೆಯನ್ನು ಸುಧಾರಿಸುವಲ್ಲಿ ಮತ್ತು ಬೆಳೆ ಉತ್ಪಾದಕತೆಯನ್ನು ಉಳಿಸಿಕೊಳ್ಳುವಲ್ಲಿ ಹಸಿರು ಗೊಬ್ಬರ ಬೆಳೆಗಳು ಮತ್ತು ಸಾವಯವ ಕೃಷಿ ಮಹತ್ವವನ್ನು ರೈತರಿಗೆ ತಿಳಿಸಿಕೊಡಲಾಯಿತು.
ಸುತ್ತೂರಿನ ಐಸಿಎಆರ್ ಜೆಎಸ್‌ಎಸ್ ಕೆವಿಕೆ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಬಿ.ಎನ್. ಜ್ಞಾನೇಶ್ ಮಾತನಾಡಿ, ಸುಸ್ಥಿರ ಮಣ್ಣಿನ ಆರೋಗ್ಯ ನಿರ್ವಹಣಾ ಪದ್ಧತಿಗಳು ಮತ್ತು ನೈಸರ್ಗಿಕ ಕೃಷಿ ವಿಧಾನಗಳಾದ ಜೀವಾಮೃತ, ಗೋಕೃಪಾಮೃತ, ಬೀಜಾಮೃತಗಳನ್ನು ಅಳವಡಿಕೆಯ ಕುರಿತು ರೈತರಿಗೆ ಮಾಹಿತಿ ನೀಡಿದರು. ಎಚ್.ಡಿ. ಕೋಟೆಯ ಸಹಾಯಕ ಕೃಷಿ ನಿರ್ದೇಶಕ ಪ್ರಸಾದ್ ಮಾತನಾಡಿ, ದೀರ್ಘಕಾಲೀನ ಕೃಷಿ ಸುಸ್ಥಿರತೆಗಾಗಿ ಮಣ್ಣಿನ ಸಂಪನ್ಮೂಲಗಳನ್ನು ಸಂರಕ್ಷಿಸುವ ಮಹತ್ವವನ್ನು ಒತ್ತಿ ಹೇಳಿದರು. ಕೃಷಿ ಇಲಾಖೆ ಅಧಿಕಾರಿಗಳು, ಎಟಿಎಂಎ ಸಿಬ್ಬಂದಿ ಮತ್ತು ರೈತರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು ಮತ್ತು ಬೆಳೆ ಮತ್ತು ಮಣ್ಣಿನ ನಿರ್ವಹಣೆಗೆ ಸಂಬAಧಿಸಿದ ಪ್ರಶ್ನೆಗಳನ್ನು ಸ್ಪಷ್ಟಪಡಿಸಲು ತಜ್ಞರೊಂದಿಗೆ ಸಂವಹನ ನಡೆಸಿದರು. ಕೃಷಿವಿಜ್ಞಾನ ಕೇಂದ್ರದ ವಿಷಯ ತಜ್ಞರುಗಳಾದ ಶಾಮರಾಜ್, ಡಾವಿನಚಿiÀiï ಎಂ, ಡಾರಕ್ಷಿತ್ ರಾಜ್, ಹಾಗೂ ಆತ್ಮದ ಉಪ ಯೋಜನೆಯ ನಿರ್ದೇಶಕ ಸತೀಶ್ ಮತ್ತಿತರರು ಮಾಹಿತಿ ನಿಡಿದರು.