Skip to main content

3Kaala News

ಸುಭಾಷಿತ 

ಅತಿಯಾಗಿ ಯಾರನ್ನೂ ಒತ್ತಾಯಪೂರ್ವಕವಾಗಿ ನಿಮ್ಮ ಜೀವನದಲ್ಲಿ ಉಳಿಸಿಕೊಳ್ಳಬೇಡಿ…”
ಅತಿಯಾಗಿ ಯಾರನ್ನೂ ಹಿಡಿದುಕೊಳ್ಳಲು ಪ್ರಯತ್ನಿಸಬೇಡಿ.
ಉಳಿಯುವ ಮನಸ್ಸಿದ್ದವರು ಕಾರಣವಿಲ್ಲದೆ ಉಳಿಯುತ್ತಾರೆ.
ಹೋಗುವ ಮನಸ್ಸಿದ್ದವರನ್ನು ಹಿಡಿದಿಟ್ಟರೂ ಪ್ರಯೋಜನವಿಲ್ಲ.
ಒತ್ತಾಯದಿಂದ ಉಳಿದ ಸಂಬಂಧಕ್ಕೆ ಆತ್ಮೀಯತೆ ಇರುವುದಿಲ್ಲ.
ಪ್ರೀತಿಯನ್ನು ಕೇಳಿ ಪಡೆಯಲು ಸಾಧ್ಯವಿಲ್ಲ.
ಗೌರವವನ್ನು ಬಲವಂತದಿಂದ ಗಳಿಸಲಾಗುವುದಿಲ್ಲ.
ನಿಮ್ಮ ವ್ಯಕ್ತಿತ್ವವೇ ನಿಮ್ಮ ದೊಡ್ಡ ಆಸ್ತಿ.
ಅದನ್ನು ಯಾರಿಗಾಗಿ ಕಳೆದುಕೊಳ್ಳಬೇಡಿ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜಿಲ್ಲೆಯಲ್ಲಿ 13,677 ಗೃಹ ಲಕ್ಷ್ಮಿಫಲಾನುಭವಿಗಳು ಮೃತಪಟ್ಟಿದ್ದಾರೆ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜು

ಮೈಸೂರು: ಜಿಲ್ಲೆಯಲ್ಲಿ 13,677 ಗೃಹ ಲಕ್ಷ್ಮಿ ಫಲಾನುಭವಿಗಳು ಮೃತಪಟ್ಟಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜು ಮಾಹಿತಿ ನೀಡಿದರು.
ಬುಧವಾರ ನಗರದ ಜಿಲ್ಲಾ ಪಂಚಾಯತ್ ಡಿ.ದೇವರಾಜ ಅರಸು ಸಭಾಂಗಣದಲ್ಲಿ ನಡೆದ ಗೃಹ ಲಕ್ಷಿö್ಮ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಒಟ್ಟು 13,677 ಗೃಹಲಕ್ಷಿ÷್ಮ ಫಲಾನುಭವಿಗಳು ಮರಣ ಹೊಂದಿದ್ದಾರೆ. ಮನೆ – ಮನೆಗೆ ಭೇಟಿ ನೀಡಿ ಅಂಗನವಾಡಿ ಕಾರ್ಯಕರ್ತೆಯರು ಪರಿಶೀಲಿಸಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ವರದಿ ನೀಡುತ್ತಿದ್ದಾರೆ. ಪರಿಶೀಲನೆ ಕೆಲಸವನ್ನು ಬೇಗನೆ ಪೂರ್ಣಗೊಳಿಸಲಾಗುವುದು. ಬಯೋಮೆಟ್ರಿಕ್ ಹಾಗೂ ಹೊಸ ಅರ್ಜಿ ಸಲ್ಲಿಕೆ ಕುರಿತಂತೆ ಸರಕಾರದಿಂದ ಮಾರ್ಗಸೂಚಿ ಬಂದಿರುವುದಿಲ್ಲ. ಬಂದ ಕೂಡಲೇ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.
ಗೃಹಲಕ್ಷಿ÷್ಮ ಯೋಜನೆಯಡಿ 2026-27ನೇ ಸಾಲಿನಲ್ಲಿ ಬಿಡುಗಡೆಯಾದ ಮೊದಲನೇ ಕಂತಿನಲ್ಲಿ 6,71,674 ಲಾನುಭವಿಗಳಿಗೆ ರೂ. 134,33,48,000 ಅನುದಾನ ಬಿಡುಗಡೆಯಾಗಿದ್ದು, ಫಲಾನುಭವಿಗಳಿಗೆ ಪಾವತಿಯಾಗಿರುತ್ತದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್. ಅರುಣ್ ಕುಮಾರ್ ಮಾತನಾಡಿ, ಸರ್ಕಾರ ಬಡವರು, ಹಿಂದುಳಿದ ವರ್ಗದವರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಪಂಚ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪಬೇಕು ಎಂಬುದು ಸಮಿತಿಯ ಉದ್ದೇಶ ಎಂದರು.
ತಾಲೂಕು ಮಟ್ಟದಲ್ಲಿ ನಡೆಯುವ ಸಮಿತಿ ಸಭೆಯಲ್ಲಿ ಅಧಿಕಾರಿಗಳು ಹಾಜರಾಗಬೇಕು. ಹಾಜರಾಗದಿದ್ದಲ್ಲಿ, ಜಿಲ್ಲಾ ಮಟ್ಟದ ಸಮಿತಿಗೆ ವರದಿ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷ ಪ್ರೊ. ಶಿವಕುಮಾರ್ ಮಾತನಾಡಿ, ಗೃಹಲಕ್ಷಿ÷್ಮ ಯೋಜನೆಯಲ್ಲಿ ಮೃತ ಫಲಾನುಭವಿ, ಐಟಿ, ಜಿಎಸ್ಟಿ ಪಾವತಿ ಮಾಡುತ್ತಿರುವ ಲಾನುಭವಿಗಳು ಅನರ್ಹರರಾಗಿದ್ದು, ಅವರಿಗೆ ಪಾವತಿಸಲಾಗುತ್ತಿರುವ ಗೃಹಲಕ್ಷಿ ಹಣ ನಿಲುಗಡೆಯಾಗಬೇಕು. ಅನರ್ಹರಾಗಿ ಹಣ ಪಡೆದಿದ್ದಲ್ಲಿ ಅವರಿಂದ ವಸೂಲಿ ಮಾಡಬೇಕು. ಗೃಹಲಕ್ಷಿ ಯೋಜನೆಯ ಅನರ್ಹ ಫಲಾನುಭವಿಗಳ ನಿಖರ ಮಾಹಿತಿಯನ್ನು ಸಭೆಗೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷ ಹುಣಸೂರು ಬಸವಣ್ಣ ಮಾತನಾಡಿ, ಅರ್ಹ ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಯೋಜನೆ ತಲುಪಿಸಲು ತೊಂದರೆಯಿದ್ದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ತಕ್ಷಣ ಪರಿಹಾರಕ್ಕೆ ಕ್ರಮ ವಹಿಸಬೇಕು. ಜಿಲ್ಲಾ ಗ್ಯಾರಂಟಿ ಯೋಜನೆಯ ಸದಸ್ಯ ಸಾ. ಮಾ. ಯೋಗೇಶ್ ಅವರು ಮಾತನಾಡಿ, ಹೊರರಾಜ್ಯದ ಮಹಿಳೆಯರು ಗೃಹಲಕ್ಷಿಯ ಫಲಾನುಭವಿಗಳಾಗಿರಬಹುದು. ಅವರನ್ನು ಪತ್ತೆಹಚ್ಚಲು ಅಧಿಕಾರಿಗಳು ಕೆಳಹಂತದ ಸಿಬ್ಬಂದಿಯೊAದಿಗೆ ಚುರುಕಾಗಿ ಕೆಲಸ ನಿರ್ವಹಿಸಿ ಶೀಘ್ರವಾಗಿ ವರದಿ ನೀಡಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಚಂದ್ರಶೇಖರ್, ಅಬ್ದುಲ್ ಖಾದರ್, ಚಲುವರಾಜು, ಮಹದೇವ್, ಗುರುಸ್ವಾಮಿ, ಉದಯಶಂಕರ್?, ಚಲುವರಾಜು, ನಿತಿನ್ ಮತ್ತಿತರರು ಇದ್ದರು.