Skip to main content

3Kaala News

ಸುಭಾಷಿತ 

ಅತಿಯಾಗಿ ಯಾರನ್ನೂ ಒತ್ತಾಯಪೂರ್ವಕವಾಗಿ ನಿಮ್ಮ ಜೀವನದಲ್ಲಿ ಉಳಿಸಿಕೊಳ್ಳಬೇಡಿ…”
ಅತಿಯಾಗಿ ಯಾರನ್ನೂ ಹಿಡಿದುಕೊಳ್ಳಲು ಪ್ರಯತ್ನಿಸಬೇಡಿ.
ಉಳಿಯುವ ಮನಸ್ಸಿದ್ದವರು ಕಾರಣವಿಲ್ಲದೆ ಉಳಿಯುತ್ತಾರೆ.
ಹೋಗುವ ಮನಸ್ಸಿದ್ದವರನ್ನು ಹಿಡಿದಿಟ್ಟರೂ ಪ್ರಯೋಜನವಿಲ್ಲ.
ಒತ್ತಾಯದಿಂದ ಉಳಿದ ಸಂಬಂಧಕ್ಕೆ ಆತ್ಮೀಯತೆ ಇರುವುದಿಲ್ಲ.
ಪ್ರೀತಿಯನ್ನು ಕೇಳಿ ಪಡೆಯಲು ಸಾಧ್ಯವಿಲ್ಲ.
ಗೌರವವನ್ನು ಬಲವಂತದಿಂದ ಗಳಿಸಲಾಗುವುದಿಲ್ಲ.
ನಿಮ್ಮ ವ್ಯಕ್ತಿತ್ವವೇ ನಿಮ್ಮ ದೊಡ್ಡ ಆಸ್ತಿ.
ಅದನ್ನು ಯಾರಿಗಾಗಿ ಕಳೆದುಕೊಳ್ಳಬೇಡಿ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಬಾರ್ ಅಂಡ್ ರೆಸ್ಟೋರೆಂಟ್ ಅಗ್ನಿ ಅವಘಡ : ಐದು ಮಂದಿ ಅಬಕಾರಿ ಅಧಿಕಾರಿಗಳ ಅಮಾನತು

ಮೈಸೂರು; ನಗರದ ದಟ್ಟಗಳ್ಳಿ ಸಮೀಪದ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಆದ ಅಗ್ನಿ ಅವಘಡದ ಸಂಬAಧ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಐದು ಮಂದಿ ಅಬಕಾರಿ ಅಧಿಕಾರಿಗಳ ಅಮಾನತು ಮಾಡಲಾಗಿದೆ.
ಮೈಸೂರಿನ ದಟ್ಟಗಳ್ಳಿ 3 ನೇ ಹಚಿತದ ನೇತಾಜಿ ವೃತ್ತದ ಬಳಿಯಿರುವ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್ ರೆಸ್ಟೋ ಪಬ್‌ನ ಕಟ್ಟಡದ ರೂಪ್ ಟಾಪ್ ನಲ್ಲಿ ಅನುಮತಿ ಪಡೆಯದೆ ಒಣ ಹುಲ್ಲು ಮತ್ತು ಗರಿಗಳಿಂದ ನಿರ್ಮಿಸಿ ಬಾರ್ ಅಂಡ್ ರೆಸ್ಟೋರೆಂಟ್ ನಡೆಸುತ್ತಿದ್ದು, ಈ ಸಂಬAಧ ಪರಿಶೀಲಿಸದೆ ಕರ್ತವ್ಯ ಲೋಪ ಎಸಗಿರುವ ಮೈಸೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕರು ಹಾಗೂ ಮೈಸೂರು ವಲಯ-3 ರ ಅಬಕಾರಿ ನಿರೀಕ್ಷಕರು, ಅಬಕಾರಿ ಉಪನಿರೀಕ್ಷಕರು-1, ಅಬಕಾರಿ ಉಪನಿರೀಕ್ಷಕರು-2, ಹಾಗೂ ಒಬ್ಬ ಅಬಕಾರಿ ಪೇದೆ (ಬೀಟ್ ಕಾನ್ಸಟೇಬಲ್) ಸೇರಿದಂತೆ ಒಟ್ಟು 5 ಜನರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಪಡಿಸಿ ಅಬಕಾರಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.