Skip to main content

3Kaala News

ಸುಭಾಷಿತ 

ಅತಿಯಾಗಿ ಯಾರನ್ನೂ ಒತ್ತಾಯಪೂರ್ವಕವಾಗಿ ನಿಮ್ಮ ಜೀವನದಲ್ಲಿ ಉಳಿಸಿಕೊಳ್ಳಬೇಡಿ…”
ಅತಿಯಾಗಿ ಯಾರನ್ನೂ ಹಿಡಿದುಕೊಳ್ಳಲು ಪ್ರಯತ್ನಿಸಬೇಡಿ.
ಉಳಿಯುವ ಮನಸ್ಸಿದ್ದವರು ಕಾರಣವಿಲ್ಲದೆ ಉಳಿಯುತ್ತಾರೆ.
ಹೋಗುವ ಮನಸ್ಸಿದ್ದವರನ್ನು ಹಿಡಿದಿಟ್ಟರೂ ಪ್ರಯೋಜನವಿಲ್ಲ.
ಒತ್ತಾಯದಿಂದ ಉಳಿದ ಸಂಬಂಧಕ್ಕೆ ಆತ್ಮೀಯತೆ ಇರುವುದಿಲ್ಲ.
ಪ್ರೀತಿಯನ್ನು ಕೇಳಿ ಪಡೆಯಲು ಸಾಧ್ಯವಿಲ್ಲ.
ಗೌರವವನ್ನು ಬಲವಂತದಿಂದ ಗಳಿಸಲಾಗುವುದಿಲ್ಲ.
ನಿಮ್ಮ ವ್ಯಕ್ತಿತ್ವವೇ ನಿಮ್ಮ ದೊಡ್ಡ ಆಸ್ತಿ.
ಅದನ್ನು ಯಾರಿಗಾಗಿ ಕಳೆದುಕೊಳ್ಳಬೇಡಿ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮನೆಗೊಂದು ಮರ ಬೆಳೆಸುವ ಮೂಲಕ ಪ್ರತಿಯೊಬ್ಬರೂ ಪರಿಸರವನ್ನು ಉಳಿಸಿ ಬೆಳಸಬೇಕು; ಸಿ.ನಾರಾಯಣಗೌಡ


ಮೈಸೂರು: ಮನೆಗೊಂದು ಮರ ಬೆಳೆಸುವ ಮೂಲಕ ಪ್ರತಿಯೊಬ್ಬರೂ ಪರಿಸರವನ್ನು ಉಳಿಸಿ ಬೆಳಸಬೇಕೆಂದು ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ತಿಳಿಸಿದರು.
ನಗರದ ಚಾಮುಂಡಿಪುರAನಲ್ಲಿರುವ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ಅರಿವು ಸಂಸ್ಥೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರದ ಬಗ್ಗೆ ಕಾಳಜಿ ಹೊಂದಿರುವ ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್,
ಕಡಕೋಳ ಪಟ್ಟಣ ಪಂಚಾಯತ್ ಆರೋಗ್ಯ ನಿರೀಕ್ಷಿಕ ಮಂಜುನಾಥ್ ,ಪರಿಸರ ಪ್ರೇಮಿ ಕೃಷ್ಣಪ್ಪ (ಘಂಟಯ್ಯ),ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್,ಗಗನ್ ಗೌಡ ರವರಿಗೆ ಪರಿಸರ ಪ್ರೇಮಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಹಾಳಾಗುತ್ತಿದೆ. ವಿದ್ಯಾವಂತರೇ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಪರಿಸರದ ಮಹತ್ವ ತಿಳಿದಿದ್ದರೂ ಅನಕ್ಷರಸ್ಥರ ರೀತಿಯಲ್ಲಿ ಪರಿಸರವನ್ನು ನಾಶ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಸರವನ್ನು ಕಾಪಾಡಿ, ಅದನ್ನು ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಬೇಕು ಎಂದರು.
ಹಿರಿಯ ಸಮಾಜ ಸೇವಕ ಕೆ ರಘುರಾಮ ವಾಜಪೇಯಿ ಮಾತನಾಡಿ, ಗಿಡ ಬೆಳೆಸಿ ನಾಡು ಬೆಳೆಸಿ ಘೋಷಣೆ ವಾಸ್ತವದಲ್ಲಿ ಜಾರಿಯಾಗಬೇಕು. ನಾವು ಇರುವ ಜಾಗದ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸುತ್ತಮುತ್ತ ಇರುವ ಜಾಗದಲ್ಲಿ ಹಸಿರು ಇರುವ ರೀತಿಯಲ್ಲಿ ನೋಡಿಕೊಳ್ಳುವುದು ನಮ್ಮ ಕರ್ತವ್ಯವಾಗಬೇಕು. ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ ಕೆ ಬಿ ಲಿಂಗರಾಜ, ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್, ಮುಖಂಡರಾದ ನಟರಾಜ್, ಕೆಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ, ಕೇಬಲ್ ಮಹೇಶ್, ಜಿ ರಾಘವೇಂದ್ರ, ಅರಿವು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ಕಶ್ಯಪ್, ಎಸ್ ಎನ್ ರಾಜೇಶ್, ರಾಕೇಶ್, ಸುರೇಂದ್ರ, ಪುರುಷೋತ್ತಮ್, ನವೀನ್ ಕೆಂಪಿ, ಹಾಗೂ ಇನ್ನಿತರರು ಹಾಜರಿದ್ದರು.