Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕೇವಲ 27 ದಿನಗಳಲ್ಲಿ ಮಾದಪ್ಪನಿಗೆ ಭಕ್ತರಿಂದ ಹರಿದು ಬಂತು ದಾಖಲೆಯ 2,73 ಕೋಟಿ ರೂ


ಚಾಮರಾಜನಗರ; ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಮತ್ತೆ ಕೋಟಿ ಕೋಟಿ ಹಣ ಸಂಗ್ರಹವಾಗಿದೆ. ವೀಕೆಂಡ್ ಹಾಗೂ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಹರಿವು ಹೆಚ್ಚಾಗಿದ್ದು, ಕೇವಲ 27 ದಿನಗಳಲ್ಲಿ ದಾಖಲೆಯ 2,73,57,105 ರೂಪಾಯಿ ನಗದು ಸಂಗ್ರಹವಾಗಿದೆ.
ದೇವಸ್ಥಾನದ ಹುಂಡಿಗಳನ್ನು ತೆರೆದು ಅದರ ಎಣಿಕೆ ಕಾರ್ಯವನ್ನು ನಡೆಸಿದಾಗ ಹಣದ ಜೊತೆಗೆ 44 ಗ್ರಾಂ ಚಿನ್ನ ಹಾಗೂ 977 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ಸಮರ್ಪಿಸಿದ್ದಾರೆ. ವಿಶೇಷವೆಂದರೆ, ಎಣಿಕೆ ವೇಳೆ ಏಳು ವಿದೇಶಿ ನೋಟುಗಳು ಹಾಗೂ ನಿಷೇಧಿತ ಹತ್ತು 2,000 ಮುಖಬೆಲೆಯ ಹಳೆಯ ನೋಟುಗಳು ಪತ್ತೆಯಾಗಿವೆ. ಮಲೆ ಮಹದೇಶ್ವರ ಪ್ರಾಧಿಕಾರದ ಸಿಬ್ಬಂದಿ ಸಮ್ಮುಖದಲ್ಲಿ ಈ ಬೃಹತ್ ಮೊತ್ತದ ಹುಂಡಿ ಎಣಿಕೆ ಕಾರ್ಯ ಜರುಗಿದೆ.