Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಧರ್ಮೇಂದ್ರ ಪ್ರಧಾನ್ ಅವರ ಅಣುಕು ಶವ ಯಾತ್ರೆ ನಡೆಸಿ ನೀಟ್ ಪರೀಕ್ಷೆ ವಿರುದ್ಧ ಪ್ರತಿಭಟನೆ


ಮೈಸೂರು: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಖಂಡಿಸಿ, ಕಾಂಗ್ರೆಸ್ ಮಾಜಿ ಶಾಸಕ ಸೋಮಶೇಖರ್ ನೇತೃತ್ವದಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪ್ರತಿಕೃತಿಯ ಅಣುಕು ಶವಯಾತ್ರೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸಚಿವರ ಅಣಕು ಶವಯಾತ್ರೆ ನಡೆಸಿದರು, ಬಳಿಕ ಪ್ರತಿಕೃತಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಎಂ ಕೆ ಸೋಮಶೇಖರ್ , ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನೀಟ್ ಪರೀಕ್ಷೆಯ ಮೇಲೆ ಅವಲಂಬಿತವಾಗಿದ್ದು, ಪದೇ ಪದೇ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆಗಳಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದರು.
ವಿದ್ಯಾರ್ಥಿಗಳು ವರ್ಷಗಟ್ಟಲೆ ಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದು, ಪೋಷಕರು ಕೂಡ ಅಪಾರ ಹಣ ಹಾಗೂ ಸಮಯ ವ್ಯಯಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪಗಳಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಕೇಂದ್ರ ಸರ್ಕಾರ ಸಮರ್ಪಕ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಈ ಸಂಬAಧ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.