3Kaala News

ಸುಭಾಷಿತ 

ಓಟದ ಬದುಕಿನಲ್ಲಿ ಎಲ್ಲವನ್ನು ತಕ್ಷಣವೇ ಪಡೆದುಕೊಳ್ಳಬೇಕೆಂಬ ನಿನ್ನ ಹಟವೇ ನಿನ್ನ ನೆಮ್ಮದಿಯನ್ನು ಕದಿಯುತ್ತದೆ. ಸಮಯಕ್ಕಿಂತ ಮುಂಚೆ, ಹಣೆ ಬರಕಿಂತ ಮುಂಚೆ, ಹೆಚ್ಚಿಗೆ ಯಾರಿಗೂ ಏನೂ ಸಿಗುವುದಿಲ್ಲ . ನಿನ್ನ ಪ್ರಯತ್ನ ನಿರಂತರವಾಗಿರಲಿ. ಆದರೆ, ಫಲಿತಾಂಶಕ್ಕಾಗಿ ಇಂದಿನ ಶಾಂತಿಯನ್ನು ಬಲಿ ಕೊಡಬೇಡ. ಭಗವಾನ್ ಶ್ರೀ ಕೃಷ್ಣ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿದ್ಯುತ್ ಇಲಾಖೆಯನ್ನು ಖಾಸಗಿಕರಣಗೊಳಿಸದಿರಲು ರೈತ ಸಂಘದ ರೈತ ಪರ್ವ ಒತ್ತಾಯ


ಮೈಸೂರು; ವಿದ್ಯುತ್ ಇಲಾಖೆಯನ್ನು ಖಾಸಗಿಕರಣಗೊಳಿಸಬಾರದು ರೈತ ಸಂಘದ ರೈತ ಪರ್ವದ ರಾಜ್ಯಾಧ್ಯಕ್ಷ ಅರುಣ್ ಕುಮಾರ್ ಟಿ.ವಿ. ಒತ್ತಾಯಿಸಿದರು.
ಗುರುವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ವಲಯವನ್ನು ಖಾಸಾಗೀಕರಣ ಗೊಳಿಸುವ ಹಾಗೂ ಟಾಟಾ ವಿದ್ಯುತ್ ಕಂಪನಿಗೆ ವಿದ್ಯುತ್ ವಿತರಣ ಜವಾಬ್ದಾರಿಯನ್ನು ಕರ್ನಾಟಕ ರಾಜ್ಯ ರೈತ ಸಂಘ ರೈತ ಪರ್ವ ಸಂಘಟನೆಯು ವಿರೋಧಿಸುತ್ತದೆ. ವಿದ್ಯುತ್ ಖಾಸಾಗಿಕರಣದಿಂದ ಜನಸಾಮಾನ್ಯರಿಗೆ ಹಾಗೂ ರೈತಾಪಿ ವರ್ಗದವರಿಗೆ ಅರ್ಥಿಕ ಸಂಕಷ್ಟಕ್ಕೆ ಎಡೆ ಮಾಡಿಕೊಡುತ್ತದೆ. ಉಚಿತ ಪಂಪ್‌ಸೆಟ್ ವಿದ್ಯುತ್ ಗೆ ಕತ್ತರಿ ಬೀಳುತ್ತದೆ ಹಾಗೂ ನಿಗಿದಿತ ವೇಳೆಗೆ ಬಿಲ್ ಪಾವತಿಸಿದಿದ್ದಲ್ಲಿ ಮರುಕ್ಷಣವೇ ವಿದ್ಯುತ್ ಕಡಿತಗೊಳಿಸುವ ಖಾಸಾಗಿಕರಣದಿಂದ ಜನ ಸಾಮಾನ್ಯರ ಬದುಕೆ ಕತ್ತಲುಮಯವಾಗಿರುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು..
ವಿದ್ಯುತ್ ಇಲಾಖೆಯಲ್ಲಿ ಕೆಲಸ ಮಾಡುವ ಸಾವಿರಾರು ಉದ್ಯೋಗಿಗಳನ್ನು ಬೀದಿಗೆ ತಳ್ಳಿ, ಹಲವಾರು ಕುಟುಂಬಗಳು ಸಂಕಷ್ಟಕ್ಕೆ ಈಡಾಗುತ್ತಾರೆ. ಜನ ಸಾಮಾನ್ಯರಿಗೆ ಹಾಗೂ ರೈತರಿಗೆ ಮರಣಶಾಸನವಾಗುವ ಈ ಅವೈಜ್ಞಾನಿಕ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ರೈತ ಪರ್ವದ ಪ್ರಧಾನ ಕಾರ್ಯದರ್ಶಿ ಡಾ. ಉಮಾಪತಿ, ರಾಜ್ಯ ಕಾರ್ಯದರ್ಶಿ ಚಾಮರಾಜ ಮಂಡಕಳ್ಳಿ, ಕಾರ್ಯಾಧ್ಯಕ್ಷ ಶ್ರೀಧರ್‌ನಾಯಕ್, ರಾಜ್ಯ ಉಪಾಧ್ಯಕ್ಷ ಭರತ್‌ಕಡಕೊಳ, ಸಂಚಾಲಕ ಮಂಚನಾಯಕ, ಮೈಸೂರು ಜಿಲ್ಲಾ ಕಾರ್ಯಾಧ್ಯಕ್ಷ ಶಿವಯೋಗಿ, ಮೀಸೆಮಂಜಣ್ಣ ಮುಂತಾದವರು ಹಾಜರಿದ್ದರು.