3Kaala News

ಸುಭಾಷಿತ 

ಓಟದ ಬದುಕಿನಲ್ಲಿ ಎಲ್ಲವನ್ನು ತಕ್ಷಣವೇ ಪಡೆದುಕೊಳ್ಳಬೇಕೆಂಬ ನಿನ್ನ ಹಟವೇ ನಿನ್ನ ನೆಮ್ಮದಿಯನ್ನು ಕದಿಯುತ್ತದೆ. ಸಮಯಕ್ಕಿಂತ ಮುಂಚೆ, ಹಣೆ ಬರಕಿಂತ ಮುಂಚೆ, ಹೆಚ್ಚಿಗೆ ಯಾರಿಗೂ ಏನೂ ಸಿಗುವುದಿಲ್ಲ . ನಿನ್ನ ಪ್ರಯತ್ನ ನಿರಂತರವಾಗಿರಲಿ. ಆದರೆ, ಫಲಿತಾಂಶಕ್ಕಾಗಿ ಇಂದಿನ ಶಾಂತಿಯನ್ನು ಬಲಿ ಕೊಡಬೇಡ. ಭಗವಾನ್ ಶ್ರೀ ಕೃಷ್ಣ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅಡ್ಡ ಮತದಾನ ಮಾಡಿರುವ ಪಕ್ಷದ್ರೋಹಿಗಳ ವಿರುದ್ಧ ತಕ್ಷಣವೇ ಕ್ರಮ ಆಗಬೇಕು; ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು; ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಪಕ್ಷದ್ರೋಹಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಕೆ.ಆರ್ ಕ್ಷೇತ್ರದ ಶಾಸಕ ಟಿ ಎಸ್ ಶ್ರೀವತ್ಸ ಆಗ್ರಹಿಸಿದರು.ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಗೂ ಕೂಡ ಮತ ಚಲಾವಣೆ ಮಾಡುವಂತೆ ಪಕ್ಷದಿಂದ ಸ್ಪಷ್ಟವಾದ ಆದೇಶವನ್ನು ನೀಡಲಾಗಿತ್ತು. ಆದರೆ, ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯ ವಿರುದ್ಧ ಅಡ್ಡ ಮತದಾನವನ್ನು ಮಾಡಲಾಗಿದೆ. ಯಾರ್ಯಾರು ಅಡ್ಡ ಮತದಾನ ಮಾಡಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷರು ಪತ್ತೆ ಹಚ್ಚಿದ್ದಾರೆ. ಈ…

Read More

ವಿಕಸಿತ ಭಾರತದ ಗುರಿ ತಲುಪಲು ಔಪಚಾರಿಕ ವಲಯದ ಉದ್ಯೋಗ ಸೃಷ್ಟಿ ಅಗತ್ಯ: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಮೈಸೂರು; ಭಾರತದ ಸಮಗ್ರ ಮತ್ತು ಸಂಪೂರ್ಣ ಆರ್ಥಿಕ ಅಭಿವೃದ್ಧಿಗಾಗಿ ಪ್ರತಿಯೊಬ್ಬರಿಗೂ ಉದ್ಯೋಗದ ಅವಕಾಶಗಳು ಸಿಗಬೇಕು ಹಾಗೂ ದೇಶದ ಬಹುಪಾಲು ಜನರನ್ನು ಅನೌಪಚಾರಿಕ ವಲಯದಿಂದ ಔಪಚಾರಿಕ ವಲಯಕ್ಕೆ ಫಾರ್ಮಲ್ ಸೆಕ್ಟರ್ ತರುವುದು ಇಂದಿನ ಅಗತ್ಯವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಶುಕ್ರವಾರ ನಗರದ ವಿದ್ಯಾವರ್ಧಕ ಕಾಲೇಜಿನಲ್ಲಿ ಪ್ರಾದೇಶಿಕ ಕಚೇರಿಯ ನೌಕರರ ಭವಿಷ್ಯನಿಧಿ ಸಂಸ್ಥೆಯ ವತಿಯಿಂದ ಮೂಲಕ ಆಯೋಜಿಸಲಾಗಿದ್ದ ಪ್ರಧಾನಮಂತ್ರಿ ವಿಕಸಿತ ಭಾರತ ರೋಜ್‍ಗಾರ್ ಯೋಜನೆ ಯ ಪೆÇ್ರೀತ್ಸಾಹ ಧನ ವಿತರಣ ಕಾರ್ಯಕ್ರಮವನ್ನು…

Read More

ವ್ಯಕ್ತಿಯಸಮಗ್ರವ್ಯಕ್ತಿತ್ವವಿಕಾಸಕ್ಕೆಸಾಂಸ್ಕøತಿಕಚಟುವಟಿಕೆಗಳುಅತ್ಯಗತ್ಯ; ಡಾ. ಸ್ಪರ್ಶಶೆಣೈ

ಮೈಸೂರು; ವ್ಯಕ್ತಿಯ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಸಾಂಸ್ಕøತಿಕ ಚಟುವಟಿಕೆಗಳು ಅತ್ಯಗತ್ಯ ಎಂದು ಖ್ಯಾತ ಭರತನಾಟ್ಯ ಕಲಾವಿದೆ ಡಾ. ಸ್ಪರ್ಶ ಶೆಣೈ ಹೇಳಿದರು. ಮೈಸೂರಿನ ವಿಜಯ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕøತಿಕ ವೇದಿಕೆಯನ್ನು  ಉದ್ಘಾಟಿಸಿ  ಮಾತನಾಡಿದ ಅವರು,  ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕಗಳ ಜ್ಞಾನವಲ್ಲ. ವ್ಯಕ್ತಿಯ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಸಾಂಸ್ಕøತಿಕ ಚಟುವಟಿಕೆಗಳು ಅತ್ಯಗತ್ಯ. ನಮ್ಮ ಸಂಸ್ಕøತಿ, ಪರಂಪರೆ, ಕಲೆ, ಸಾಹಿತ್ಯ, ಸಂಗೀತ, ನೃತ್ಯ ಮತ್ತು ನಾಟಕಗಳ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ, ಸೃಜನಶೀಲತೆ ಮತ್ತು ಸಾಮಾಜಿಕ…

Read More

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ರಾಜಪ್ರಭುತ್ತದೊಳಗೆ ಪ್ರಜಾ ಪ್ರಭುತ್ವ ತೋರಿಸಿದ ಮಹಾತ್ಮರು

ಮೈಸೂರು: ಇಂದು ನೆಪಮಾತ್ರಕ್ಕೆ ಪ್ರಜಾಪ್ರಭುತ್ವ ಇದೆ. ಅದರೊಳಗೆ ರಾಜಪ್ರಭುತ್ವ ಎದ್ದು ಕಾಣಿಸುತ್ತಿದೆ. ಆದರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ರಾಜಪ್ರಭುತ್ತದೊಳಗೆ ಪ್ರಜಾ ಪ್ರಭುತ್ವ ತೋರಿಸಿದ ಮಹಾತ್ಮರು ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಹೇಳಿದರು.ಕನ್ನಡ ಚಳವಳಿ ಕೇಂದ್ರ ಸಮಿತಿ ವತಿಯಿಂದ ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರುನಾಲ್ವಡಿ ಕೃಷ್ಣರಾಜ ಒಡೆಯರ್ ಅವರಂತಹ ಮಹನೀಯರನ್ನು ಪಡೆದ ಕನ್ನಡಿಗರು ಅದರಲ್ಲೂ ಮೈಸೂರಿಗರು ಅದೃಷ್ಟವಂತರು. ಆದರೆ…

Read More

ಸದ್ವಿದ್ಯಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

`ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಧ್ಯೇಯದಡಿ ಸಮೂಹ ಯೋಗಾಭ್ಯಾಸಮೈಸೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸದ್ವಿದ್ಯಾ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವತಿಯಿಂದ ಶುಕ್ರವಾರ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕಾಲೇಜಿನ ಕೈಲಾಸಂ ಮಂಟಪದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.“ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ” ಎಂಬ ಧ್ಯೇಯ ವಾಕ್ಯದಡಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಉತ್ಸಾಹದಿಂದ ಪಾಲ್ಗೊಂಡರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವೈ.ಆರ್. ರಮೇಶ್ ಮಾತನಾಡಿ, ಯೋಗವು ಭಾರತೀಯ ಸಂಸ್ಕೃತಿಯ ಅಮೂಲ್ಯ…

Read More

ನೀಟ್ ಮರು ಪರೀಕ್ಷೆ ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ; ಐಶ್ವರ್ಯ ಆರ್

ಮೈಸೂರು: ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೀಟ್ ಪರೀಕ್ಷೆ ಕುರಿತು ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೀಟ್ ಪರೀಕ್ಷೆಯು ಜೂನ್ 21.ರಂದು ಮೈಸೂರು ನಗರದಲ್ಲಿ ಒಟ್ಟು 21 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. 7886 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಎಂ.ಜಿ.ಕೊಪ್ಪಲು ಸರ್ಕಾರಿ…

Read More

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವ ವೈಮನಸ್ಸು ಇಲ್ಲ; ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವ ವೈಮನಸ್ಸು ಇಲ್ಲ. ಅವರು ಸದಾ ನನ್ನೊಂದಿಗೆ ಇರುತ್ತಾರೆ,ಮುಂದೆಯೂ ಇರುತ್ತಾರೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.ಶುಕ್ರವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಮ್ಮ ಪರವಾಗಿಲ್ಲ ಎಂದು ಹೇಳಬಾರದು. ನನ್ನ ಪರವಾಗಿ ಬಲವಾಗಿ ವಾದ ಮಾಡಿಲ್ಲ ಎನ್ನುವುದು ಸರಿಯಲ್ಲ. ಡಾ.ಯತೀಂದ್ರ ಕೂಡ ನಮ್ಮ ಮಗನಿದ್ದಂತೆ. ನಾನು-ಸಿದ್ದರಾಮಯ್ಯ 40 ವರ್ಷಗಳ ಕಾಲ ಜತೆಯಾಗಿದ್ದಂತೆ ಡಾ.ಯತೀಂದ್ರ ಹಾಗೂ ಸುನಿಲ್ ಬೋಸ್ ಜತೆಯಾಗಿದ್ದಾರೆ. ನನ್ನ…

Read More

ಅಗ್ನಿ ಸುರಕ್ಷತೆ ಇಲ್ಲದೆ ತಾತ್ಕಾಲಿಕ ಕಟ್ಟಡದಲ್ಲಿ ರೆಸ್ಟೋರೆಂಟ್ ನಡೆಸುತ್ತಿದ್ದರೆ ತೆರವುಗೊಳಿಸಿ: ಲಕ್ಷ್ಮಿಕಾಂತ ರೆಡ್ಡಿ ಜಿ

ಮೈಸೂರು; ನಗರದ ದಟ್ಟಗಳ್ಳಿಯ ಬಳಿ ರೆಸ್ಟೋರೆಂಟ್ ನಲ್ಲಿ ಇತ್ತೀಚೆಗೆ ನಡೆದ ಅಗ್ನಿ ದುರಂತವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲೆಯಲ್ಲಿ ಎರಡು ಅಥವಾ ಮೂರನೇ ಅಂತಸ್ತಿನಲ್ಲಿ ತಾತ್ಕಾಲಿಕವಾಗಿ ಕಟ್ಟಡವನ್ನು ನಿರ್ಮಿಸಿಕೊಂಡು, ಅಗ್ನಿ ಸುರಕ್ಷತೆ ಕ್ರಮ ಕೈಗೊಳ್ಳದೇ ಬಾರ್ ಅಂಡ್ ರೆಸ್ಟೋರೆಂಟ್ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಂಡು ಒಂದು ವಾರದೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು.ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಗ್ನಿ ದುರಂತಗಳು ಹೇಳಿ…

Read More

ಆಧ್ಯಾತ್ಮಿಕ ಮನಸ್ಸಿಗೆ ನೆಮ್ಮದಿ ಸಿಗಲಿದೆ ತಹಸೀಲ್ದಾರ್ ಬಿ ಗಿರಿಜಾ.

ವರದಿ ಜಿ ಬಂಗಾರು ಚಾಮರಾಜನಗರ ;   ದೇವಸ್ಥಾನಗಳಿಗ ಭೇಟಿ ನೀಡಿ ದೇವರ ದರ್ಶನ ಪಡೆದರೆ ಮನಸ್ಸಿಗೆ ನೆಮ್ಮದಿ ಸಿಗಲಿದೆ ಎಂದು ತಹಶೀಲ್ದಾರ್ ಬಿ ಗಿರಿಜಾ ತಿಳಿಸಿದರು ಇತಿಹಾಸ ಪ್ರಸಿದ್ಧವಾಗಿರುವ ಶ್ರೀ ಚಾಮರಾಜೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಗಿರಿಜಾ ಕಲ್ಯಾಣ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಆಧ್ಯಾತ್ಮಿಕ ದಿಂದ ಮನಸ್ಸಿಗೆ ಸುಖ ಶಾಂತಿ ನೆಮ್ಮದಿ ಸಿಗಲಿದೆ ಜೂನ್ 18ರಿಂದ. ಜೂನ್ 23 ವರೆಗೆ ಧಾರ್ಮಿಕ ಕಾರ್ಯಕ್ರಮಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ವಿಶೇಷ ಹೋಮ ಪೂಜಾ ಕಾರ್ಯಕ್ರಮಗಳು ನಡೆಯಲಿದೆ ಭಕ್ತಾದಿಗಳು…

Read More