3Kaala News

ಸುಭಾಷಿತ 

ಓಟದ ಬದುಕಿನಲ್ಲಿ ಎಲ್ಲವನ್ನು ತಕ್ಷಣವೇ ಪಡೆದುಕೊಳ್ಳಬೇಕೆಂಬ ನಿನ್ನ ಹಟವೇ ನಿನ್ನ ನೆಮ್ಮದಿಯನ್ನು ಕದಿಯುತ್ತದೆ. ಸಮಯಕ್ಕಿಂತ ಮುಂಚೆ, ಹಣೆ ಬರಕಿಂತ ಮುಂಚೆ, ಹೆಚ್ಚಿಗೆ ಯಾರಿಗೂ ಏನೂ ಸಿಗುವುದಿಲ್ಲ . ನಿನ್ನ ಪ್ರಯತ್ನ ನಿರಂತರವಾಗಿರಲಿ. ಆದರೆ, ಫಲಿತಾಂಶಕ್ಕಾಗಿ ಇಂದಿನ ಶಾಂತಿಯನ್ನು ಬಲಿ ಕೊಡಬೇಡ. ಭಗವಾನ್ ಶ್ರೀ ಕೃಷ್ಣ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವ್ಯಕ್ತಿಯಸಮಗ್ರವ್ಯಕ್ತಿತ್ವವಿಕಾಸಕ್ಕೆಸಾಂಸ್ಕøತಿಕಚಟುವಟಿಕೆಗಳುಅತ್ಯಗತ್ಯ; ಡಾ. ಸ್ಪರ್ಶಶೆಣೈ

ಮೈಸೂರು; ವ್ಯಕ್ತಿಯ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಸಾಂಸ್ಕøತಿಕ ಚಟುವಟಿಕೆಗಳು ಅತ್ಯಗತ್ಯ ಎಂದು ಖ್ಯಾತ ಭರತನಾಟ್ಯ ಕಲಾವಿದೆ ಡಾ. ಸ್ಪರ್ಶ ಶೆಣೈ ಹೇಳಿದರು.

ಮೈಸೂರಿನ ವಿಜಯ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕøತಿಕ ವೇದಿಕೆಯನ್ನು  ಉದ್ಘಾಟಿಸಿ  ಮಾತನಾಡಿದ ಅವರು,  ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕಗಳ ಜ್ಞಾನವಲ್ಲ. ವ್ಯಕ್ತಿಯ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಸಾಂಸ್ಕøತಿಕ ಚಟುವಟಿಕೆಗಳು ಅತ್ಯಗತ್ಯ. ನಮ್ಮ ಸಂಸ್ಕøತಿ, ಪರಂಪರೆ, ಕಲೆ, ಸಾಹಿತ್ಯ, ಸಂಗೀತ, ನೃತ್ಯ ಮತ್ತು ನಾಟಕಗಳ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ, ಸೃಜನಶೀಲತೆ ಮತ್ತು ಸಾಮಾಜಿಕ ಮೌಲ್ಯಗಳು ಬೆಳೆಯುತ್ತವೆ ಎಂದು ಹೇಳಿದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಾಂಸ್ಕøತಿಕ ವೇದಿಕೆಗಳು ಉತ್ತಮವಾದ ಅವಕಾಶಗಳನ್ನು ಒದಗಿಸುತ್ತವೆ. ಈ ಅವಕಾಶಗಳನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬೆಳೆಸಿಕೊಳ್ಳಬೇಕೆಂದು ತಿಳಿಸಿದರು. ನಮ್ಮ ಭಾರತೀಯ ಸಂಸ್ಕøತಿ ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿದೆ. ವೇದಗಳು, ಉಪನಿಷತ್ತುಗಳು ಮತ್ತು ನಮ್ಮ ಜನಪದ ಪರಂಪರೆಗಳು ವಿಶ್ವಕ್ಕೆ ಅನೇಕ ರೀತಿಯಲ್ಲಿ ಮಾರ್ಗದರ್ಶನ ನೀಡಿದೆ. ಇವುಗಳ ಮೌಲ್ಯಗಳನ್ನು ಯುವಜನತೆಗೆ ತಲುಪಿಸುವ ಜವಾಬ್ದಾರಿ ಸಾಂಸ್ಕøತಿಕ ವೇದಿಕೆ ಮೇಲಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿಜಯ ವಿಠಲ ವಿದ್ಯಾಸಂಸ್ಥೆಗಳ ಗೌರವ ಕಾರ್ಯದರ್ಶಿ ಸಿಎ ವಿಶ್ವನಾಥ.ಎ ಮಾತನಾಡಿ,  ನಮ್ಮಲ್ಲಿರುವ ಸುಪ್ತವಾದ ಪ್ರತಿಭೆಯನ್ನು ಅವಕಾಶ ಸಿಕ್ಕಾಗ ಪ್ರಕಾಶಗೊಳಿಸಿ, ಉನ್ನತ ಮಟ್ಟದಲ್ಲಿ ಸಾಧನೆ ಮಾಡಲು ದೃಢ ಸಂಕಲ್ಪ ಮಾಡಬೇಕು. ನಮ್ಮ  ಪ್ರತಿಭೆಯು ಅರಳುವಂತೆ ಮಾಡುವಲ್ಲಿ ಕಾರ್ಯತತ್ಪರರಾಗಬೇಕು ಎಂದು ಹೇಳಿದರು.

ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜ್ಞಾನ ಮತ್ತು ಕೌಶಲ್ಯ ಪರಸ್ಪರ ಪೂರಕವಾಗಿದ್ದು ವಿದ್ಯಾರ್ಥಿಗಳಿಗೆ ಇವೆರಡರ ಅಗತ್ಯತೆ ಇದೆ. ಸಂಸ್ಕøತಿಯು ಒಬ್ಬ ವಿದ್ಯಾರ್ಥಿಯ ವ್ಯಕ್ತಿತ್ವವನ್ನು ರೂಪಿಸುತ್ತದೆ. ಆದ್ದರಿಂದ ವಿದ್ಯಾಭ್ಯಾಸದ ಜೊತೆಗೆ ಸಂಸ್ಕøತಿಯನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದರು. 

ಕಾಲೇಜಿನ ಪ್ರಾಂಶುಪಾಲ ಹೆಚ್. ಸತ್ಯಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿ ವೇದಿಕೆಯ ಉದ್ದೇಶ, ಮಹತ್ವ ಮತ್ತು ಕಾರ್ಯಚಟುವಟಿಕೆಗಳನ್ನು ವಿವರಿಸಿ, ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿಗಳ ಪ್ರತಿಭೆಯನ್ನು ಜಾಗೃತಗೊಳಿಸಿ ಅದನ್ನು ಪೋಷಿಸಲು ಸಾಂಸ್ಕøತಿಕ ವೇದಿಕೆಯು ಸಹಕಾರಿ. ಲಲಿತಕಲೆಗಳಲ್ಲಿ ಆಸಕ್ತಿ ತೋರುವುದರಿಂದ ಏಕಾಗ್ರತೆ ಹೆಚ್ಚಿ ಶೈಕ್ಷಣಿಕವಾಗಿ ಉತ್ತಮ ಸಾಧನೆಗಳನ್ನು ಮಾಡಲು ಸಾಧ್ಯವಾಗುತ್ತದೆ. ಸಾಧಕರ ಸಾಧನೆಗಳು ನಮ್ಮೆಲ್ಲರಿಗೂ ಪ್ರೇರಣೆಯಾಗಬೇಕು ಎಂದರು.

ಗಾಯತ್ರಿ ಯೋಗೇಶ್, ಶ್ರೀವಿದ್ಯಾ, ಇಂಚರ , ತನಿಷ್ಕಾ ಮತ್ತು ನಿಧಿಶ್ರೀ ಮತ್ತಿತರರು ಹಾಜರಿದ್ದರು.