Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರ ಅಡ್ಡಮತದಾನ ಪ್ರಕರಣವನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ; ಸಂಸದ ಯದುವೀರ್

ಮೈಸೂರು:ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರ ಅಡ್ಡಮತದಾನ ಪ್ರಕರಣವನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಶನಿವಾರ ಮೈಸೂರಿನ ಚಾಮರಾಜಪುರಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಶಾಸಕರ ಅಡ್ಡ ಮತದಾನಕ್ಕೂ
ಪಕ್ಷದ ನಾಯಕತ್ವಕ್ಕೂ ಯಾವುದೇ ಸಂಬಂಧವಿಲ್ಲ. ಈ ಬೆಳವಣಿಗೆಯು ನಾಯಕತ್ವದ ಮೇಲೆ ಯಾವ ಪರಿಣಾಮವನ್ನೂ ಬೀರುವುದಿಲ್ಲ. ಜೆಡಿಎಸ್-ಬಿಜೆಪಿ ಮೈತ್ರಿ ಮೇಲೂ ಕೆಟ್ಟ ಪರಿಣಾಮ ಉಂಟಾಗುವುದಿಲ್ಲ’ ಎಂದು ಹೇಳಿದರು.
ಇಡೀ ಪ್ರಕರಣವನ್ನು ಪಕ್ಷ ಗಂಭೀರವಾಗಿ ತೆಗೆದುಕೊಂಡಿದೆ. ಅಡ್ಡಮತದಾನ ಮಾಡಿದವರನ್ನು ಪತ್ತೆ ಹಚ್ಚುತ್ತೇವೆ. ಅದಕ್ಕೂ ಪಕ್ಷದಲ್ಲಿ ವ್ಯವಸ್ಥೆ ಇದೆ. ಅದರಂತೆ ನಡೆಯುತ್ತದೆ’ ಎಂದರು.
ಇವೆಲ್ಲವೂ ಸಹಜ ಹಾಗೂ ರಾಜಕಾರಣದಲ್ಲಿ ನಡೆಯುವಂಥವೇ. ಇದರಲ್ಲಿ ಮುಜುಗರ ಪಡುವಂಥದ್ದು ಅಥವಾ ಹಿನ್ನಡೆ ಎನ್ನುವುದು ಇರುವುದಿಲ್ಲ’ ಎಂದರು.
ಆರ್‍ಎಸ್‍ಎಸ್ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸುತ್ತಿರುವ ಕುರಿತು ಪ್ರತಿಕ್ರಿಯಿಸಿ, ಅವರ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯ ಇಲ್ಲ. ರಾಜಕಾರಣಕ್ಕಾಗಿ ಏನೇನೋ ಮಾತನಾಡುತ್ತಿದ್ದಾರೆ, ಮಾತನಾಡಲಿ. ಗೃಹ ಸಚಿವರಾಗಿ ಪ್ರಶ್ನೆ ಕೇಳುವ ಹಕ್ಕಿದೆ. ಆದರೆ, ಎಲ್ಲದಕ್ಕೂ ಉತ್ತರ ಕೊಡುವ ಅವಶ್ಯಕತೆ ಇಲ್ಲ’ ಎಂದು ತಿರುಗೇಟು ನೀಡಿದರು.