
ಮೈಸೂರು; ರಾಜ್ಯ ಕಾಂಗ್ರೆಸ್ ಸರ್ಕಾರವು ಎಸ್ ಟಿ ಸಮುದಾಯಕ್ಕೆ ಮೀಸಲಾತಿ ವಿಚಾರದಲ್ಲಿ ಮಲತಾಯಿ ಧೋರಣೆ ತೋರುತ್ತ ಬಂದಿದ್ದು, ಎಸ್ ಟಿ ಸಮುದಾಯಕ್ಕೆ ಸಂವಿಧಾನ ಬದ್ಧ ಶೇ 7ರ ಮೀಸಲಾತಿ ಜಾರಿಯಾಗಲೇ ಬೇಕೆಂದು ರಾಜ್ಯ ಬಿಜೆಪಿ ಎಸ್‍ಟಿ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಸಮಾವೇಶವನ್ನು ಹಮ್ಮಿಕೊಂಡಿದೆ. ಅದರಂತೆ ಮೈಸೂರಿನಲ್ಲಿಯೂ ಜುಲೈ ರಂದು ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶವನ್ನು ಆಯೋಜಿಸಿದೆ. ಅದರ ಹಿನ್ನೆಲೆಯಲ್ಲಿ ಮೈಸೂರು ನಗರ ಹಾಗೂ ಗ್ರಾಮಾಂತರ ಎಸ್ ಟಿ ಮೋರ್ಚಾ ಪದಾಧಿಕಾರಿಗಳ ಮೈಸೂರಿನ ಬಿಜೆಪಿ ಪಕ್ಷದ ಕಛೇರಿಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಯಿತು.
ಸಭೆಯಲ್ಲಿ ಮಾಜಿ ವಿಧಾನ ಪರಿಷತ್ತಿನ ಸದಸ್ಯ ಸಿದ್ದರಾಜು ಹಾಗೂ ಎಂ ಅಪ್ಪಣ್ಣ ಮಾತನಾಡಿ, ಸಮಾವೇಶದಲ್ಲಿ ನಮ್ಮ ಸಮಾಜದ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ,ಶ್ರೀರಾಮುಲು,ಬಾಲಚಂದ್ರ ಜಾರಕಿಹೊಳಿ, ವಿಧಾನಪರಿಷತ್ ಸದಸ್ಯ ಶಾಂತರಾಮ್ ಸಿದ್ಧಿ,ಎಸ್ ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನಮಂತು ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ. ಮೈಸೂರು ನಗರ ಗ್ರಾಮಾಂತರ ಪ್ರದೇಶದ ಒಂದು ಸಾವಿರ ಪಕ್ಷದ ಪ್ರಮುಖರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದರು.
ಮಾಜಿ ಮೇಯರ್ ಶಿವಕುಮಾರ್ ಮಾತನಾಡಿ, ರಾಜ್ಯ ಸರ್ಕಾರದ ಪ.ಪಂಗಡದವರಿಗೆ ಉದ್ಯೋಗ ಶಿಕ್ಷಣ ಕ್ಷೇತ್ರದಲ್ಲಿ ಶೇ 7 ರಷ್ಟು ಮೀಸಲು ನೀಡದೆ, ಕೇವಲ ಶೇ 3 ರಷ್ಟು ನೀಡಿ ಅನ್ಯಾಯ ಮಾಡಿದೆ. ಇದರಿಂದ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಉದ್ಯೋಗ, ಶೈಕ್ಷಣಿಕ ಕ್ಷೇತ್ರದಲ್ಲಿ ನಮ್ಮ ಸಮುದಾಯದ ಯುವಜನರು ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ. ರಾಜ್ಯ ಸರ್ಕಾರದ ಮೀಸಲು ನೀತಿಯ ವಿರುದ್ಧ ರಾಜ್ಯಾದ್ಯಂತ ಜಾಗೃತಿ ಸಮಾವೇಶ ಮಾಡುವ ಮೂಲಕ ಜನಜಾಗೃತಿ ಮೂಡಿಸುವ ಮೂಲಕ ಎಚ್ಚರಿಕೆಯ ಸಂದೇಶವನ್ನು ನೀಡುತ್ತಿದೆ ಎಂದರು.
ಸಭೆಯಲ್ಲಿ ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ಕುಂಬ್ರಹಳ್ಳಿ ಎನ್.ಸುಬ್ಬಣ್ಣ,ಮಾಜಿ ಜಿ.ಪಂ ಸದಸ್ಯ ಬನ್ನೂರಿನ ಲೋಕೇಶ್ ನಾಯಕ, ಎಸ್ ಟಿ ಮೋರ್ಚಾ ನಗರ ಅಧ್ಯಕ್ಷ ಪಡುವಾರಹಳ್ಳಿ ಎಂ ರಾಮಕೃಷ್ಣ,ಪ್ರಧಾನ ಕಾರ್ಯದರ್ಶಿ ಕೆ ನಾಗೇಶ್ ನಾಯಕ,ಕೃಷ್ಣ ಕುಮಾರ್, ಗ್ರಾಮಾಂತರ ಅಧ್ಯಕ್ಷ ಎಸ್ ಎನ್ ನವೀನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಹುಲ್ಲಹಳ್ಳಿ ನಾಗೇಂದ್ರ, ಡಿ.ಮಹೇಶ್ ನಾಯಕ, ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ಗುರುವಿನಾಯಕ, ಎಂ. ಮಹೇಶ್,ಮರಿಸ್ವಾಮಿನಾಯಕ, ಸಿ.ಎನ್ ಚಂದ್ರು,ನಂದೀಶ್ ನಾಯಕ,ಉಮೇಶ್, ವಕೀಲರಾದ ಮಂಜುನಾಥ, ಧನು,ರಾಮೇನಹಳ್ಳಿ ಮಹದೇವನಾಯಕ,ತ್ಯಾಗರಾಜ್,ರವಿಕುಮಾರ್,ವೀರನಗೆರೆ ಶಿವಕುಮಾರ್ ಸೇರಿದಂತೆ ಹಲವರಿದ್ದರು.